ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೆರೆ ಪರಿಹಾರಕ್ಕಾಗಿ ತಕ್ಷಣವೇ 3 ಸಾವಿರ ಕೋಟಿ ಹಣವನ್ನು ಬಿಡುಗಡೆ ಮಾಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. ಹೌದು ರಾಜ್ಯದ ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು ಸೇರಿದಂತೆ ಮತ್ತಿತರ ಕಡೆಗಳಲ್ಲಿ ಉಂಟಾದ ಭಾರೀ ಮಳೆಯಿಂದ ಸಾವಿರಾರು ಜನರ ಪರಿಸ್ಥಿತಿ ಸಂಕಷ್ಟಕ್ಕೆ ಈಡಾಗಿದೆ. ಹೀಗಾಗಿ ಸಿಎಂ ಯಡಿಯೂರಪ್ಪ ಅವರು ಕೇಂದ್ರ ನೆರವು ಕೇಳಿದ್ದಾರೆ.
ರಾಜ್ಯದಲ್ಲಿ ಒಟ್ಟಾರೆ ಮೂವತ್ತು ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದಲೇ ಮಳೆ ಸುರಿದಿದೆ. ಇದರಿಂದ ದೊಡ್ಡ ಮಟ್ಟದಲ್ಲಿ ಪ್ರವಾಹ ಉಂಟಾಗಿದೆ. ಮನೆ ಮಠ ಕಳೆದುಕೊಂಡು ಜನರು ಬೀದಿಗೆ ಬಂದಿದ್ದಾರೆ. ಅಪಾರವಾದಂತ ಆಸ್ತಿ-ಪಾಸ್ತಿ ನಷ್ಟವಾಗಿದೆ. ಕೂಡಲೇ ಕನಿಷ್ಟ ಪಕ್ಷ ಮೂರು ಸಾವಿರ ಕೋಟಿಯಾದರೂ ನೀಡಬೇಕು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರನ್ನು ಕೇಳಿಕೊಂಡಿದ್ದಾರೆ.
ತಮ್ಮ ಗೃಹ ಕಚೇರಿಯಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಿಎಸ್ ಯಡಿಯೂರಪ್ಪ ಅವರು, 16 ಜಿಲ್ಲೆಗಳ 80 ತಾಲೂಕುಗಳ ಪ್ರವಾಹಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಗಿದೆ. ಅಲ್ಲದೇ ಪರಿಹಾರ ಕಾರ್ಯ ಕೈಗೊಳ್ಳೋಕೆ ಭಾರೀ ಪ್ರಮಾಣದ ಆರ್ಥಿಕ ನೆರವು ಅಗತ್ಯ ಇರೋದರಿಂದ ಕೇಂದ್ರ ತಮ್ಮ ಮನವಿಯನ್ನು ಸಕಾರಾತ್ಮಕವಾಗಿ ಪರಿಗಣಿಸಬೇಕು ಎಂದು ಅವರು ತಿಳಿಸಿದ್ದಾರೆ.
ಕೇಂದ್ರದಿಂದ ಪರಿಹಾರ ನೀಡುವಲ್ಲಿ ನಮಗೆ ಯಾವುದೇ ರೀತಿಯ ವಿಳಂಭವಾಗಿಲ್ಲ ಎಂದು ಯಡಿಯೂರಪ್ಪ ಅವರು ತಿಳಿಸಿದ್ದಾರೆ. ಯಾಕೆಂದರೆ ಪ್ರಧಾನ ಮಂತ್ರಿ ಅವರಿಗೆ ಮನವರಿಕೆ ಮಾಡಿಕೊಟ್ಟ ಕೂಡಲೇ ಭೂ ಸೇನೆ, ವಾಯುಸೇನೆ ಮತ್ತು ನೌಕಾಸೇನೆ ದೋಣೆಗಳು ಅಷ್ಟೇ ಅಲ್ಲದೇ ಎನ್‌ಡಿಆರ್‌ಎಫ್ ತಂಡವನ್ನು ಕಳುಹಿಸಿ ಕೊಡಲಾಗಿದೆ. ಕೇಂದ್ರ ಸರ್ಕಾರ ಕೇವಲ ಮೂರು ಗಂಟೆಯಲ್ಲೇ ಸ್ಪಂಧಿಸಿದೆ ಎಂದು ಹೇಳಿದ್ದಾರೆ.
ಕೇಂದ್ರದಿಂದ ನರೇಗಾ ಯೋಜನೆ ಅಡಿಯಲಲ್ಲಿ 856 ಕೋಟಿ, ಎನ್‌ಡಿಆರ್‌ಎಫ್ ಯೋಜನೆ ಅಡಿಯಲ್ಲಿ 126 ಕೋಟಿ ಪರಿಹಾರ ಕಾರ್ಯಕ್ಕೆ ಭಾರತೀಯ ವಾಯುಪಡೆಯ 4 ಹೆಲಿಕ್ಯಾಪ್ಟರ್‌ಗಳು, ಸೇನೆ ಸೇರಿದಂತೆ ಎಲ್ಲ ರೀತಿಯ ನೆರವು ಸಿಕ್ಕಿದೆ ಅಲ್ಲದೇ ಎಲ್ಲ ಮಾಹಿತಿಯನ್ನೂ ನಾವು ಕ್ಷಣಕ್ಷಣಕ್ಕೆ ಕೇಂದ್ರಕ್ಕೆ ನೀಡುತ್ತಿದ್ದೇವೆ ಎಂದು ಯಡಿಯೂರಪ್ಪ ಅವರು ಹೇಳಿದರು.