ಮುಂಬೈ: ಚಾನ್ಸ್ ಸಿಕ್ಕರೆ ಸಾಕು ಸಾರ್ಕಾರ ರಚಿಸೋಕೆ  ಪಕ್ಷಗಳು ಕಾದು ಕುಳಿತಿರುತ್ತವೆ. ಆದರೆ ಪ್ರಸ್ತುತ ಮಹಾರಾಷ್ಟ್ರದಲ್ಲಿ ಇದಕ್ಕೆ ತದ್ವಿರುದ್ಧವಾಗಿ ನಡೆಯುತ್ತಿದೆ. ಬಿಜೆಪಿ ಮತ್ತು ಸಿವಸೇನೆ ಮೈತ್ರಿಗೆ ಸ್ಪಷ್ಟ ಬಹುಮತ ಇದ್ದರು ಸಹ ಸರ್ಕಾರ ರಚಿಸುತ್ತಿಲ್ಲ. ರಾಜ್ಯಪಾಲರೇ ಸರ್ಕಾರ ರಚನೆಗೆ ಆಹ್ವಾನ ನೀಡಿದರೂ ಸಹ ಪಕ್ಷಗಳು ಮೌನಕ್ಕೆ ಶರಣಾಗಿವೆ. ಸೈದ್ಧಾಂತಿಕ ವಿರೋಧಿಯಾದ ಕಾಂಗ್ರೆಸ್ ಮತ್ತು ಎನ್‍ಸಿಪಿ ಜೊತೆ ಶಿವಸೇನೆ ಮಹಾಮೈತ್ರಿಗೆ ಮುಂದಾಗಿದೆ ಎನ್ನಲಾಗಿ. ಆದರೆ ಸೋಮವಾರ ಸಂಜೆ 5 ವೇಳೆ ನಡೆದ ಸಭೆ ಬಳಿಕ ಮೈತ್ರಿಗೆ ಬೆಂಬಲ ನೀಡುವ ಕುರಿತು ಕಾಂಗ್ರೆಸ್ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ.


ಇದರ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಎನ್‍ಸಿಪಿಯೊಂದಿಗೆ ಮಾತುಕತೆ ನಡೆಸಲಾಗುವುದು ಎಂದಷ್ಟೇ ಹೇಳಿಕೆ ನೀಡಿದೆ. ಇತ್ತ ಬಿಜೆಪಿ ಸರ್ಕಾರ ರಚಿಸಲ್ಲ ಎಂಬ ಹೇಳಿಕೆ ನೀಡಿದ ಬೆನ್ನಲ್ಲೇ ಸರ್ಕಾರ ರಚನೆಗೆ ಮುಂದಾಗಿದ್ದ ಶಿವಸೇನೆ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಕಾಂಗ್ರೆಸ್‍ನಿಂದ ಬಾಹ್ಯ ಬೆಂಬಲ ಪಡೆಯಲು ಮುಂದಾಗಿತ್ತು. ಆದರೆ ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಯಾವುದೇ ಸ್ಪಷ್ಟ ನಿರ್ಧಾರ ಕೈಗೊಳ್ಳದ ಹಿನ್ನೆಲೆಯಲ್ಲಿ ಸರ್ಕಾರ ರಚನೆಯ ಸರ್ಕಸ್ ಮುಂದುವರಿದಿದೆ. ಎನ್‍ಸಿಪಿ ನಾಯಕರ ಶರದ್ ಪವಾರ್ ಅವರ ನಡೆಯೂ ತೀವ್ರ ಕುತೂಹಲ ಹುಟ್ಟಿಸಿದೆ. 


ಇಂದು ಸಂಜೆ 5 ಗಂಟೆ ವೇಳೆಗೆ ಕಾಂಗ್ರೆಸ್ ಹೈಕಮಾಂಡ್ ಮಹಾರಾಷ್ಟ್ರ ನಾಯಕರ ಜೊತೆ ಸರ್ಕಾರ ರಚನೆಗೆ ಬೆಂಬಲ ನೀಡುವ ಕುರಿತು ಚರ್ಚೆ ನಡೆಸಿತ್ತು. ಅಲ್ಲದೇ ಶಿವಸೇನೆ ನಾಯಕರ ಉದ್ಧವ್ ಠಾಕ್ರೆ ಅವರೊಂದಿಗೆ ಸೋನಿಯಾ ಗಾಂಧಿ ಅವರು ಫೋನ್ ಮೂಲಕ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭಿಸಿತ್ತು. ಇದರ ನಡುವೆಯೇ ಉದ್ಧವ್ ಠಾಕ್ರೆ ಅವರ ಪುತ್ರ ಆದಿತ್ಯ ಠಾಕ್ರೆ, ಏಕ್‍ನಾಥ್ ಶಿಂಧೆ ನೇತೃತ್ವದ ಶಿವಸೇನೆ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಸರ್ಕಾರ ರಚನೆ ಹಕ್ಕು ಮಂಡನೆ ಮಾಡಿದ್ದಾರೆ. ಮಹಾರಾಷ್ಟ್ರದಲ್ಲಿ ಸಮರ್ಥ ಸರ್ಕಾರ ರಚನೆ ಮಾಡುವುದು ಶಿವಸೇನೆಯ ಕರ್ತವ್ಯವಾಗಿದೆ. ಮುಂದಿನ 24 ಗಂಟೆಗಳಲ್ಲಿ ಜವಾಬ್ದಾರಿಯುತ ಸರ್ಕಾರ ರಚನೆ ಮಾಡುವುದು ನಮ್ಮ ಕರ್ತವ್ಯವಾಗಿದೆ ಎಂದರು.



Find out more: