ಕರ್ನಾಟಕ ರಾಜ್ಯದಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ 14 ತಿಂಗಳ ಆಡಳಿತ ನಡೆಸಿ, ಪತನಗೊಂಡಿದೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆ ಅಂಗೀಕರಿಸಿದ ರಾಜ್ಯಪಾಲ ವಜುಬಾಯಿ ವಾಲಾ ಅವರು, ನೂತನ ಸರ್ಕಾರ ಅಸ್ತಿತವಕ್ಕೆ ಬರೋತನಕ ಮುಂದುವರೆಯುವಂತೆ ಸೂಚಿಸಿದ್ದಾರೆ.


ಮತ್ತೊಂದು ಕಡೆ ಮೈತ್ರಿ ಸರಕಾರ ಪತನ ಆಗುತ್ತಿದ್ದಂತೆಯೇ ಬಿಜೆಪಿ ಪಾಳೆಯದಲ್ಲಿ ಸಂಬ್ರಮ ಮನೆ ಮಾಡಿದೆ. ಅಲ್ಲದೇ ಸರ್ಕಾರ ರಚನೆಗೆ ಸಿದ್ಧತೆ ನಡೆದಿವೆ. ಇಂದು ಸಿಎಂ ಆಗಿ ಯಡಿಯೂರಪ್ಪ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ದೆಹಲಿಗೆ ತೆರಳಿ ಪಕ್ಷದ ವರಿಷ್ಟರನ್ನು ಭೇಟಿ ಮಾಡಲಿದ್ದಾರೆ.


ಕಳೆದ ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬರದೇ ಇರೋ ಹಿನ್ನೆಲೆಯಲ್ಲಿ ಕಾಂಗ್ರೆಸ-ಜೆಡಿಎಸ್ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿತ್ತು. ಇದೀಗ ಮೈತ್ರಿ ಸರ್ಕಾರ ಪತನ ಆಗಿರೋ ಹಿನ್ನೆಲೆ ಹೆಚ್ಚಿನ ಬಹುಮತ ಪಡೆದಿರೋ ಬಿಜೆಪಿ ಅಧಿಕಾರಕ್ಕೆ ಏರುತ್ತಿದೆ. ಈ ಮೂಲಕ ಈ ಬಾರಿ ರಾಜ್ಯದಲ್ಲಿ ಮೂರು ಪಕ್ಷಗಳು ಅಧಿಕಾರಕ್ಕೆ ಬಂದಂತೆ ಆಗುತ್ತದೆ.


Find out more: