ನವದೆಹಲಿ: ಕಳೆದೊಂದು ತಿಂಗಳಿನಿಂದ ತಿಹಾರ್ ಜೈಲಿನಲ್ಲಿ ಕಂಬಿ ಎಣಿಸುತ್ತಿರುವ ಮಾಜಿ ಸಚಿವ ಡಿ. ಕೆ ಶಿವಕುಮಾರ್ ಗೆ ಕೊನೆಗೂ ಷರತ್ತು ಬದ್ಧ ಜಾಮೀನು ನೀಡಲಾಗಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ನಡೆಸುತ್ತಿರುವ ತನಿಖೆ ಎದುರಿಸುತ್ತಿರುವ ಮತ್ತು ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಯ ಕುರಿತ ತೀರ್ಪು ಇಂದು ಹೊರ ಬಿದ್ದಿದೆ. ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಒಂದೇ ಸಾಲಿನಲ್ಲಿ ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಷರತ್ತು ಬದ್ದ ಜಾಮೀನು ನೀಡಿ ಆದೇಶಿಸಿದ್ದಾರೆ.
ಬುಧವಾರ ಜಾಮೀನು ಅರ್ಜಿಗೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ನ್ಯಾಯಾಧೀಶ ಸುರೇಶ್ ಕುಮಾರ್ ಕೈಟಾ ಅವರು ತೀರ್ಪನ್ನು ಪ್ರಕಟಿಸಿದ್ದು, ಶಾಸಕ ಡಿ ಕೆ ಶಿವಕುಮಾರ್ ಅವರಿಗೆ ಜಾಮೀನು ನೀಡುವುದಕ್ಕೆ ಒಪ್ಪಿಕೊಂಡಿದ್ದು, ಅವರಿಗೆ ಷರತ್ತು ಬದ್ದ ಜಾಮೀನು ಮಂಜೂರು ಮಾಡಿದೆ. ಡಿ.ಕೆ. ಶಿವಕುಮಾರ್ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹಾಗೂ ಜಾರಿ ನಿರ್ದೇಶನಾಲಯ ಪರ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ವಾದ ಮಂಡಿಸಿದ್ದರು. ಈ ಎಲ್ಲಾ ವಾದದ ಬಳಿಕ ಹೈಕೋರ್ಟ್ ನ್ಯಾಯ ಮೂರ್ತಿ ಸುರೇಶ್ ಕುಮಾರ್ ಕೈಟ್ ಡಿಕೆ ಶಿವಕುಮಾರ್ ಅವರಿಗೆ ಷರತ್ತು ಬದ್ದ ಜಾಮೀನು ನೀಡಿ ಆದೇಶ ಹೊರಡಿಸಿದರು. ಇದರಿಂದ ಡಿ. ಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ಸಿಕ್ಕಿದೆ.
ಅಕ್ರಮ ಹಣ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿದ್ದ ಡಿ ಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ನಲ್ಲಿ ಷರತ್ತು ಬದ್ದ ಜಾಮೀನು ಮಂಜೂರಾದ ಹಿನ್ನಲೆಯಲ್ಲಿ ಇಂದು ರಾತ್ರಿಯೊಳಗೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ. ಹೀಗಾಗಿ ಅವರ ಅಪಾರ ಅಭಿಮಾನಿಗಳು ದೆಹಲಿಯಲ್ಲಿಯೇ ಬೀಡು ಬಿಟ್ಟಿದ್ದು, ತಿಹಾರ್ ಜೈಲಿನಿಂದ ಡಿಕೆ ಶಿವಕುಮಾರ್ ಅವರು ಹೊರ ಬರುವುದನ್ನೇ ಕಾತರದಿಂದ ಕಾಯುತ್ತಿದ್ದಾರೆ. ಜೊತೆಗೆ ದೆಹಲಿ ಹೈಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದ್ದರಿಂದಾಗಿ, ಅವರ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ.