ಚಿಕ್ಕಬಳ್ಳಾಪುರ: ಮಾಜಿ ಸಚಿವ ಡಿ. ಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಿಹಿ ಸುದ್ದಿ ನೀಡಿದ್ದಾರೆ. ಅದೇನೆಂದರೆ ಕನಕಪುರಕ್ಕೂ ಮೆಡಿಕಲ್ ಕಾಲೇಜ್ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದ್ದಾರೆ. 


 “ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜನ್ನು ಜಿಲ್ಲಾ ಕೇಂದ್ರವಾದ ಚಿಕ್ಕಬಳ್ಳಾಪುರಕ್ಕೆ ವರ್ಗಾಯಿಸಿ ಶಂಕುಸ್ಥಾಪನೆ ನೆರವೇರಿಸಿದ್ದೇನೆ. ಶಾಸಕ ಡಿ.ಕೆ.ಶಿವಕುಮಾರ್‌ ಮತ್ತು ನಾನು ಆತ್ಮೀಯ ಸ್ನೇಹಿತರು. ಅವರೊಂದಿಗೆ ಮಾತುಕತೆನಡೆಸಿ, ಕನಕಪುರಕ್ಕೂ ಮೆಡಿಕಲ್‌ ಕಾಲೇಜು ಮಂಜೂರು ಮಾಡುವೆ’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. 


ರಾಮನಗರ ಜಿಲ್ಲೆ ಮಾಗಡಿ ತಾಲೂಕಿನ ವೀರಾಪುರ ದಲ್ಲಿ ಶುಕ್ರವಾರ ಡಾ.ಶಿವಕುಮಾರಸ್ವಾಮೀಜಿ ಅವರ 111 ಅಡಿ ಎತ್ತರದ ಬೃಹತ್‌ ಪ್ರತಿಮೆ ಸ್ಥಾಪನೆ ಮತ್ತು ಸಾಂಸ್ಕೃತಿಕ ಹಾಗೂ ಪಾರಂಪರಿಕ ಗ್ರಾಮೀಣಾಭಿ ವೃದ್ಧಿಯ ಶಂಕುಸ್ಥಾಪನೆ ಸಮಾರಂಭದಲ್ಲಿ ಮಾತನಾಡಿದರು. ಸಾನ್ನಿಧ್ಯ ವಹಿಸಿ ಮಾತನಾಡಿದ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಶಿವೈಕ್ಯ ಡಾ.ಶಿವಕುಮಾರ ಸ್ವಾಮೀಜಿ ಅವರ ಹುಟ್ಟೂರು ವೀರಾಪುರವನ್ನು ಸುವರ್ಣಾಕ್ಷರದಲ್ಲಿ ಬರೆದಿಡುವ ಕ್ಷಣ ಇದು. ಲೋಕದ ಹಿತಕ್ಕಾಗಿ ಶ್ರೀಗಳು ಹುಟ್ಟಿದ ಭೂಮಿ, ಹೆತ್ತ ತಾಯಿ ಮತ್ತು ಸಲುಹಿ ಸಂಸ್ಕಾರ ಕೊಟ್ಟ ತಂದೆ ಈ ಮೂವರು ಎಂದೆಂದೂ ಸ್ಮರಣೀಯರು ಎಂದರು. 


ಪ್ರಕೃತಿಯ ಮರ, ಗಿಡ, ನದಿ, ಇವೆಲ್ಲವೂ ಪರೋಪಕಾರಿ. ಅದೇ ರೀತಿ ಡಾ.ಶಿವಕುಮಾರ ಸ್ವಾಮೀಜಿ ಅವರು ಜಗತ್ತಿನ ಪರೋಪಕಾರಕ್ಕಾಗಿ ಜನಿಸಿದ ಮಹಾಪುರುಷರು ಎಂದರು. ಮಠ ಮಾನ್ಯಗಳಿಗೆ ಯಡಿಯೂರಪ್ಪ ಅವರು ವಿಶೇಷ ಅನುದಾನವನ್ನು ಕೊಟ್ಟು, ಅಭಿವೃದ್ಧಿಪಡಿಸುವ ಮೂಲಕ ಸಮಾಜಕ್ಕೆ ಗೌರವವನ್ನು ತಂದುಕೊಟ್ಟಿದ್ದಾರೆ. ಇದರಿಂದಾಗಿ ಮಠಮಾನ್ಯಗಳ ನಿರ್ವಹಣೆಗೆ ಅನುಕೂಲವಾಗಿದೆ. ಯಡಿಯೂರಪ್ಪ ಸಿಎಂ ಆದಾಗಲೆಲ್ಲ ನೀರಿಗೆ ಬರವಿಲ್ಲ, ನೆರೆ ಹಾವಳಿಗೂ ಪರಿಹಾರ ನೀಡಿದ್ದಾರೆ. ರೈತರ ಪರವಾಗಿ ಕೆಲಸ ಮಾಡಿಕೊಂಡು ಬಂದಿದ್ದಾರೆ. ನೆರೆ ಸಂತ್ರಸ್ತರ ಸಿಎಂ ಪರಿಹಾರ ನಿಧಿಗೆ ಸಿದ್ದಗಂಗಾ ಮಠ 50 ಲಕ್ಷ ರೂ.ನೆರವು ನೀಡಿದೆ ಎಂದು ತಿಳಿಸಿದರು. ಅನರ್ಹ ಶಾಸಕ ಸುಧಾಕರ್ ಕ್ಷೇತ್ರವಾದ ಚಿಕ್ಕಬಳ್ಳಾಪುರದಲ್ಲಿ 710 ಕೋಟಿ ರೂ.ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ವೈದ್ಯಕೀಯ ಶಿಕ್ಷಣ ಮಹಾವಿದ್ಯಾಲಯಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ಚುನಾವಣೆಯಲ್ಲಿ ಮತ್ತೊಮ್ಮೆ ಸುಧಾಕರ್ ಗೆ ಅವಕಾಶ ಕೊಡಿ ಎಂದರು.


Find out more: