ರಾಷ್ಟ್ರದ ಐತಿಹಾಸಿಕ ಅಯೋಧ್ಯೆ-ಬಾಬರಿ ಮಸೀದಿ ಭೂವಿವಾದ ಪ್ರಕರಣದ ಕುರಿತು ಇಂದು ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಅಯೋಧ್ಯೆ ಭೂಪ್ರದೇಶ ಶ್ರೀರಾಮನಿಗೆಸೇರಿದ್ದು ಎನ್ನುವ ಮೂಲಕ ಶತಮಾನಗಳ ಧಾರ್ಮಿಕ ನಂಬಿಕೆಗೆ ಕಾನೂನಿನ ಮಾನ್ಯತೆಯನ್ನು ಸುಪ್ರೀಂ ಕೋರ್ಟ್ ದೊರಕಿಸಿಕೊಟ್ಟಿದೆ. ಹಾಗಾದರೆ ಮುಸ್ಲಿಂ ಸಮುದಾಯದ ಭಾಂಧವರಿಗೆಏನು ಹೇಳಿದ್ರು ಎಂದು ಇಲ್ಲಿದೆ ನೋಡಿ ಮಾಹಿತಿ. 


ಮಂದಿರದನಿರ್ಮಾಣದ ಹಕ್ಕನ್ನು ಟ್ರಸ್‌ಗೆ ವರ್ಗಾಯಿಸಿ, ಮುಸ್ಲಿಮರಿಗೆ ಅಯೋಧ್ಯೆಯಲ್ಲೇ ಪ್ರತ್ಯೇಕ 5ಎಕರೆ ಜಾಗ ನೀಡಬೇಕೆಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಅಯೋಧ್ಯೆಯಲ್ಲಿ ರಾಮನ ಜನನ ಸತ್ಯ ಎಂದು ಸುಪ್ರೀಂಕೋರ್ಟ್ ಒಪ್ಪಿಕೊಂಡಿದೆ ವಿವಾದಿತ 2.77ಎಕರೆ ಜಾಗವನ್ನುರಾಮಲಲ್ಲಾಗೆ ವಹಿಸಿ ಸುಪ್ರೀಂ ಕೋರ್ಟ್ ತೀರ್ಪು ಪ್ರಕಟಿಸಿದೆ. ಈ ಮೂಲಕ ವಿವಾದಿತ ಜಾಗಕ್ಕಾಗಿ ಹೋರಾಡುತ್ತಿದ್ದ ಹಿಂದೂಗಳ ನಂಬಿಕೆಗೆ ಐತಿಹಾಸಿಕ ಜಯ ಲಭಿಸಿದೆ. ಆದರೆ, ಬಾಬರಿ ಮಸೀದಿ ಪ್ರತ್ಯೇಕ ಜಾಗವನ್ನು ಕಲ್ಪಿಸಲು ಕೋರ್ಟ್ ಸರಕಾರಕ್ಕೆ ಸೂಚಿಸಿದೆ. 


ವಿವಾದಿತ ಸ್ಥಳದಲ್ಲಿ ರಾಮನ ಜನನ ಸತ್ಯ ಎಂದಿರುವ ಸುಪ್ರೀಂ ಕೋರ್ಟ್, ಕಾನೂನಾತ್ಮಕ ನಿಯಮ ರೂಪಿಸಿ ಮಂದಿರ ನಿರ್ಮಾಣಕ್ಕೆ ಮುಂದಾಗುವಂತೆ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶಿಸಿದೆ. ಪಂಚಪೀಠದಿಂದ ಸರ್ವಸಮ್ಮತದ ತೀರ್ಪು ಪ್ರಕಟವಾಗಿದ್ದು, ಪೀಠದ ಯಾವುದೇ ನ್ಯಾಯಮೂರ್ತಿ ಪ್ರತ್ಯೇಕ ಅಭಿಪ್ರಾಯವನ್ನು ವ್ಯಕ್ತಪಡಿಸದಿರುವುದು ಈ ತೀರ್ಪಿನ ವಿಶೇಷ. ಸದ್ಯ ಅಯೋಧ್ಯೆ ವಿವಾದಿತ ಸ್ಥಳವನ್ನು ರಾಮಲಲ್ಲಾಗೆ ವಹಿಸಿ ತೀರ್ಪು ಪ್ರಕಟಿಸಿರುವ ಸುಪ್ರೀಂಕೋರ್ಟ್, ಮಂದಿರ ನಿರ್ಮಾಣ ಟ್ರಸ್ಟ್‌ಗೆ ಭೂಮಿ ಸ್ವಾದೀನ ಪ್ರಕ್ರಿಯೆ ಆರಂಭಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಸದ್ಯ ಭೂಮಿಯ ಹಕ್ಕು ಕೇಂದ್ರ ಸರ್ಕಾರದ ಅಧೀನದಲ್ಲೇ ಇರಲಿದ್ದು, ನಿಯಮ ರೂಪಿಸಿ ಮಂದಿರ ನಿರ್ಮಾಣಕ್ಕೆ ಮುಂದಾಗುವಂತೆ ಸಲಹೆ ನೀಡಿದೆ.


ಹಿಂದೂಗಳು ಮತ್ತು ಮುಸ್ಲಿಮರ ನಡುವಿನ ವಿವಾದದ ಕೇಂದ್ರ ಬಿಂದುವಾಗಿರುವ 2.77ಎಕರೆ ಪ್ರದೇಶದ ಕುರಿತ ತೀರ್ಪನ್ನು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್, ನ್ಯಾ. ಎಸ್.ಎ.ಬೋಬ್ಡೆ, ಡಿ. ವೈ.ಚಂದ್ರಚೂಡ್, ನ್ಯಾ.ಅಶೋಕ್ ಭೂಷಣ್ ಮತ್ತು ಎಸ್. ಅಬ್ದುಲ್ ನಜೀರ್ ಅವರನ್ನೊಳಗೊಂಡ ಸಾಂವಿಧಾನಿಕ ಪೀಠ ಪ್ರಕಟಿಸಿದೆ. ರಾಮಜನ್ಮಭೂಮಿ-ಬಾಬ್ರಿ ಮಸೀದಿ ಪ್ರಕರಣ ಸಂಬಂಧ 40ದಿನಗಳ ಕಾಲ ಸರಣಿ ವಿಚಾರಣೆ ನಡೆಸಿದ್ದ ಪೀಠ ನೀಡಿದ ಈಐತಿಹಾಸಿಕ ತೀರ್ಪು, ರಾಮಮಂದಿರ ಕುರಿತ ಎಲ್ಲಾ ವಿವಾದಗಳಿಗೆ ತಾರ್ಕಿಕ ಅಂತ್ಯ ಹಾಡಿದೆ


Find out more: