
ಖಡಕ್ ಅಧಿಕಾರಿ ಎಂದೇ ಹೆಸರು ಮಾಡಿರೋ ಅಲೋಕ್ ಕುಮಾರ್ ಅವರು ಇಂದು ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಪೊಲೀಸ್ ಆಯುಕ್ತ ಟಿ.ಸುನೀಲ್ ಕುಮಾರ್ ಅವರು ಇಂದು ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಅಲೋಕ್ ಕುಮಾರ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.
ಬೆಂ. ನಗರದ ದಕ್ಷಿಣ ವಿಭಾಗದ ಡಿಸಿಪಿಯಾಗಿ ಸೇವೆ ಆರಂಭಿಸಿ, ಈಗ ನಗರದ ಪೊಲೀಸ್ ಆಯುಕ್ತರಾಗಿ ಅಲೋಕ್ ಕುಮಾರ್ ಅವರು ವರ್ಗಾವಣೆ ಆಗಿದ್ದಾರೆ. ಹೀಗಾಗಿ ಪೊಲೀಸ್ ವ್ಯವಸ್ಥೆ ಸ್ವಲ್ಪ ಮಟ್ಟಿಗೆ ಸುಧಾರಣೆ ಕಾಣಬಹುದು ಎನ್ನಲಾಗುತ್ತಿದೆ.
ಅಲೋಕ್ ಕುಮಾರ್ ಅವರ ಸೇವಾ ಅವಧಿಯಲ್ಲಿ ಬೆಂಗಳೂರಿನ ಕೆಲವು ರೌಡಿಗಳು ಊರನ್ನು ಬಿಟ್ಟು ಹೋಗಿದ್ದಾರೆ. ರೌಡಿಗಳ ಪಾಲಿಗೆ ಸಿಂಹಸ್ವಪ್ನ ರೀತಿಯಲ್ಲಿ ಗಮನ ಸೆಳೆದಿದ್ದಾರೆ. ಯಾವುದೇ ಮುಲಾಜಿಲ್ಲದೇ ಆರೋಪಗಳನ್ನು ಬಂಧಿಸಿದ್ದಾರೆ.