ನಾವು ಕನ್ನಡ ವಿರೋಧಿ ಅಲ್ಲ. ನಮಗೆ ಕನ್ನಡ ಉಖಿಸುವ ಬದ್ಧತೆ ಇದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಹೇಳಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಒಂದು ಸಾವಿರ ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಮಾತನಾಡಿದರು.
ಕನ್ನಡದ ಮಕ್ಕಳಿಗೆ ಸರಿಯಾದ ಇಂಗ್ಲಿಷ್ ಶಿಕ್ಷಣ ದೊರೆಯಬೇಕು. ಸ್ಪರ್ಧಾತ್ಮಕ ಯುಗದಲ್ಲಿ ಪೈಪೋಟಿ ಎದುರಿಸುವ ಸಾಮರ್ಥ್ಯ ಬೆಳೆಯಬೇಕು. ಹೀಗಾಗಿ ಇಂಗ್ಲೀಷ್ ಮಾದ್ಯಮವನ್ನು ಪರಿಣಾಮಕಾರಿ ಆಗಿ ಜಾರಿಗೆ ತರಬೇಕು ಎಂದು ನಿರ್ಧಾರ ಮಾಡಿದ್ದೆವು ಎಂದರು.
ಈ ನಿರ್ಧಾರಕ್ಕೆ ಸಾಕಷ್ಟು ಟೀಕೆ-ಟಿಪ್ಪಣಿ ಅನುಭವಿಸುವಂತಾಯಿತು. ನಾನಾಗಲಿ ಅಥವಾ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಾಗಲಿ ಕನ್ನಡ ವಿರೋಧಿ ಅಲ್ಲ. ಕೇವಲ ಶಾಲೆ ತೆರೆಯುವುದು ಅಷ್ಟೇ ಅಲ್ಕದೇ ಗುಣಮಟ್ಟದ ಶಿಕ್ಷಣಕ್ಕೆ ನಾವು ಒತ್ತು ನೀಡುತ್ತಿದ್ದೇವೆ ಎಂದರು.