ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚಿಸೋ ವಿಚಾರಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸೋಕೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ,ಎಸ್,ಯಡಿಯೂರಪ್ಪ ಅವರು ಹೊಸದಿಲ್ಲಿಗೆ ಬರುವ ಅಗತ್ಯವೇ ಇಲ್ಲ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಸೂಚನೆ ನೀಡಿದ್ದಾರೆ.
ಒಂದು ವೇಳೆ ಈ ತಿಂಗಳ ಅಂತ್ಯದಲ್ಲಿ ಸರ್ಕಾರ ರಚನೆ ಆಗದೇ ಇದ್ದರೆ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬರಲಿದೆ. ನಂತರ ಆರು ತಿಂಗಳಲ್ಲಿ ಸಹಜವಾಗಿಯೇ ಸಾರ್ವತ್ರಿಕ ಚುನಾವಣೆ ನಡೆದು, ಬಿಜೆಪಿಗೆ ಸ್ಪಷ್ಟ ಬಹುಮತ ಬರಬಹುದು ಅನ್ನೋದು ಕೇಂದ್ರ ನಾಯಕರ ಲೆಕ್ಕಾಚಾರವಾಗಿದೆ.
ಅಲ್ಲದೇ ಈ ಆರು ತಿಂಗಳ ಅವಧಿಯಲ್ಲಿ ಯಡಿಯೂರಪ್ಪ ಅವರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಿ, ಹೊಸ ನಾಯಕನ ನೇತೃತ್ವದಲ್ಲಿ ಚುನಾವಣೆ ಎದುರಿಸಿ ಸರ್ಕಾರ ರಚನೆ ಮಾಡೋಕೆ ಅಮಿತ್ ಶಾ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಮಾಡದೇ ಇರೋದಕ್ಕೆ ಅವರ ವಯಸ್ಸೇ ಅಡ್ಡಿಯಾಗಿದೆ ಎನ್ನಲಾಗುತ್ತಿದೆ.