ಮೈತ್ರಿ ಸರ್ಕಾರ ಇದೀಗ ಬಿದ್ದು ಹೋಗಿದೆ. ಅಲ್ಲದೇ ಬಿಜೆಪಿಯ ನಾಯಕ ಯಡಿಯೂರಪ್ಪ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೀಗ ಜೆಡಿಎಸ್ ಕಾಂಗ್ರೆಸ್ ಜೊತೆಗೆ ಮೈತ್ರಿಯನ್ನು ಮುಂದುವರೆಸುತ್ತಾ ಇಲ್ಲವಾ ಅನ್ನೋದೇ ಸದ್ಯದ ಪ್ರಶ್ನೆ. ಈ ಕುರಿತು ಕಾಂಗ್ರೆಸ್ ನಾಯಕರ ತೀರ್ಮಾನ ನೋಡಿ ಮುಂದಿನ ನಿರ್ಧಾರ ಮಾಡ್ತೀವಿ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ತಿಳಿದ್ದಾರೆ.
ಮಾಜಿ ಪ್ರಧಾನಿ ದೇವೇಗೌಡ ಅವರು, ಸುದ್ದಿಗಾರರ ಜತೆ ಮಾತನಾಡಿದರು, ಅಷ್ಟಕ್ಕೂ ಅವರು ಹೇಳಿದ್ದೇನು ಅನ್ನೋದು ಇಲ್ಲಿದೆ ನೋಡಿ. ವಿಧಾನಸಭೆ ಚುನಾವಣೆ ನಂತರದ ಪರಿಸ್ಥಿತಿಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರು ಮೈತ್ರಿ ಮಾಡಿಕೊಳ್ಳುವಂತೆ ಒತ್ತಡ ಹೇರಿದ್ದರು. ಕುಮಾರಸ್ವಾಮಿಯೇ ಮುಖ್ಯಮಂತ್ರಿ ಆಗಬೇಕು ಎಂದು ತೀರ್ಮಾನ ಮಾಡಿದ್ದರು. ಇದೇ ಕಾರಣಕ್ಕೆ ಹದಿನಾಲ್ಕು ತಿಂಗಳು ಸರ್ಕಾರ ಮಾಡಿದೆವು ಎಂದಿದ್ದಾರೆ. ಮುಂದುವರೆದು ಮಾತನಾಡಿದ ಅವರು, ಇದೀಗ ಸರ್ಕಾರ ಪತನಗೊಂಡಿದೆ. ಮೈತ್ರಿ ಮುಂದುವರಿಕೆ ವಿಚಾರದಲ್ಲಿ ಈಗಲೂ ಕಾಂಗ್ರೆಸ್ ನಾಯಕರ ತೀರ್ಮಾನ ಏನು ಅನ್ನೋದನ್ನು ನಾವು ಕಾದು ನೋಡುತ್ತಿದ್ದೇವೆ ಎಂದು ಅವರು ಹೇಳಿದರು.
ಬಿಜೆಪಿ ಸರ್ಕಾರದಲ್ಲಿ ಮಾಜಿ ಸಿಎಂ ಆದಂತ ಸಿದ್ದರಾಮಯ್ಯ ಅವರು ಅಧಿಕೃತ ಪ್ರತಿಪಕ್ಷ ನಾಯಕರಾಗಿರುತ್ತಾರೆ. ಇನ್ನು ಇತ್ತೀಚೆಗೆ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಕುಮಾರಸ್ವಾಮಿ ಅವರು ಜೆಡಿಎಸ್ ನಾಯಕರಾಗಿ ಸದನದಲ್ಲಿ ಕೆಲಸ ಮಾಡ್ತಾರೆ ಎಂದು ಹೇಳಿದರು. ಇನ್ನು ಮುಂದುವರೆದು ಮಾತನಾಡಿದ ಅವರು, ವಿಧಾನಸಭೆಯಲ್ಲಿ ಸೋಮವಾರ ಹಣಹಾಸು ಮಸೂದೆಗೆ ನಾವು ಅಡ್ಡಿಮಾಡುವುದಿಲ್ಲ, ಒಪ್ಪಿಗೆ ನೀಡ್ತೇವೆ ಎಂದು ದೇವೇಗೌಡ ಅವರು ಸ್ಪಷ್ಟಪಡಿಸಿದ್ದಾರೆ.
ಇನ್ನು ಅನರ್ಹ ಶಾಸಕರ ಕುರಿತು ಮಾತನಾಡಿದ ಅವರು, 'ಅತೃಪ್ತ ಶಾಸಕರು ಅನರ್ಹ ಆಗಿದ್ದಾರೆ. ಒಟ್ಟು ೧೮ ಶಾಸಕರು ಅನರ್ಹ ಆಗಿದ್ದಾರೆ. ನಾಳೆ ಅಥವಾ ನಾಳಿದ್ದು ಬಂದು ಎಲ್ಲಾ ಹೇಳ್ತೇವೆ ಅಂತ ಹೇಳಿದ್ದಾರೆ. ಅಲ್ಲದೇ ಅವರು ತಮ್ಮ ಮಗನ ಕುರಿತು ಹೇಳಿದ ಅವರು, ನನ್ನ ಮೇಲೆ ಮತ್ತು ನನ್ನ ಮಗನ ಮೇಲೆ ಏನೆಲ್ಲಾ ಆರೋಪ ಮಾಡ್ತಾರೋ ನೋಡೋಣ ಎಂದು ಮಾಜೀ ಪ್ರಧಾನಿಯವರು ಮಾರ್ಮಿಕವಾಗಿ ನುಡಿದಿದ್ದಾರೆ.