ಬೆಂಗಳೂರು: ರಾಜ್ಯದಲ್ಲಿನ ಸಿಎಂ ಬಿ.ಎಸ್.ಯಡಿಯೂರಪ್ಪ ದಾವೋಸ್ ಆರ್ಥಿಕ ಶೃಂಗ ಸಭೆಯಲ್ಲಿ ಪಾಲ್ಗೊಳ್ಳುತ್ತಿರುವ ಹಿನ್ನಲೆಯಲ್ಲಿ ವಿಧಾನ ಮಂಡಲದ ಜಂಟಿ ಅಧಿವೇಶನವನ್ನು ಫೆಬ್ರವರಿ 17-21 ಗೆ ಮುಂದೂಡಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ ಎಂದು ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. 
 
ಸೋಮವಾರ ನಡೆದ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಈ ಮುಂಚೆ ಜಂಟಿ ಅಧಿವೇಶನವನ್ನು ಜನವರಿ 20-30 ರ ವರೆಗೆ ನಡೆಸಲು ನಿರ್ಧರಿಸಲಾಗಿತ್ತು.ಆದರೆ ಮುಖ್ಯಮಂತ್ರಿ ಅವರ ಅಲಭ್ಯತೆಯ ಹಿನ್ನೆಲೆ ಇದನ್ನು ಫೆಬ್ರವರಿಗೆ ಮುಂದೂಡಲಾಗಿದೆ. ಇನ್ನು ಬಜೆಟ್ ಅಧಿವೇಶನ ಮಾರ್ಚ್ 2ರಿಂದ ಆರಂಭವಾಗಲಿದ್ದು, ಮಾರ್ಚ್ 5 ರಂದು ಮುಖ್ಯಮಂತ್ರಿ ಯಡಿಯೂರಪ್ಪ ಆಯವ್ಯಯ ಮಂಡಿಸಲಿದ್ದಾರೆಂದು ಬಜೆಟ್ ಮಂಡನೆಯ ಮಾಹಿತಿಯನ್ನು ನೀಡಿದರು.
 
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷಗಿರಿಯನ್ನು ಆಯಾ ಭಾಗದ ಸಚಿವರು ಆಗಬೇಕೆಂಬ ಕಾನೂನಿಗೆ ತಿದ್ದುಪಡಿ ತಂದು ಸ್ಥಳೀಯ ಶಾಸಕರು,ವಿಧಾನ ಪರಿಷತ್ ಸದಸ್ಯರನ್ನು ನೇಮಕ ನೇಮಕ ಮಾಡಲು ಅವಕಾಶ ಕಲ್ಪಿಸಲು ನಿರ್ಧಾರ ಮಾಡಲಾಗಿದೆ. ಈ ಹಿಂದೆ ಉಪ ಮುಖ್ಯಮಂತ್ರಿಗೋವಿಂದ ಕಾರಜೋಳ ಅವರನ್ನು ಕಲ್ಯಾಣ ಕರ್ನಾಟಕ ಮಂಡಲಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿತ್ತುಆದರೆ ಸ್ಥಳೀಯ ಶಾಸಕರ ವಿರೋಧಧ ಹಿನ್ನಲೆಯಲ್ಲಿ ಕಾಯ್ದೆಗೆ ತಿದ್ದುಪಡಿ ತರಲಾಗಿದೆ.ಮಂಡಲಿ ಅಧ್ಯಕ್ಷರಿಗೆ ಕ್ಯಾಬಿನೆಟ್ ಸ್ಥಾನ ಮಾನ ನೀಡಲಾಗುವುದು ಎಂದು ಅವರು ತಿಳಿಸಿದರು.
 
ವಾಜಪೇಯಿ ಹಾಗೂಅಂಬೇಡ್ಕರ್ ವಸತಿ ಯೋಜನೆಯಡಿ ಬೆಂಗಳೂರಿನಲ್ಲಿ ಒಂದು ಲಕ್ಷ ಮನೆ ನಿರ್ಮಾಣ ಯೋಜನೆ ನಿಯಮ ತಿದ್ದುಪಡಿ ತರಲಾಗಿದ್ದು,ಫಲಾನುಭವಿಗಳ ಆರ್ಥಿಕ ಆದಾಯ ಮಿತಿ 87,500ರೂ ನಿಂದ 3ಲಕ್ಷಕ್ಕೆ ಹೆಚ್ಚಳ ಮಾಡಲಾಗಿದೆ.ಮಹಡಿಯ ಎತ್ತರವನ್ನು ಜಿ+3 ಗೆ ಮಿತಿಗೊಳಿಸಲು ಮಾಡಲು ಸಚಿವ ಸಂಪುಟ ಸಭೆ ತೀರ್ಮಾನ ಮಾಡಿದೆ.  ರಾಜ್ಯದ 4ರಕ್ತ ನಿಧಿ ಕೇಂದ್ರವನ್ನು ಮೇಲ್ದರ್ಜೆಗೇರಿಸಿ ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ಮಾಡಲು ಸಂಪುಟ ಒಪ್ಪಿಗೆ ನೀಡಿದ್ದು,ಬೆಂಗಳೂರಿ ನ ವಿಕ್ಟೋರಿಯಾ ಆಸ್ಪತ್ರೆ, ಮಂಗಳೂರಿನ ವೆನ್ ಲಾಕ್ ಆಸ್ಪತ್ರೆ, ಹುಬ್ಬಳ್ಳಿಯ ಕಿಮ್ಸ್ , ಬಳ್ಳಾರಿಯ ಜಿಲ್ಲಾ ಆಸ್ಪತ್ರೆ ವಿಮ್ಸ್ ನಲ್ಲಿ ರೀಜನಲ್ ಸೆಂಟರ್ ಆಫ್ ಎಕ್ಸಲೆನ್ಸ್ ಸ್ಥಾಪಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಅಭಿವೃದ್ಧಿ ಕಾರ್ಯಗಳ ಕುರಿತು ಸುದ್ದಿಗೋಷ್ಠಿಯಲ್ಲಿ ವಿವರವಾದ ಮಾಹಿತಿ ನೀಡಿದರು.

Find out more: