ಮೈಸೂರು: ನಾಡಹಬ್ಬ ಮೈಸೂರು ದಸರಾ ಉತ್ಸವವನ್ನು ಸಂಭ್ರಮ ಸಡಗರದಿಂದ ನಡೆಸಲು ಎಲ್ಲಾ ಪೂರ್ವ ತಯಾರಿಗಳು ಭರ್ಜರಿಯಾಗಿಯೇ ನಡೆದಿವೆ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಅದರಲ್ಲೂ ಈ ಬಾರಿ ತುಂಬಾ ವಿಶೇಷವಾಗಿ ಹೊಚ್ಚ ಹೊಸ ಯೋಜನೆಯೊಂದನ್ನು ಪರಿಚಯಿಸಲಾಗಿದೆ. ಅದರಿಂದ ಜ್ಞಾನಿಗಳು, ವಿದ್ಯಾರ್ಥಿಗಳು ಸೇರಿದಂತೆ ಬಹುತೇಕ ರಿಗೆ ಬಹುಪಯೋಗಿ ಆಗಿದೆಯಂತೆ.
ದಸರಾ ದಲ್ಲಿ ಈ ಬಾರಿ ನಡೆದಿರುವ ಆ ವಿಶೇಷತೆ ಎಂದರೆ ಮೊದಲ ಬಾರಿಗೆ ಕ್ವಿಜ್ ಕಾರ್ಯಕ್ರಮವನ್ನು ಏರ್ಪಾಡು ಮಾಡಲಾಗಿದೆ. ಚಿತ್ರ ನಟ ರಮೇಶ್ ಅರವಿಂದ್ ಈ ಕಾರ್ಯಕ್ರಮವನ್ನು ನಡೆಸಿಕೊಟ್ಟಿದ್ದಾರೆ. ಈ ಹಿಂದೆ ಕಿರುತೆರೆಯ 'ಕನ್ನಡದ ಕೋಟ್ಯಧಿಪತಿ' ಕಾರ್ಯಕ್ರಮದಲ್ಲಿ ಸ್ಪರ್ಧಿಗಳಿಗೆ ಪ್ರಶ್ನೆ ಕೇಳುತ್ತಿದ್ದ ರಮೇಶ್ ಇಲ್ಲಿ ವಿದ್ಯಾರ್ಥಿಗಳಿಗೆ ಪ್ರಶ್ನೆ ಕೇಳಿದ್ದಾರೆ. ಈ ಕಾರ್ಯಕ್ರಮ ನಡೆದಿದೆ. ರಾಜ್ಯ ಪ್ರವಾಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ, ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಈ ಕಾರ್ಯಕ್ರಮ ನಡೆದಿದೆ.
ಬೆಳಗ್ಗೆ 9.45 ರಿಂದ ಮಧ್ಯಾಹ್ನ 3 ರವರೆಗೆ ಕಾರ್ಯಕ್ರಮ ನಡೆದಿದೆ. ಸಾಕಷ್ಟು ಸಂಖ್ಯೆಯ ವಿದ್ಯಾರ್ಥಿಗಳು ಇದರಲ್ಲಿ ಭಾಗಿಯಾಗಿದ್ದರು. 8 ನೇ ತರಗತಿಯಿಂದ ದ್ವಿತೀಯ ಪಿಯುಸಿ ವರೆಗಿನ ವಿದ್ಯಾರ್ಥಿಗಳಿಗೆ ಈ ಅವಕಾಶವನ್ನು ನೀಡಲಾಗಿತ್ತು. ರಮೇಶ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಕ್ವಿಜ್ ಕಾರ್ಯಕ್ರಮದ ಬಗ್ಗೆ ವಿವರ ನೀಡಿದ್ದಾರೆ. ಈ ಬಾರಿಯ ನಾಡಹಬ್ಬ ದಸರಾ ದಲ್ಲಿ ಇನ್ನೋಂದು ವಿಶೇಷತೆಯೆಂದರೆ, ಪ್ರವಾಸಿ ನಾಡು ಮೈಸೂರನ್ನು ಹಾಗೂ ಸುತ್ತಲಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲು ಕೆಎಸ್ಆರ್‌ಟಿಸಿಯಿಂದ 2500 ವಿಶೇಷ ಬಸ್ ಬಿಡಲಾಗಿದೆ.
ಸಹಸ್ರಾರು ಸಂಖ್ಯೆಯಲ್ಲಿ ಪ್ರವಾಸಿಗರು ಪಾಲ್ಗೋಳ್ಳುವುದರಿಂದ ಈ ಸೌಲಭ್ಯವನ್ನು ಕಲ್ಪಿಸಲಾಗಿದೆ ಎಂದು ತಿಳಿದು ಬಂದಿದೆ. ಈ ಬಸ್ ಗಳು ಜನಸಾಮಾನ್ಯರಿಗೂ ಉಪಯುಕ್ತವಾಗಿವೆ, ಜೊತೆಗೆ ಐಶಾರಾಮಿ ಜೀವನ ಶೈಲಿ ಉಳ್ಳವರಿಗೆ ಉಪಯುಕ್ತ ಆಗಲಿದೆಯಂತೆ. ಮೈಸೂರಿನಲ್ಲಿಯೇ ಚಾಮುಂಡಿ ಬೆಟ್ಟ, ಅರಮನೆ, ಸ್ಯಾಂಡ್ ಮ್ಯೂಸಿಯಂ, ಮೃಗಾಲಯ, ಪಾರ್ಕ್ ಸೇರಿದಂತೆ ಇನ್ನೊಂದಿಷ್ಟು ಸ್ಥಳಗಳಿಗೆ ಕರೆದುಕೊಂಡು ಹೋಗಿ, ಬಂದು ಬಿಡಲಾಗುವುದು.