ಈ ಹಿಂದೆಯೇ ಒಮ್ಮೆ ಕಬ್ಬು ಬೆಳೆಗಾರರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದರು. ಆಗಲೂ ಸಿಎಂ ಅವರು ಭರವಸೆ ನೀಡಿದ್ದರು. ಆದರೆ ಗಡುವು ಮುಗಿದ ಮೇಲೆ ಕಬ್ಬು ಬೆಳೆಗಾರರು ಹೋರಾಟ ನಡೆಸಿದ್ದಾರೆ. ಈ ಬಳಿಕ, ಇದೀಗ ಸಿಎಂ ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಖಡಕ್ ಸೂಚನೆ ನೀಡಿದ್ದಾರೆ. 

 

ಹೌದು, ಜೂನ್ 30 ರ ಒಳಗೆ ಬೆಳೆಗಾರರ ಬಾಕಿ ಹಣವನ್ನು ಪಾವತಿಸುವಂತೆ ಸಕ್ಕರೆ ಕಾರ್ಖಾನೆ ಮಾಲಿಕರಿಗೆ ಸೂಚಿಸಿದ್ದಾರೆ. ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೂ ತಿಳಿಸಿದ್ದಾರೆ. ಬೆಳೆಗಾರರಿಗೆ ಬಾಕಿ ಪಾವತಿಸದ ಕಾರ್ಖಾನೆಗಳ ಸಕ್ಕರೆಯನ್ನು ಮುಟ್ಟುಗೋಲು ಹಾಕಿಕೊಂಡು ಸಕ್ಕರೆ ಮಾರಿ ಬಂದ ಹಣವನ್ನು ರೈತರಿಗೆ ನೀಡಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. 

 

ಕಬ್ಬು ಬೆಳೆಗಾರರಿಗೆ ಬಾಕಿ ಹಣವನ್ನು ಕೊಡಿಸುವ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವಹಿಸಿದ್ದಾರೆ. ಒಂದು ವೇಳೆ ಹಣ ಕೊಡಿಸಲಿ ವಿಫಲ ಆದರೆ ಜಿಲ್ಲಾಧಿಕಾರಿ ಅವರೇ ಹೊಣೆ ಆಗಬೇಕಾಗುತ್ತದೆ ಎಂದಿದ್ದಾರೆ.

Find out more: