ಇತ್ತೀಚೆಗೆ ಉತ್ತರ ಕರ್ನಾಟಕ ಹಾಗೂ ಮಲೆನಾಡು ಭಾಗದಲ್ಲಿ ದೊಡ್ಡ ಮಟ್ಟದಲ್ಲಿ ಮಳೆ ಆಗಿ ಅತಿವೃಷ್ಟಿ ಉಂಟಾಗಿದ್ದು, ಅಲ್ಲದೇ ಅನೇಕ ಕಡೆಗಳಲ್ಲಿ ಭೂ ಕುಸಿತ ಉಂಟಾಗಿ ಕೊಡಗು ಕರಾವಳಿ ಭಾಗದಲ್ಲಿ ಇನ್ನು ಹೆಚ್ಚಿನ ಮಟ್ಟದಲ್ಲಿ ಮಳೆ ಆಗುವ ಸಾಧ್ಯತೆ ಇದೆ. ಇನ್ನು ಮೂರು ದಿನಗಳಲ್ಲಿ ದೊಟ್ಟ ಮಟ್ಟದಲ್ಲಿ ಮಳೆ ಆಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. 

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಇದು ಕರ್ನಾಟಕದಲ್ಲಿ ಪರಿಣಾಮ ಬೀರುತ್ತಿದೆ. ಹೀಗಾಗಿ ರಾಜಧಾನಿ ಬೆಂಗಳೂರು ಸೇರಿದರೆ ರಾಜ್ಯದ ಒಳನಾಡಿನಲ್ಲಿ ಇನ್ನು ಮೂರು ದಿನಗಳ ಮಳೆ ಆಗುವ ಸಾಧ್ಯತೆ ಇದೆ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಡಾ.ಶ್ರಿನಿವಾಸ್ ರೆಡ್ಡಿ ಈ ಸಂಜೆಗೆ ತಿಳಿಸಿದರು. 

ಉತ್ತರ ಕರ್ನಾಟಕದಲ್ಲಿ ಪರಿಸ್ಥಿತಿ ತೀರ ಕೆಟ್ಟದಾಗಿದೆ. ಸಾವಿರಾರು ಜನರು ಮನೆ ಮಠ ಕಳೆದುಕೊಂಡಿದ್ದಾರೆ. ಆದರೆ ಕರಾವಳಿ ಭಾಗದಲ್ಲಿ ಇನ್ನೂ ಮಳೆ ಮುಂದುವರೆದಿದೆ. ಇದೀಗ ಹವಾಮಾನ ಇಲಾಖೆಯವರು ಹೇಳಿದ ಕಾರಣಕ್ಕೆ ಕರಾವಳಿ ಭಾಗದ ಜನರಿಗೆ ಮತ್ತಷ್ಟು ಆತಂಕ ಎದುರಾಗಿದೆ. ಇದೇ ಕಾರಣದಿಂದ ಇಂದು ಮತ್ತು ನಾಳೆ ಕೊಡಗು ಜಿಲ್ಲೆಯಲ್ಲಿ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಹಾಗೆಯೇ ಕರಾವಳಿ ಭಾಗದಲ್ಲಿ ಎರಡು ಮೂರು ದಿನಗಳ ಕಾಲ ಹೆಚ್ಚಿನ ಮಳೆ ಆಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಉತ್ತರ ಕರ್ನಟಕ ಭಾಗಕ್ಕೆ ಹೋಲಿಸಿದರೆ ಮಲೆನಾಡು ಭಾಗದಲ್ಲಿ ಮಳೆ ಕಡಿಮೆ ಆಗಿದೆ ಎನ್ನಬಹುದು. ಆದರೆ ಉತ್ತರ ಕರ್ನಾಟಕ ಭಾಗದಲ್ಲೂ ಸಾಧಾರಣ ಮಳೆ ಮುಂದುವರೆಯಲಿದೆ ಎನ್ನಲಾಗಿದೆ.ಇನ್ನು ದಕ್ಷಿಣಕ್ಕೆ ಬಂದರೆ, ಒಂದರೆಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ. ಅದರಲ್ಲಿಯೂ ಕೆಲವು ಜಿಲ್ಲೆಗಳ ಬಗ್ಗೆ ಇಲ್ಲಿ ಹೇಳಲೇಬೇಕಿದೆ. 

ಹೌದು.. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ ಸೇರಿದಂತೆ ರಾಜ್ಯದ ಒಳನಾಡಿನಲ್ಲಿ ಇರುವ ಅನೇಕ ಜಿಲ್ಲೆಗಳಲ್ಲಿ ಇನ್ನೆರಡು ದಿನಗಳ ಕಾಲ ಸಾಧಾರಣವಾದಂತ ಮಳೆ ಬೀಳುವ ಸಾಧ್ಯತೆ ಇದೆ. ಈಗಾಗಲೇ ಬೆಂಗಳೂರು ಸುತ್ತಮುತ್ತಲೂ ಭಾಗಶಃ ಮೋಡ ಕವಿದ ವಾತಾವರಣ ಇದ್ದು, ಸಂಜೆ ಹಾಗೂ ರಾತ್ರಿ ಮಳೆ ಆಗಬಹುದು ಎನ್ನಲಾಗುತ್ತಿದೆ. 


Find out more: