ಯಲ್ಲಾಪುರ ಕ್ಷೇತ್ರದ ಶಾಸಕರಾದ ಕಾಂಗ್ರೆಸ ಪಕ್ಷದ ಶಾಸಕ ಶಿವರಾಮ್ ಹೆಬ್ಬಾರ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹ ಮಾಡಲಾಗಿದೆ . ಇದರ ಜೊತೆಗೆ ಸ್ಪೀಕರ್ ರಮೇಶ್ ಕುಮಾರ್ ಅವರು  ಕಾಂಗ್ರೆಸ ಶಾಸಕರನ್ನು ಭಾನುವಾರ ಅನರ್ಹ ಮಾಡಿದ್ದಾರೆ. ಹೀಗಾಗಿ ಇದು ಅತೃಪ್ತ ಶಾಸಕರಿಗೆ ತಲೆನೋವಾಗಿ ಪರಿಣಮಿಸಿದೆ. ಹೀಗಾಗಿ ಈ ಕುರಿತು ಅನರ್ಹಗೊಂಡ ಶಾಸಕರು ಸುಪ್ರೀಂಗೆ ಮೊರೆ ಹೋಗೋ ಸಾಧ್ಯತೆ ಇದೆ ಎನ್ನಲಾಗುತ್ತಿದೆ.


ಇದರಲ್ಲಿ ಶಿವರಾಮ್ ಹೆಬ್ಬಾರ್ ಅವರು ಜುಲೈ  6ರಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಶಿವರಾಮ್ ಹೆಬ್ಬಾರ್ ಅವರು ಮುಂಬೈನಲ್ಲಿ ವಾಸ್ತವ್ಯ ಹೂಡಿದ್ದರು. ಹೀಗಾಗಿ ಕಾಂಗ್ರೆಸ್‌ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ನೀಡಿದ ದೂರಿನ ಅನ್ವಯ ಅವರನ್ನು ಅನರ್ಹಗೊಳಿಸಲಾಗಿದೆ. ಸ್ಪೀಕರ್ ರಮೇಶ್ ಕುಮಾರ್ ಅವರು ಇಂದು ಪತ್ರಿಕಾಗೋಷ್ಟಿ ನಡೆಸಿ, 11 ಕಾಂಗ್ರೆಸ್, 3 ಜೆಡಿಎಸ್ ಶಾಸಕರನ್ನು ಅನರ್ಹಗೊಳಿಸುವುದಾಗಿ ಘೋಷಣೆ ಮಾಡಿದರು. ಇದೇ ಕಾರಣಕ್ಕೆ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದಕ್ಕೆ ಶಿವರಾಮ್ ಹೆಬ್ಬಾರ್ ಅವರು ಶಾಸಕ ಸ್ಥಾನದಿಂದ ಅನರ್ಹರಾದರು.


ತಾವು ಅನರ್ಹ ಆಗಿದ್ದರ ಕುರಿತು ಶಿವರಾಮ್ ಹೆಬ್ಬಾರ್ ಕ್ಷೇತ್ರದ ಜನರಿಗೆ ವಾಟ್ಸಪ್ ಸಂದೇಶವನ್ನು ಕಳಿಸಿದ್ದಾರೆ. ಅನರ್ಹತೆ ನಿರ್ಣಯ ಅತೀ ಶೀಘ್ರದಲ್ಲೇ ಸುಪ್ರೀಂ ಪರಿಶೀಲನೆಗೆ ಒಳಪಡಲಿದೆ ಹಾಗೂ ನ್ಯಾಯಕ್ಕೆ ಜಯವಾಗಲಿದೆ ಎಂದು ಸಂದೇಶದಲ್ಲಿ ಹೇಳಿದ್ದಾರೆ. ಅಷ್ಟಕ್ಕೂ ಅವರು ವಾಟ್ಸಾಪ್ ಸಂದೇಶ ಏನು ಅನ್ನೋದು ಇಲ್ಲಿದೆ ನೋಡಿ.
ಮಾನ್ಯ ನನ್ನ ಅಭಿಮಾನಿ ಕಾರ್ಯಕರ್ತ ಬಂಧುಗಳೆ, ಸುಪ್ರೀಂ ಆದೇಶವಿದ್ದಾಗಲೂ, ರಾಜೀನಾಮೆಯನ್ನು ಮೊದಲೇ ನೀಡಿದ್ದರೂ, ಕೆಲವರ ಒತ್ತಡದಿಂದ ಪಕ್ಷಪಾತಿಯಾಗಿ ತೆಗೆದುಕೊಂಡ ಇಂದಿನ ಸ್ಪೀಕರ್ ಅನರ್ಹತೆ ನಿರ್ಣಯ ಅತೀ ಶೀಘ್ರದಲ್ಲೇ ಸುಪ್ರೀಂ ಪರಿಶೀಲನೆಗೆ ಒಳಪಡಲಿದೆ.


ಯಾರೂ ದೃತಿಗೆಡಬೇಕಾಗಿಲ್ಲ, ನನ್ನ ಅಭಿಮಾನಿಗಳು ಹಾಗೂ ಮತದಾರರ ಮೇಲೆ ಸಂಪೂರ್ಣ ವಿಶ್ವಾಸವಿದೆ, ಮತ್ತೆ ಜನತಾ ನ್ಯಾಯಾಲಯದ ಮುಂದೆ ಹೋಗಲಿದ್ದೇನೆ. ನಿಮ್ಮೆಲ್ಲರಲ್ಲಿ ನನ್ನ ಈ ನಿರ್ದಾರಕ್ಕೆ ಕಾರಣಗಳನ್ನು ವಿಸ್ತಾರವಾಗಿ ತಿಳಿಸುತ್ತೇನೆ ಹಾಗೂ ನಿಮ್ಮೆಲ್ಲರ ಆಶಯದಂತೆ ನನ್ನ ಮುಂದಿನ ರಾಜಕೀಯ ನಿರ್ಧಾರ ತೆಗೆದುಕೊಳ್ಳುತ್ತೇನೆ.
ಸ್ಪೀಕರ್ ನೀಡಿದ ನ್ಯಾಯಸಮ್ಮತವಲ್ಲದ ತೀರ್ಪಿಗೆ ಖಂಡಿತವಾಗಿಯೂ ಸುಪ್ರೀಂನಲ್ಲಿ ನ್ಯಾಯ ಸಿಗಲಿದೆ ಹಾಗೂ ನನ್ನ ರಾಜಕೀಯ ನಿರ್ಧಾರಕ್ಕೆ ನನ್ನ ಯಲ್ಲಾಪುರ-ಮುಂಡಗೋಡ್-ಬನವಾಸಿ ಕ್ಷೇತ್ರದ ಮತದಾರರು/ಅಭಿಮಾನಿ ‌ಕಾರ್ಯಕರ್ತರು ನನ್ನಪರವಾದ ತೀರ್ಪು ನೀಡಲಿದ್ದಾರೆ ಎಂಬ ಅಚಲ ವಿಶ್ವಾಸವಿದೆ.


Find out more: