ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಸಚಿವ ಡಿಕೆ ಶಿವಕುಮಾರ್ ಅವರು ಇದೀಗ ಬಿಜೆಪಿ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮಾನನಷ್ಡ ಮೊಕದ್ದಮೆ ಹೂಡಿದ್ದಾರೆ. ಹೌದು ಇದು 204 ಕೋಟಿ ರೂಪಾಯಿಯ ಮಾನನಷ್ಡ ಮೊಕದ್ದಮೆ. ಬಿಜೆಪಿಯ ಮುಖಂಡ ಬಸನಗೌಡ ಯತ್ನಾಳ್ ಅವರು ಡಿಕೆ ಶಿವಕುಮಾರ್ ಅವರ ವಿರುದ್ಧ ಈ ಹಿಂದೆ ಕಿಡಿ ಕಾರಿದ್ದರು. ಇದಕ್ಕೆ ತಿರುಗೇಟು ನೀಡಲು ಶಿವಕುಮಾರ್ ಅವರು ಇದೀಗ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ಕೇಸ್ ಏನಾಗುತ್ತದ ಅನ್ನೋದನ್ನು ಕಾದು ನೋಡಬೇಕು.

ಡಿಕೆ ಶಿವಕುಮಾರ್ ಅವರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಕಪುರ ಕ್ಷೇತ್ರವನ್ನು ಪ್ರತಿನಿಧಿಸೋರು. ಇಲ್ಲಿನ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಶಿವಕುಮಾರ್ ಅವರು ಮಾನನಷ್ಟ ಸಿವಿಲ್ ಮೊಕದ್ದಮೆ ಅರ್ಜಿಯನ್ನು ಹೂಡಿದ್ದಾರೆ. ಈ ಅರ್ಜಿಯನ್ನು ಅಂಗೀಕರಿಸಿರುವ ನ್ಯಾಯಾದೀಶರು, ಪ್ರತಿವಾದಿಯಾದಂತೆ ಬಸನಗೌಡ  ಯತ್ನಾಳ್ ಅವರ ವಿರುದ್ಧ ಸಮನ್ಸ್ ಜಾರಿ ಮಾಡಿದ್ದಾರೆ. ಅಲ್ಲದೇ ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ನಿಗಧಿ ಮಾಡಿದ್ದಾರೆ. 

ಅರ್ಜಿದಾರ ಡಿಕೆ ಶಿವಕುಮಾರ್ ಅವರು, ಈಗಾಗಲೇ ನ್ಯಾಯಾಲಯಕ್ಕೆ 1 ಕೋಟಿ ರೂ ಅರ್ಜಿ ಶುಲ್ಕ ಕಟ್ಟಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರು ಕಳೆದ ಜೂನ್ 23 ರಂದು ವಿಜಯಪುರದಲ್ಲಿ ಮಾಧ್ಯಮಗಳ ಪ್ರತಿನಿಧಿಗಳೊಂದಿಗೆ ಮಾತನಾಡುವಾಗೀ ಕೆಳಗಿನಂತೆ ಹೇಳಿದ್ದರು ಎಂದು ಡಿಕೆ ಶಿವಕುಮಾರ್ ಅವರು ಆರೋಪಿಸಿದ್ದಾರೆ. 

ಯತ್ನಾಳ್ ಹೇಳಿದ್ದು:

"ಡಿ.ಕೆ.ಶಿವಕುಮಾರ್ ತಮ್ಮ ವಿರುದ್ಧ ದಾಖಲಾಗಿರುವ ಐಟಿ, ಇಡಿ ಪ್ರಕರಣದಿಂದ ಮುಕ್ತಿಗೊಳಿಸಲು ಸಹಾಯ ಮಾಡುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕೇಂದ್ರದ ಸಚಿವರ ಮೇಲೆ ಒತ್ತಡ ಹಾಕುತ್ತಿದ್ದಾರೆ. ಅಲ್ಲದೇ ಡಿಕೆಶಿ, ವಿರುದ್ಧದ ಪ್ರಕರಣಗಳನ್ನು ಮುಕ್ತಾಯ ಮಾಡಿದರೆ ಇದಕ್ಕೆ ಪ್ರತಿಯಾಗಿ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಮಾಡಲು ವಿರೋಧ ಮಾಡುವುದಿಲ್ಲ ಅಂತ ಭರವಸೆ ನೀಡಿದ್ದಾರೆ"  ಈ ರೀತಿಯಾಗಿ ಬಸವರಾಜ್ ಪಾಟೀಲ್ ಯತ್ನಾಳ್ ಅವರು ಡಿಕೆಶಿ ವಿರುದ್ಧ ಆರೋಪ ಮಾಡಿದ್ದರು.

ಇದೀಗ ಇದೇ ಹೇಳಿಕೆಯ ವಿರುದ್ಧ ಡಿಕೆಶಿವಕುಮಾರ್ ಅವರು ತಿಗುಗಿ ಬಿದ್ದಿದ್ದಾರೆ. ಯತ್ನಾಳ್ ಅವರಿಗೆ ಪಾಠ ಕಲಿಸೋಕೆ ಮುಂದಾಗಿದ್ದಾರೆ.


Find out more: