ಬಹುನಿರೀಕ್ಷೆಯ ಫಿಲ್ಮ್ ಸಿಟಿಯನ್ನು ರೋರಿಚ್ ಎಸ್ವೇಟಿನ ಬದಲು ಹೆಸರಘಟ್ಟದಲ್ಲಿಯೇ ನಿರ್ಮಾಣಕ್ಕೆ ಹೆಸರಘಟ್ಟದಲ್ಲಿ ಪಶುಸಂಗೋಪನಾ ಇಲಾಖೆಯ 450 ಎಕರೆ ಭೂಮಿ ಇದ್ದು, ಅದರಲ್ಲಿ 150 ಎಕರೆಯನ್ನು ನೀಡಲಾಗುವುದು. ಅಲ್ಲಿ ಫಿಲ್ಮ್ ಸಿಟಿಗೆ ಸಂಪರ್ಕಕ್ಕೆ ಬೇಕಾದ ರಸ್ತೆಯೊಂದನ್ನು ಮಾಡಿ ಆ ಜಾಗವನ್ನು ಫಿಲ್ಮ್ ಸಿಟಿಗೆ ಹಸ್ತಾಂತರ ಮಾಡಲಾಗುವುದು. ಈಗಾಗಲೇ ಇದಕ್ಕೆ ಸಂಬಂಧಿಸಿದ ಎಲ್ಲ ಪ್ರಕ್ರಿಯೆಗಳು ನಡೆಯುತ್ತಿವೆ. ಆದಷ್ಟು ತ್ವರಿತವಾಗಿ ಫಿಲ್ಮ್ ಸಿಟಿ ನಿರ್ಮಾಣಕ್ಕೆ ಚಾಲನೆ ನೀಡಲಾಗುವುದು ಎಂದು ಹೇಳಿದರು


ಬೆಂಗಳೂರಿನಲ್ಲಿ ಗುರುವಾರ ಡಾ. ಶಿವರಾಜ್ ಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಕನ್ನಡ ಚಿತ್ರರಂಗದ ನಿಯೋಗದ ಜತೆ ಮಾತುಕತೆ ನಡೆಸಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ರೋರಿಚ್ ಎಸ್ಟೇಟಿನಲ್ಲಿ ಪರಿಸರಾತ್ಮಕ ಸಮಸ್ಯೆಗಳು ಎದುರಾದವು. ಹೀಗಾಗಿ ಅಲ್ಲಿ ಈ ಯೋಜನೆ ಸಾಧ್ಯವಾಗುತ್ತಿಲ್ಲ ಎಂ ಎಂದು ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದರು.




ಕೋವಿಡ್-19 ಕಾರಣದಿಂದ ಚಿತ್ರರಂಗ ಎದುರಿಸುತ್ತಿರವ ಸಮಸ್ಯೆಗಳ ಬಗ್ಗೆ ಶಿವರಾಜ್ ಕುಮಾರ್ ಅವರ ಜತೆ ವಿವರವಾಗಿ ಚರ್ಚೆ ಮಾಡಲಾಗಿದೆ. ಮುಂದಿನ ವಾರ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಸಮಸ್ಯೆಗಳ ಪರಿಹಾರದ ಬಗ್ಗೆ ಮಾತುಕತೆ ನಡೆಸಲಾಗುವುದು. ಅದಕ್ಕೆ ಪೂರ್ವಭಾವಿಯಾಗಿ ಇವತ್ತು ಸಭೆ ನಡೆದಿದೆ. ಸಿಎಂ ಅವರ ಜತೆ ಮಾತುಕತೆಯ ನಂತರ ಚಿತ್ರರಂಗದ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಡಿಸಿಎಂ ಹೇಳಿದರು.




ಚಿತ್ರರಂಗದಲ್ಲಿ ಅಸಂಘಟಿತ ದಿನಗೂಲಿ ನೌಕರರ ಹಿತ ಕಾಯುವ ಬಗ್ಗೆ ಆದಷ್ಟು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು. ಅವರನ್ನು ಕಾರ್ಮಿಕ ಇಲಾಖೆ ಅಡಿಗೆ ತಂದು ಸರಕಾರದ ಸವಲತ್ತುಗಳು ಅವರಿಗೂ ಸಿಗುವಂತೆ ನೋಡಿಕೊಳ್ಳಲಾಗುವುದು. ಪ್ರದರ್ಶಕ ವಲಯದಲ್ಲಿ ಕೆಲಸ ಮಾಡುತ್ತಿರುವ ದಿನಗೂಲಿ ಕಾರ್ಮಿಕರಿಗೂ ಸರಕಾರ ಸಹಾಯ ಹಸ್ತ ಚಾಚಲಿದೆ. ಈ ಬಗ್ಗೆ ಸಂಬಂಧಪಟ್ಟವರ ಜತೆ ಆದಷ್ಟು ಬೇಗ ಚರ್ಚೆ ಮಾಡಲಾಗುವುದು.




ಇದರ ಜತಗೆ ಸಕಾಲದಲ್ಲಿ ಸಬ್ಸಿಡಿ ಸಿಗುವಂತೆ ಮಾಡುವುದು, ಆ ಸಬ್ಸಿಡಿ ಪ್ರಮಾಣವನ್ನು ಹೆಚ್ಚಿಸುವುದು, ಜಿಎಸ್ ಟಿ ವಿಚಾರದಲ್ಲಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಹೋಗಲಾಡಿಸುವುದು ಹಾಗೂ ಸಿನಿಮಾ ನಿರ್ಮಾಣಕ್ಕೆ ಪೂರಕವಾದ ಉತ್ತಮ ಮೂಲಸೌಕರ್ಯಗಳನ್ನು ಒದಗಿಸುವುದೂ ಸೇರಿದಂತೆ ಅನೇಕ ಸಂಗತಿಗಳ ಬಗ್ಗೆ ಮಾತುಕತೆಯಾಗಿದ್ದು, ಮುಖ್ಯಮಂತ್ರಿಗಳ ಜತೆ ಸಭೆ ನಡೆದ ನಂತರ ಇವೆಲ್ಲಕ್ಕೂ ಪರಿಹಾರ ಸಿಗಲಿದೆ ಎಂದು ಡಾ. ಅಶ್ವತ್ಥನಾರಾಯಣ ಹೇಳಿದರು.



Find out more: