ನಿನ್ನೆ ರಾತ್ರಿ ರಾಜ್ಯ ರಾಜಕಾರಣದಲ್ಲಿ ಹೈ ಡ್ರಾಮಾ ನಡೆದಿದೆ. ಹೌದು ಕರ್ನಾಟಕದ ಪ್ರಭಾವಿ ರಾಜಕಾರಣಿ, ಕಾಂಗ್ರೆಸ್ ಪಕ್ಷದ ನಾಯಕ ಡಿ.ಕೆ.ಶಿವಕುಮಾರ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಭೇಟಿ ನೀಡಿದ್ದರು. ನಂತರ ಸಮನ್ಸ್ ನೀಡಿ, ಇಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಡಿ.ಕೆ.ಶಿವಕುಮಾರ್ ಅವರಿಗೆ ಇದೀಗ ಆತಂಕ ಎದುರಾಗಿದೆ. ಈ ಕುರಿತು ಪತ್ರಿಕಾಗೋಷ್ಟಿಯನ್ನು ಮಾಡಿದ್ದಾರೆ.
ಈ ಬೆಳವಣಿಗೆಯ ನಂತರ ಡಿ.ಕೆ.ಶಿವಕುಮಾರ್ ಅವರ ಕಾನೂನು ತಜ್ಞರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದರಿಂದ ಹೊರಬರುವುದು ಹೇಗೆ ಎಂದು ಚರ್ಚೆ ನಡೆಸಿದ್ದಾರೆ. ಹೀಗಾಗಿ ಡಿ.ಕೆ.ಶಿವಕುಮರ್ ಅವರನ್ನು ಬಂಧಿಸದಂತೆ ಉಪಾಯ ಮಾಡಲಾಗಿದೆ. ಹೌದು ಗುರುವಾರ ರಾತ್ರಿ ಇ.ಡಿ. ಸಮನ್ಸ್ ನೀಡಿದ್ದು, ಮೇಲ್ಮನವಿ ಸಲ್ಲಿಸಲು ನಮಗೆ ಕಾಲಾವಕಾಶ ಬೇಕು ಎಂದು ಡಿಕೆಶಿ ಪರ ವಕೀಲ ಬಿ.ವಿ.ಆಚಾರ್ಯ ಅವರು, ಮಧ್ಯಂತರ ರಕ್ಷಣೆ ನೀಡಬೇಕೆಂದು ಕೋರಿ ಮನವಿ ಸಲ್ಲಿಸಿದ್ದಾರೆ.
ಆದರೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿತ್ತು. ಹೀಗಾಗಿ ಡಿಕಶಿ ಅವರಿಗೆ ಮತ್ತಷ್ಟು ಚಿಂತೆಗೀಡು ಮಾಡಿತ್ತು. ನನ್ನ ಆಸ್ತಿ ಎಲ್ಲವನ್ನು ಬೇನಾಮಿ ಎಂದು ಕರೆಯುತ್ತಿದ್ದಾರೆ. ಈ ಕುರಿತು ನಾನು ಕಾನೂನು ಹೋರಾಟ ಮಾಡುತ್ತೇನೆ ಎಂದಿದ್ದಾರೆ. ಹಾಗಾದರೆ ಡಿಕೆಶಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದೇನು?
ಪತ್ರಿಕಾ ಗೋಷ್ಟಿಯ ಮಾತುಗಳು:
ಪತ್ರಿಕಾ ಗೋಷ್ಟಿಯಲ್ಲಿ ಡಿಕೆ ಶಿವಕುಮಾರ್ ಅವರು ಹೇಳಿದ ಮಾತುಗಳು ಹೀಗಿವೆ.. ಟಾರ್ಗೆಟ್ ಮಾಡಿಯೇ ದಾಳಿ ನಡೆಸಿದ್ದಾರೆ. ಅಲ್ಲದೇ ಈ ಪ್ರಕರಣದ ಬೇರೆ ವ್ಯಾಖ್ಯಾನ ಮಾಡುತ್ತಿದ್ದಾರೆ. ಹಲವು ಬಾರಿ ನನಗೆ ನೋಟಿಸ್ ಜಾರಿ ಮಾಡಿದ್ದಾರೆ.ಆದರೆ ನನ್ನ ಮನೆಯಲ್ಲಿ, ಸ್ನೇಹಿತರ ಮನೆಯಲ್ಲಿ ಸಿಕ್ಕಿದ್ದು ನಮ್ಮದೇ ಹಣ ಎಂದು ನಾನೀಗಾಗಲೇ ಒಪ್ಪಿಕೊಂಡಿದ್ದೇನೆ. ಆದಾಯ ತೆರಿಗೆ ಇಲಾಖೆಗೆ ದಾಖಲೆ ಸಲ್ಲಿಸಿದ್ದೇನೆ ಎಂದರು.
ಇನ್ನು ಮುಂದುವರೆದು ಮಾತನಾಡಿದ ಅವರು ಹೇಳಿದ್ದಿಷ್ಟು; ಕಾನೂನಿಗೆ ಗೌರವ ಕೊಡುವ ಶಾಸಕ ನಾನು. ನಮ್ಮ ನ್ಯಾಯಾಂಗ್ ಮೇಲೆ ನನಗೆ ನಂಬಿಕೆ ಇದೆ. ನಮ್ಮ ತಾಯಿಯ ಎಲ್ಲಾ ಆಸ್ತಿ ಬೇನಾಮಿ ಎಂದು ತೀರ್ಮಾನ ಮಾಡಿದ್ದಾರೆ. ಅವರದೇ ರೀತಿಯಲ್ಲಿ ವಾಖ್ಯಾನ ಮಾಡುತ್ತಾರೆ. ನಾನು ಸಂಪಾದಿಸಿದ್ದು ಬೇನಾಮಿ ಅಲ್ಲ. ಹೀಗಾಗಿ ಇದರ ವಿರುದ್ಧ ನಾನು ನ್ಯಾಯಾಲಯಕ್ಕೂ ಹೋಗಿದ್ದೇನೆ ಎಂದರು. ಅಷ್ಟೇ ಅಲ್ಲ, ಹೈಕೋರ್ಟ್ ನಿನ್ನೆ ಡಿಕೆಶಿ ಅವರ ಅರ್ಜಿಯನ್ನು ವಜಾ ಮಾಡಿರೋ ಕಾರಣಕ್ಕೆ ಮೇಲ್ಮನವಿ ಸಲ್ಲಿಸುವುದಾಗಿಯೂ ಹೇಳಿದರು.