ಬೆಂಗಳೂರು: ತುಂಬಾ ಜನರು ಸರ್ಕಾರ ಕೇಳೋ ದಾಖಲೆಗಳು, ಸುಮಾರು ಬಾರಿ ಅಡ್ಡಾಡಿ ಕೊನೆಗೆ ಆ ಸರ್ಕಾರದ ಸೌಲಭ್ಯವೇ  ಬೇಡ ಎನ್ನುವಷ್ಟು ಬೇಸರ ಭಾವನೆ ಉಂಟಾಗಿ ಬಿಡುತ್ತದೆ. ಹೌದು, ಆದ್ದರಿಂದಲೇ ಇದೀಗ ಮುಖ್ಯಮಂತ್ರಿ ಸೂಪರ್ ಪಾಸ್ಟ್ ಆಡಳಿತಕ್ಕೆ ಕರೆ ನೀಡಿದ್ದಾರೆ. ಅದೇನು ಸೂಪರ್ ಪಾಸ್ಟ್ ಆಡಳಿತ ಎಂಬ ಕುತೂಹಲಕಾರಿ ಮಾಹಿತಿ ಇಲ್ಲಿದೆ ನೋಡಿ. 
 
ಪ್ರವಾಹದಿಂದ ಮನೆ ಕಳೆದುಕೊಂಡವರಿಗೆ 1 ಲಕ್ಷ ರೂ.ಬಿಡುಗಡೆ ಆಗಿದ್ದರೂ, ಬಹುಪಾಲು ಸಂತ್ರಸ್ತರು ಮನೆ ನಿರ್ಮಿಸಲು ಮುಂದಾಗಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ವಾರದೊಳಗೆ ಜಿಲ್ಲೆಗಳಿಗೆ ಭೇಟಿ ನೀಡಿ, ಸಮಸ್ಯೆ ಪರಿಹರಿಸುವಂತೆ ನಿರ್ದೇಶನ ನೀಡಿದ್ದೇನೆ ಎಂದರು. ಈವರೆಗೆ 5.06 ಲಕ್ಷ ರೈತರಿಗೆ 785.94 ಕೋಟಿ ರೂ. ಬೆಳೆ ಪರಿಹಾರ ವಿತರಿಸಲಾಗಿದೆ.
 
ಸುಮಾರು 37 ಸಾವಿರ ರೈತರ ಬ್ಯಾಂಕ್‌ ಖಾತೆಗೆ ಆಧಾರ್‌ ಜೋಡಣೆ ಆಗಿರದ ಕಾರಣ ಪರಿಹಾರ ಪಾವತಿಗೆ ಅಡಚಣೆ ಯಾಗಿದೆ. ಈ ಬಗ್ಗೆ ಪರ್ಯಾಯ ವಿಧಾನಗಳನ್ನು ಅನುಸರಿಸುವಂತೆ ಸೂಚಿಸಿ ವಾರದೊಳಗೆ ಪರಿಹಾರ ಪಾವತಿ ಪೂರ್ಣಗೊಳಿಸಲು ಸೂಚನೆ ನೀಡಿರುವುದಾಗಿ ಹೇಳಿದರು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಖಾತೆ ಗಳಿಗೆ ಜಮೆ ಆದ ಇನ್ಪುಟ್‌ ಸಬ್ಸಿಡಿ ಮತ್ತು ಬೆಳೆ ವಿಮೆ ಪರಿಹಾರ ಮೊತ್ತಗಳನ್ನು ಸಾಲ ಖಾತೆಗೆ ಜಮಾ ಮಾಡಲಾಗುತ್ತಿದೆ ಎಂದಿದ್ದಾರೆ. 
 
ವಸತಿ ಯೋಜನೆಗಳನ್ನು ತ್ವರಿತಗೊಳಿಸುವ ಬಗ್ಗೆಯೂ ಚರ್ಚೆ ನಡೆಸಲಾಗಿದ್ದು, ಈ ವರ್ಷಾಂತ್ಯದಲ್ಲಿ 1.5 ಲಕ್ಷ ಮನೆ ನಿರ್ಮಾಣ ಆಗಿದ್ದು, ಈವರೆಗೆ 1.09 ಲಕ್ಷ ಮನೆ ನಿರ್ಮಾಣವಾಗಿದೆ. ಪ್ರಗತಿಯಲ್ಲಿರುವ ಮನೆಗಳ ನಿರ್ಮಾಣವನ್ನು ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ತಿಳಿಸಲಾಗಿದೆ ಎಂದು ಸಿಎಂ ಹೇಳಿದರು.
 
ಎಸ್ಸಿಪಿ ಟಿಎಸ್ಪಿ ಯೋಜನೆಯಡಿ 30,444 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಈ ವರೆಗೆ 11,642 ಕೋಟಿ ರೂ.. ಬಿಡುಗಡೆಯಾಗಿದೆ. 9667 ಕೋಟಿ ರೂ. ವೆಚ್ಚವಾಗಿದೆ. ಮಾರ್ಚ್‌ 15 ರೊಳಗೆ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ, ಅನುದಾನ ವೆಚ್ಚ ಮಾಡುವಂತೆ ತಿಳಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಯ ಹಾಸ್ಟೆಲ್‌ ವೆಚ್ಚ ಮತ್ತು ವಿದ್ಯಾರ್ಥಿ ವೇತನಗಳಿಗೆ ಅಸ್ತು ಎಂದಿದ್ದಾರೆ. 

Find out more: