ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಿದ ರೀತಿ ಬಗ್ಗೆ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಮಾತನಾಡಿದ್ದಾರೆ. ಇದು ಪ್ರಜಾಪ್ರಭುತ್ವದಲ್ಲಿ ಒಂದು ಕರಾಳ ಅಧ್ಯಾಯವಾಗಿ ದಾಖಲಾಗಲಿದೆ ಎಂದು ಅವರು ಹೇಳಿದ್ದಾರೆ.
ಸಿಎಂ ಕುಮಾರಸ್ವಾಮಿ ಅವರು ವಿಶ್ವಾಸ ಮತ ಸಾಬೀತ ಮಾಡೋವಲ್ಲ ವಿಫಲಾರಾದ ಕೆಲವೇ ಗಂಟೆಗಳಲ್ಲಿ ಮಾಯಾವತಿ ಮಹತ್ವದ ನಿರ್ಧಾರ ಕೈಗೊಂಡಿದ್ದರು. ವಿಶ್ವಾಸಮತದಿಂದ ದೂರ ಉಳಿದಿದ್ದ ಬಿಎಸ್ಪಿ ಶಾಸಕ ಎನ್.ಮಹೇಶ್ ಅವರನ್ನು ಮಾಯಾವತಿ ಪಕ್ಷದಿಂದ ಉಚ್ಛಾಟನೆ ಮಾಡಿದ್ದರು.
ಹೀಗಾಗಿ ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿ ಅಧಿಕಾರ ಹಾಗೂ ಹಣಬಲದಿಂದ ಕರ್ನಾಟಕದ ಸಮ್ಮಿಶ್ರ ಸರ್ಕಾರವನ್ನು ಬೀಳಿಸಿದ್ದು, ಇದು ಇತಿಹಾಸದಲ್ಲಿ ಒಂದು ಕರಾಳ ಅಧ್ಯಾಯವಾಗಿ ದಾಖಲಾಗಲಿದೆ ಎಂದು ಮಾಯಾವತಿ ಅವರು ಇಂದು ಟ್ವೀಟ್ ಮಾಡಿದ್ದಾರೆ.
ಇದೀಗ ಶಾಸಕ ಎನ್.ಮಹೇಶ್ ಅವರು ಪಕ್ಷದಿಂದ ಉಚ್ಚಾಟನೆ ಆಗಿದ್ದಾರೆ. ಆದರೆ ಅವರು ಶಾಸಕರಾಗಿ ಮುಂದುವರೆಯಲಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಎನ್.ಮಹೇಶ್ ಅವರಿಗೆ ಬಿಜೆಪಿ ಸರಕಾರದಲ್ಲಿ ಸಚಿವ ಸ್ಥಾನ ಸಿಗುತ್ತಾ ಅನ್ನೋದನ್ನು ಕಾದು ನೋಡಬೇಕಿದೆ.
-