ಮುಂಬೈ: ವಿಧಾನಸಭಾ ಚುನಾವಣಾ ಫಲಿತಾಂಶ ಬಂದು ಇಪ್ಪತ್ತು ದಿನಗಳು ಕಳೆದರೂ ಸಹ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯಾಗುತ್ತಿಲ್ಲ. ಆದರೆ ಮುಖ್ಯಮಂತ್ರಿ ದೇವೇಂದ್ರ ಪಡ್ನವೀಸ್ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೇಗೆ ಮತ್ತು ಏಕೆ ಎಂಬ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ ನೋಡಿ. ಮಹಾರಾಷ್ಟ್ರ ವಿಧಾನಸಭಾ ಅವಧಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಸಿಎಂ ಸ್ಥಾನಕ್ಕೆ ದೇವೇಂದ್ರ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ.


ಶುಕ್ರವಾರ ಮಧ್ಯಾಹ್ನ ದಕ್ಷಿಣ ಮುಂಬೈನಲ್ಲಿರುವ ರಾಜ್ ಭವನದಲ್ಲಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರನ್ನು ದೇವೇಂದ್ರ ಫಡ್ನವೀಸ್ ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ದೇವೇಂದ್ರ ಫಡ್ನವೀಸ್, ತಮಗೆ ಇಷ್ಟು ದಿನ ಆಡಳಿತ ನಡೆಸಲು ಅವಕಾಶ ಕೊಟ್ಟಿದ್ದಕ್ಕಾಗಿ ಪ್ರಜೆಗಳಿಗೆ ಧನ್ಯವಾದ ಹೇಳಿದರು. ಜೊತೆಗೆ 5 ವರ್ಷಗಳ ತಮ್ಮ ಸರ್ಕಾರದ ಸಾಧನೆಗಳನ್ನು ತಿಳಿಸಿದರು. ನಾವು ಮಹಾರಾಷ್ಟ್ರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇವೆ. ಹಾಗಾಗಿಯೇ ಈ ಚುನಾವಣೆಯಲ್ಲಿಯೂ ಬಿಜೆಪಿ ಹೆಚ್ಚು ಕ್ಷೇತ್ರಗಳನ್ನು ಗೆದ್ದಿದೆ. 


ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಗೆ ಕರೆ ಮಾಡಿದರೂ ಅವರು ಸ್ವೀಕರಿಸಲಿಲ್ಲ. 50 -50 ಸೂತ್ರದ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ. ಮೈತ್ರಿ ಮಾಡಿಕೊಂಡಿದ್ದರೂ ಚುನಾವಣಾ ಫಲಿತಾಂಶ ಬಂದ ದಿನವೇ ಶಿವಸೇನೆ ಎಲ್ಲ ಅವಕಾಶಗಳ ಬಾಗಿಲು ತೆರೆಯುತ್ತೇವೆ ಎಂದು ಹೇಳಿದ್ದು ಸರಿಯಲ್ಲ ಎಂದು ನೇರವಾಗಿಯೇ ಹೇಳಿ ಟೀಕಿಸಿದರು.ನಾವು ಬಾಳಾ ಸಾಹೇಬ್ ಠಾಕ್ರೆ ಮತ್ತು ಉದ್ಧವ್ ಠಾಕ್ರೆ ವಿರುದ್ಧ ಇಲ್ಲಿಯವರೆಗೂ ಮಾತನಾಡಿಲ್ಲ. ಆದರೆ ಶಿವಸೇನೆ ಕಳೆದ 5 ವರ್ಷಗಳಲ್ಲಿ ಹಲವು ಬಾರಿ ನಮ್ಮ ನಾಯಕರ ವಿರುದ್ಧ ಮಾತನಾಡಿದೆ. ಕಳೆದ 10 ದಿನಗಳ ಹಿಂದೆ ಮೋದಿ ವಿರುದ್ಧ ಮಾತನಾಡಿದೆ. ಮೈತ್ರಿ ಮಾಡಿಕೊಂಡ ನಂತರ ನಮ್ಮ ನಾಯಕರ ವಿರುದ್ಧ ಮಾತನಾಡುವುದು ಸರಿಯಲ್ಲ. ಈ ರೀತಿಯ ಭಾಷೆಗಳನ್ನು ಸಹಿಸಲು ನಮ್ಮಿಂದ ಆಗುತ್ತಿಲ್ಲ. ಇದನ್ನು ನಾವು ಖಂಡಿಸುತ್ತೇವೆ ಎಂದು ಶಿವಸೇನೆ ವಿರುದ್ಧ ಗುಡುಗಿದ್ದಾರೆ. ಇಲ್ಲಿಯೂ ಕಾಂಗ್ರೆಸ್‍ಗೆ `ಆಪರೇಷನ್ ಕಮಲ’ ಆತಂಕ ಎದುರಾಗಿದೆಯಂತೆ. ಮುಂದೆ ಸರ್ಕಾರ ರಚನೆ ಏನಾಗುತ್ತದೆ ಎಂಬುದು ಕಾದು ನೋಡಬೇಕಾಗಿದೆ.


Find out more: