ಕೊಪ್ಪಳ: ಸಾರ್ವಕರ್ ಮತ್ತು ಸಿದ್ಧಗಂಗಾ ಶ್ರೀಗಳಿಗೆ, ಈಗೆ ಯಾರಿಗೆ ಭಾರತ ರತ್ನ ಪ್ರಶಸ್ತಿ ಎಂದು ದಿಗ್ಗಜ ನಾಯಕರೇ ಟ್ವೀಟರ್ ವಾರ್ ನಡೆಸುತ್ತಿದ್ದಾರೆ. ಈ ವಿಚಾರವಾಗಿ ಡಿಸಿಎಂ ಲಕ್ಷ್ಮಣ್ ಸವದಿ ಅವರು ಏನ್ ಹೇಳಿದ್ದಾರೆ ನೋಡೋಣ. ಮುಂದಿನ ದಿನಮಾನಗಳಲ್ಲಿ ಸಿದ್ದಗಂಗಾ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಪ್ರಶಸ್ತಿ ಸಿಗಲಿದೆ. ರಾಜ್ಯ ಸರ್ಕಾರ ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಭರವಸೆ ನೀಡಿದ್ದಾರೆ.
ಪ್ರಸ್ತುತ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ವಿಚಾರ ಚರ್ಚೆಯಲ್ಲಿದೆ. ಸಾವರ್ಕರ್ ಅವರು ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಜೀವನವೆಲ್ಲಾ ಮುಡಿ ಪಾಗಿಟ್ಟು ಹೋರಾಡಿದ್ದಾರೆ. ಜೈಲುವಾಸ ಅನುಭವಿಸಿದ್ದಾರೆ. ಜೈಲಿನಲ್ಲಿ ಬೇಡಿಗಳಿಂದಲೇ 10 ಸಾವಿರ ಲೈನುಗಳನ್ನು ಬರೆದು ಕೃತಿಯನ್ನು ಬರೆದ ಮಹಾನ್ ವೀರ. ಅಂತವರನ್ನ ಹೀಯಾಳಿಸಿದರೆ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡಿದಂತಾಗಲಿದೆ. ಸಿದ್ದಗಂಗಾ ಶ್ರೀಗಳಿಗೂ ಭಾರತ ರತ್ನ ಬರುತ್ತದೆ. ನಾವು ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇವೆ.
ಅನರ್ಹ ಶಾಸಕರು ಉಪ ಚುನಾವಣೆಯಲ್ಲಿ ಸ್ಪರ್ಧೆ ವಿಚಾರದಲ್ಲಿ ಮಾತನಾಡಿದ ಅವರು, ಇನ್ನೂ ಅವರು ಬಿಜೆಪಿ ಸೇರಿಲ್ಲ. ಅವರ ವ್ಯಾಜ್ಯ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಯಲ್ಲಿದೆ. ತೀರ್ಪು ಬಂದ ಬಳಿಕ ಅವರು ಪಕ್ಷಕ್ಕೆ ಸೇರಿದ ಮೇಲೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಚಿಂತಿಸಬೇಕು ಎಂದು ತಿಳಿಸಿದ್ದಾರೆ. ಪ್ರಸ್ತುತ ಪಶ್ಚಿಮ ಮಹಾರಾಷ್ಟ್ರದ ಐದು ಜಿಲ್ಲೆಗಳ ಉಸ್ತುವಾರಿ ನನಗಿದೆ. ಅಲ್ಲಿ ಪ್ರವಾಸ ಕೈಗೊಂಡಿದ್ದೇನೆ. ಹಿಂದಿನ ವಾತಾವರಣ ಸಂಪೂರ್ಣ ಬದಲಾಗಿದೆ. ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ. 288 ಸ್ಥಾನಕ್ಕೆ 220 ಸ್ಥಾನ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಆತ್ಮವಿಶ್ವಾಸದ ಎಂದರು.
ಮಹದಾಯಿ ವಿಚಾರದಲ್ಲಿ ರೈತರು ಬೆಂಗಳೂರಿನಲ್ಲಿ ರಾಜ್ಯಪಾಲರ ಭೇಟಿಗಾಗಿ ಹೋರಾಟ ಮಾಡಿದ್ದರು. ಆದರೆ ಅವರ ಭೇಟಿಗೆ ಅವಕಾಶ ಸಿಕ್ಕಿಲ್ಲ. ಅಲ್ಲದೆ ರಾಜ್ಯಪಾಲರಿಗೆ ಈ ವಿಷಯ ಬರಲ್ಲ. ಮಹದಾಯಿ ವಿಚಾರ ಮೂರು ರಾಜ್ಯಕ್ಕೆ ಸಂಬಂಧಿಸಿದೆ. ಮಹಾರಾಷ್ಟ್ರ ಸಿಎಂ ಮಾತುಕತೆಗೆ ಸಿದ್ದರಾಗಿದ್ದರು. ಕಾರಣಾಂತರಗಳಿಂದ ಅದೆಲ್ಲ ಕೈತಪ್ಪಿತು ಎಂದು ತಿಳಿಸಿದರು.