ಇಂದು ಸಂಜೆ 6 ಗಂಟೆಯಿಂದ ಬೆಂಗಳೂರಿನಲ್ಲಿ 2 ದಿನಗಳ ಕಾಲ ಸೆಕ್ಷನ್ 144 ಜಾರಿ ಆಗಿದೆ. ಈ ಬಗ್ಗೆ ಪೊಲೀಸ್ ಕಮಿಷನರ್ ಅಲೋಕ್ ಕುಮಾರ್ ಮಾದ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಇಂದು ಸಂಜೆ 6 ಗಂಟೆಯಿಂದ ನಿಷೇದಾಜ್ಞೆ ಜಾರಿ ಮಾಡಲಾಗಿದೆ.
ರಾಜ್ಯ ರಾಜಕೀಯ ಬಿಕ್ಕಟ್ಟಿಗೆ ಕಾರಣ ಆದ ಪಕ್ಷೇತರ ಶಾಸಕರು ಅಪಾರ್ಟ್ ಮೆಂಟ್ ನಲ್ಲಿ ಇದ್ದಾರೆ ಎಂಬ ಮಾಹಿತಿ ಪಡೆದ ಕಾಂಗ್ರೆಸ ಕಾರ್ಯಕರ್ತರು ರೇಸ್ ಕೋರ್ಸ್ ರಸ್ತೆಯ ಸ್ಥಳಕ್ಕೆ ಆಗಮಿಸಿ, ಬಿಜೆಪಿ ಕಾರ್ಯಕರ್ತರು ಮತ್ತು ಬಿಬಿಎಂಪಿ ಸದಸ್ಯರು ಆಗಮಿಸಿದಾಗ ಪರಸ್ಪರ ಮಾತಿನ ಚಕಮಕಿ ನಡೆದಿದೆ. ಇದು ಕೈ ಕೈ ಮಿಲಾಯಿಸುವ ಮಟ್ಟಕ್ಕೆ ಹೋಗಿದೆ.
ನಂತರ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪ್ರತಿಭಾಟನಾ ನಿರತರನ್ನು ಪೊಲೀಸರು ವಶಕ್ಕೆ ಪಡೆದರು. ಇದರ ಬೆನ್ನಲ್ಲೆ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಾದ್ಯಂತ ಎರಡು ದಿನಗಳ ಕಾಲ ಸೆಕ್ಷನ್ 144 ಅಡಿಯಲ್ಲಿ ನಿಷೇದಾಜ್ಞೆ ಜಾರಿ ಮಾಡಿದ್ದಾರೆ. ಈ ನಿಷೇದಾಜ್ಞೆ ಹಿನ್ನೆಲೆಯಲ್ಲಿ ಬೆಂಗಳೂರಿನ ಬಾರ್, ರೆಸ್ಟೀರೆಂಟ ಹಾಗೂ ಮಧ್ಯದ ಅಂಗಡಿಗಳನ್ನು ಬಂದ್ ಮಾಡಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.