ರಾಜ್ಯ ರಾಜಕಾರಣದಲ್ಲಿ ಅನಾಚಾರ ಕೈ ಮೀರಿ ಹೋಗಿದೆ ಎಂದು ಶ್ರೀ ರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮೋತಾಲಿಕ್ ಕಿಡಿ ಕಾರಿದ್ದಾರೆ. ಅಲ್ಲದೇ, ಕೇಂದ್ರ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶ ಮಾಡಿ, ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು. ಈ ಮೂಲಕ ಕರ್ನಾಟಕದಲ್ಲಿ ನಡೆಯುವ ರಾಜಕೀಯ ನಾಟಕಕ್ಕೆ ಅಂತ್ಯ ಹಾಡಬೇಕು ಎಂದಿದ್ದಾರೆ.
ಅಲ್ಲದೇ ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ಹೆಚ್ಚುನ ಬರ ಪರಿಸ್ತೀತಿ ಇದೆ. ಜೊತೆಗೆ ರಾಜ್ಯದ 20 ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಇಂತಹ ಸಂದರ್ಭದಲ್ಲಿ ಶಾಸಕರು ರೆಸಾರ್ಟ್ ವಾಸ್ತವ್ಯ ಮಾಡುತ್ತಿರೋದು ನಾಚಕೆಗೇಡು ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯಾರು ರೆಸಾರ್ಟ್ ಗೆ ಹೋಗಿದ್ದಾರೋ ಅವರಿಗೆ ಮಾನ ಮರ್ಯಾದೆ ಇಲ್ಲ. ಇಲ್ಲಿ ಲಕ್ಷಾಂತರ ರೂಪಾಯಿ ಹಣ ವ್ಯಯ ಮಾಡುತ್ತಿದ್ದಾರೆ. ಅವರು ಅಲ್ಲಿ ಖರ್ಚು ಮಾಡುತ್ತಿರೋದು ಅವರಪ್ಪನ ಮನೆ ಹಣವಲ್ಲ. ಬದಲಿಗೆ ಜನಸಾಮಾನ್ಯರ ತೆರಿಗೆ ಹಣ. ಅಂತರ ಶಾಸಕರನ್ನು ಪೋಷಣೆ ಮಾಡೋರು ರಾಜಕಾರಣದಲ್ಲಿರೋಕೆ ಅಯೋಗ್ಯರು ಎಂದು ಪ್ರಮೋದ್ ಮೊತಾಲಿಕ್ ಅವರು ಕಿಡಿ ಕಾರಿದ್ದಾರೆ.