ಬಾಹ್ಯಾಕಾಶ ಕ್ಷೇತ್ರದಲ್ಲಿ ಇದುವರೆಗೂ ಕೂಡ ಸರ್ಕಾರವೇ ಬಂಡವಾಳವನ್ನು ಹಾಕುತ್ತಿತ್ತು ಇದರಿಂದಾಗಿ ಭಾರತೀಯ ಬಾಹ್ಯಾಕಾಶ ಸಂಸ್ಥೆ ಸರ್ಕಾರದ ಸೂಚನೆಗಳನ್ವಯ ಕಾರ್ಯಗಳನ್ನು ನಿರ್ವಹಿಸಿಕೊಂಡು ಬರಲಾಗುತ್ತಿತ್ತು ಆದರೆ ಆದರೆ ಇನ್ನು ಮುಂದೆ ವಿಶ್ವದ ಬೇರೆ ಬೇರೆ ದೇಶಗಳಂತೆ ಬಾಹ್ಯಾಕಾಶ ಸೇವೆಯಲ್ಲಿ ಖಾಸಗಿಯವರೂ ಕೂಡ ಹಣವನ್ನು ಹೂಡಿಕೆಯನ್ನು ಮಾಡಬಹುದು ಎಂದು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯ  ತಿಳಿಸಿದೆ.

 

ಹೌದು ಬಾಹ್ಯಕಾಶ ಕ್ಷೇತ್ರದಲ್ಲಿ ವಿಶ್ವದ ಇತರೇ ರಾಷ್ಟ್ರಗಳಂತೆ ಭಾರತದಲ್ಲೂ ಇನ್ಮುಂದೆ ಖಾಸಗಿ ಹೂಡಿಕೆಗೆ ಅವಕಾಶ ನೀಡುವ ಮಹತ್ವದ ಸುಧಾರಣಾ ನೀತಿಯನ್ನು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆ ಪ್ರಕಟಿಸಿದೆ. ಈ ಕುರಿತಂತೆ ಇಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಇಸ್ರೋ ಅಧ್ಯಕ್ಷ ಡಾ.ಕೆ.ಶಿವನ್, ರಾಕೆಟ್ ನಿರ್ಮಾಣ, ಉಪಗ್ರಹ ನಿರ್ಮಾಣ, ಉಡಾವಣೆ ಕಾರ್ಯಗಳನ್ನು ಮುಂದಿನ ದಿನಗಳಲ್ಲಿ ಖಾಸಗಿಯವರು ಕೈಗೊಳ್ಳಬಹುದಾಗಿದೆ. ಇದಕ್ಕೆ ಅಗತ್ಯ ನೆರವು, ತಂತ್ರಜ್ಞಾನವನ್ನು ಇಸ್ರೋ ಒದಗಿಸಲಿದೆ ಎಂದು ಸ್ಪಷ್ಟಪಡಿಸಿದರು. ಬಾಹ್ಯಕಾಶ ವಿಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕವಾಗಿ ಗುರುತಿಸಿಕೊಳ್ಳಲು ಮತ್ತು ಕಡಿಮೆ ವೆಚ್ಚದಲ್ಲಿ ಈ ಚಟುವಟಿಕೆಗಳನ್ನು ನಡೆಸಬಹುದಾಗಿದೆ.

 

 

ಈ ಮೂಲಕ ಬಾಹ್ಯಾಕಾಶ ವಿಜ್ಞಾನ ಮೂಲದ ಆದಾಯ ಗಣನೀಯ ಪ್ರಮಾಣದಲ್ಲಿ ಹೆಚ್ಚಿಸಲು ಸಾಧ್ಯವಿದೆ. ಖಾಸಗಿಯವರು ಇಲ್ಲಿಯವರೆಗೆ ಇಸ್ರೋಗೆ ಬಿಡಿ ಭಾಗಗಳನ್ನು ತಯಾರಿಸುತ್ತಿದ್ದರು. ಮುಂದಿನ ದಿನಗಳಲ್ಲಿ ಬಾಹ್ಯಾಕಾಶ ಸಂಸ್ಥೆಗೆ ಸಮಾನವಾಗಿ ಬೆಳೆಯುವುದಕ್ಕೆ ಅವಕಾಶ ನೀಡುವ ಮಹತ್ವದ ಸುಧಾರಣಾ ಕ್ರಮ ಇದಾಗಿದೆ. ಇದರಿಂದ ದೇಶದಲ್ಲಿ ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನ ಅಭಿವೃದ್ದಿಯ ಹೊಸ ಯುಗವೇ ಸೃಷ್ಟಿಯಾಗಲಿದೆ ಎಂದು ಕೆ ಶಿವನ್ ತಿಳಿಸಿದ್ದಾರೆ.

 

 

ರಾಕೆಟ್‌ ನಿರ್ಮಾಣ, ರಾಕೆಟ್‌ ಉಡ್ಡಯನ, ಉಪಗ್ರಹ ನಿರ್ಮಾಣ ಸೇರಿದಂತೆ ಇತರೇ ಕಾರ್ಯಗಳನ್ನು ಖಾಸಗಿಯವರು ನೀಡಬಹುದಾಗಿದ್ದು, ಈ ಮೂಲಕ ಸಂಶೋಧನೆ, ಅಭಿವೃದ್ಧಿಯಲ್ಲೂ ಭಾಗಿಯಾಗಬಹುದು. ಇಸ್ರೋನ ಈ ಸುಧಾರಣಾ ನೀತಿಯಿಂದಾಗಿದೇಶದಲ್ಲಿ ಬಾಹ್ಯಾಕಾಶ ಉದ್ಯಮ ಬೆಳೆಯುವುದರ ಜೊತೆಗೆ ಅಪಾರ ಪ್ರಮಾಣದಲ್ಲಿ ಉದ್ಯೋಗವೂ ಸೃಷ್ಟಿಯಾಗಲಿದೆ ಎಂದರು.

 

 

ಸುಧಾರಣಾ ಕ್ರಮವಾಗಿ ಹೊಸ ನ್ಯಾವಿಗೇಷನ್‌ ನೀತಿ ಜಾರಿ ಮಾಡಲಾಗುವುದು. ದೂರಸಂವೇದಿ ನೀತಿ ಮತ್ತು ಉಪ್ರಗ್ರಹ ನೀತಿಯನ್ನೂ ಪರಿಷ್ಕರಿಸಲಾಗುವುದು. ಖಾಸಗಿ ಕಂಪನಿಗಳು ಬೇಡಿಕೆ ಪೂರೈಕೆ ಮಾದರಿಗೆ ಸೀಮಿತವಾಗಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ಶಿವನ್ ಹೇಳಿದರು.ಖಾಸಗಿ ಚಟುವಟಿಕೆಗಳು ಸ್ವಾಯತ್ತವಾಗಿ ಕಾರ್ಯ ನಿರ್ವಹಿಸುತ್ತಿದ್ದು, ಈ ಸಂಸ್ಥೆಗಳಿಗೆ ಇಸ್ರೊ ನೋಡಲ್‌ ಏಜೆನ್ಸಿಯಾಗಿರುತ್ತದೆ. ಇದಕ್ಕಾಗಿಯೇ 'ಇನ್‌ಸ್ಪೇಸ್‌' ಎಂಬ ಪ್ರತ್ಯೇಕ ಸಂಸ್ಥೆ ಇರಲಿದ್ದು, 'ಇನ್‌ಸ್ಪೇಸ್‌' ಇನ್ನು 6 ತಿಂಗಳಲ್ಲಿ ಸ್ಥಾಪನೆ ಆಗಲಿದೆ. ಇದರಲ್ಲಿ ಖಾಸಗಿ ಉದ್ಯಮಗಳ ಪ್ರತಿನಿಧಿಗಳು, ಇಸ್ರೊ ಮತ್ತು ಸರ್ಕಾರದ ಪ್ರತಿನಿಧಿಗಳೂ ಇರುತ್ತಾರೆ. ಇನ್‌ಸ್ಪೇಸ್‌ ಸ್ವತಂತ್ರ ನಿರ್ಧಾರವನ್ನು ತೆಗೆದುಕೊಳ್ಳುತ್ತದೆ ಎಂದು ವಿವರಿಸಿದರು

Find out more: