ಡಿ ಕೆ ಶಿವಕುಮಾರ್ ಅವರ ಬಂಧನದ ಹಿನ್ನೆಲೆಯಲ್ಲಿ ಡಿಕೆಶಿ ಅವರ ಬೆಂಬಲಿಗರು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬಂದ್ ಮಾಡಿ ಪ್ರತಿಭಟನೆ ಮಾಡಿದ್ದರು. ಇದೀಗ ಡಿಕೆಶಿ ಬಂಧನವನ್ನು ಖಂಡಿಸಿ ಒಕ್ಕಲಿಗರ ಸಮುದಾಯ ಇಂದು ರಾಜಭವನ ಚಲೋ ಹೋರಾಟ ಹಮ್ಮಿಕೊಂಡಿತ್ತು. ಇದಕ್ಕೆ ರಾಜ್ಯದ ಮೂಲೆ ಮೂಲೆಗಳಿಂದ ಜನಸಾಗರವೇ ಹರಿದು ಬಂದಿತು. 


ಹೌದು, ನಗರದ ಬಸವನಗುಡಿ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಆರಂಭವಾದ ಸಮಾವೇಶಗೊಂಡ ಪ್ರತಿಭಟನಾಕಾರರು ಅಲ್ಲಿಂದ ಫ್ರೀಡಂ ಪಾರ್ಕ್‍ವರೆಗೂ ಮೆರವಣಿಗೆಯಲ್ಲಿ ಆಗಮಿಸಿದರು. ಡಿಕೆ ಶಿವಕುಮಾರ್ ಅವರ ಬೆಂಬಲಿಗರು ತಮ್ಮ ಶಕ್ತಿ ಸಾಮರ್ಥ್ಯವನ್ನು ಈ ರೀತಿಯಲ್ಲಿ ತೋರ್ಪಡಿಸಿದ್ದಾರೆ. ಈ ಸಮಾವೇಶದಲ್ಲಿ  ಕನ್ನಡಪರ ಸಂಘಟನೆಗಳು, ಒಕ್ಕಲಿಗ ಸಮುದಾಯದ ಹಲವಾರು ಸಂಘಟನೆಗಳು, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಸೇರಿದಂತೆ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದವು.


ಅಲ್ಲದೇ ಇಂದು ಪ್ರತಿಭಟನಾ ಮೆರವಣಿಗೆ ಇದ್ದಿರೋದರಿಂದ ಬೆಂಗಳೂರಿನಲ್ಲಿ ಪ್ರತಿಭಟನಾ ಮೆರವಣಿಗೆ ನಡೆದ ಹಾದಿಯುದ್ದಕ್ಕೂ ಅಂಗಡಿಮುಗ್ಗಟ್ಟುಗಳು ಸ್ವಯಂ ಪ್ರೇರಣೆಯಿಂದ ಮುಚ್ಚಲ್ಪಟ್ಟಿದ್ದವು. ಇಡೀ ಬೆಂಗಳೂರಿನಾದ್ಯಂತ ಪ್ರತಿಭಟನೆಯ ಕಾವು ಹೆಚ್ಚಾಗಿತ್ತು. ಇದದರಿಂದ ಪ್ರಯಾಣಿಕರಿಗೆ ಹಾಗೂ ಸಾರ್ವಜನಿಕರಿಗೆ ತೊಂದರೆ ಆಗಿದ್ದು ಸತ್ಯ.


ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ. ಅಲ್ಲದೇ ಅವರ ಬಂಧನದ ಹಿಂದೆ ರಾಜಕೀಯ ದುರುದ್ದೇಶವಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು. ನಗರದ ರಾಜಾಜಿನಗರದಿಂದ ಸಾವಿರಾರು ಸಂಖ್ಯೆಯಲ್ಲಿ ನ್ಯಾಶನಲ್ ಕಾಲೇಜು ಕಡೆಗೆ ತೆರಳಿದರು. ಅಲ್ಲದೇ 110 ವಾಹನಗಳಲ್ಲಿ ಕಾರ್ಯಕರ್ತರು ಬಂದು ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು.    


ಡಿಕೆಶಿ ಅವರ ಬಗ್ಗೆ ಒಳ್ಳೆಯ ಅಭಿಪ್ರಾಯಗಳನ್ನು ಹೊರ ಹಾಕಿದರು. ಡಿ.ಕೆ.ಶಿವಕುಮಾರ್ ಅವರು ಜನನಾಯಕರಾಗಿದ್ದು, ಸಾಕಷ್ಟು ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದರು. ಡಿಕೆಶಿ ಅವರಯ ಜಾತ್ಯಾತೀತ ವ್ಯಕ್ತಿ. ಅವರನ್ನು ರಾಜಕೀಯವಾಗಿ ತುಳಿಯೋಕೆ ಹೀಗೆ ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡು, ಕೇಂದ್ರ ಸರ್ಕಾರ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಹೇಳಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳಿಂದಲೂ ಡಿಕೆಶಿ ಅವರ ಅಭಿಮಾನಿಗಳು ಆಗಮಿಸಿದ್ದರು. ಅಲ್ಲದೇ ಈ ಪ್ರತಿಭಟನೆಯಲ್ಲಿ ದೊಡ್ಡ ಮಟ್ಟದ ಆಕ್ರೋಶ ಕಾಣಿಸಿತು.


Find out more: