ಬೆಂಗಳೂರು: ಮಾರಕ ರೋಗವಾದ ಕರೋನಾ ವೈರಸ್ ಹರಡದಂತೆ ತಡೆಯಲು ಇಡೀ ದೇಶವನ್ನೇ ಲಾಕ್ ಡೌನ್ ಮಾಡುವಂತೆ ಪ್ರಧಾನ ಮಂತ್ರಿಯವರು ಆದೇಶಿಸಿರುವುದರಿಂದ ಏಪ್ರಿಲ್ 14 ರವರೆಗೆ ಯಾರೂ ಕೂಡ ಹೊರ ಬರಬಾರದೂ ಆದರೂ ಲಾಕ್ ಡೌನ್ ಉಲ್ಲಂಘಿಸಿ ಹೊರ ಬಂದಿದ್ದೇ ಆದರೆ  ಅಂತವರನ್ನು  ಏನು ಮಾಡುವಂತೆ ಸಿಎಂ ಯಡಿಯೂರಪ್ಪನವರು ಜಿಲ್ಲಾಧಿಕಾರಿಗಳಿಗೆ ಆದೇಶ ನೀಡಿದ್ದಾರೆ ಗೊತ್ತಾ?

 

ಮಾರಕ ಕೊರೊನಾ ಸೋಂಕು ರಾಜ್ಯದ್ಯಂತ ತಲ್ಲಣ ಸೃಷ್ಟಿಸಿದೆ. ಈ ನಡುವೆ, ದೇಶಾದ್ಯಂತ ಏ.೧೪ರವರೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಇಷ್ಟಿದ್ದರೂ ಜನತೆ ಮಾತ್ರ ಈ ಲಾಕ್ ಡೌನ್ ಉಲ್ಲಂಘಿಸಿ ರಸ್ತೆಗಳಿಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ಉಲ್ಲಂಘಿಸುವವರನ್ನು ಅರೆಸ್ಟ್ ಮಾಡುವಂತೆ ಸಿಎಂ ಯಡಿಯೂರಪ್ಪ ಎಲ್ಲ ಜಿಲ್ಲಾಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.

 

ಇಂದು ವಿಧಾನಸೌಧದಲ್ಲಿ ಸಿಎಂ ಬಿ.ಎಸ್.ವೈ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು. ಈ ವೇಳೆ, ಜಿಲ್ಲೆಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡು ಕೆಲ ನಿರ್ದೇಶನಗಳನ್ನು ನೀಡಿದರು. ದೇಶಾದ್ಯಂತ ಕೊರೊನಾ ತಡೆಗೆ ಲಾಕ್ ಡೌನ್ ಘೋಷಿಸಲಾಗಿದೆ. ಹೀಗಿದ್ದರೂ ರಾಜ್ಯದ ವಿವಿಧೆಡೆ ಲಾಕ್ ಡೌನ್ ಆದೇಶ ಉಲ್ಲಂಘಿಸಿರುವುದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಲಾಕ್ ಡೌನ್ ಆದೇಶ ಕಟ್ಟುನಿಟ್ಟಾಗಿ ಪಾಲಿಸಬೇಕಿದ್ದು, ಅದಕ್ಕಾಗಿ ಶಿಸ್ತು ಕ್ರಮಕ್ಕೆ ಸಿಎಂ ಸೂಚಿಸಿದ್ದಾರೆ. ಲಾಕ್ ಡೌನ್ ಆದೇಶ ಉಲ್ಲಂಘಿಸಿದವರನ್ನು ಅರೆಸ್ಟ್ ಮಾಡಿ ಎಂದು ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.

 

ಇದರೊಂದಿಗೆ ರಾಜ್ಯದ ಎಲ್ಲ ಗಡಿಗಳನ್ನು ಸೀಲ್ ಮಾಡಿ, ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ರಾಜ್ಯ ಸರ್ಕಾರಕ್ಕೆ ತಲೆನೋವಾಗಿದ್ದು, ಕಾಸರಗೋಡಿನಿಂದ ಬರುವವರ ವಿರುದ್ಧ ತೀವ್ರ ವಹಿಸುವಂತೆ ಸಿಎಂ ಸೂಚಿಸಿದ್ದಾರೆ. ಇನ್ನು ರಾಜ್ಯದ್ಯಂತ ಖಾಸಗಿ ಕ್ಲಿನಿಕ್ ಗಳನ್ನು ಬಂದ್ ಮಾಡುವಂತಿಲ್ಲ. ಒಂದು ವೇಳೆ, ಬಂದ್ ಮಾಡಿದರೆ ಅಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಎಲ್ಲ ಜಿಲ್ಲಾಧಿಕಾರಿಗಳಿದೆ ಸೂಚಿಸಿದ್ದಾರೆ. ಇದರೊಂದಿಗೆ ಎಲ್ಲ ಜಿಲ್ಲೆಗಳಲ್ಲಿ ಕೋವಿಡ್-೧೯ರ ರೋಗಿಗಳಿಗೆ ಆಸ್ಪತ್ರೆಗಳಲ್ಲಿ ೫೦ ಹಾಸಿಗೆಗಳನ್ನು ಮೀಸಲಿಡಬೇಕು. ವೈದ್ಯರು, ನರ್ಸ್ ಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗೆ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸುವ ಮಾಲೀಕರಿಗೆ ಎಚ್ಚರಿಕೆ ನೀಡುವಂತೆಯೂ ಸಿಎಂ ಸ್ಪಷ್ಟಪಡಿಸಿದ್ದಾರೆ.

 

ಇದೇ ವೇಳೆ, ಅಗತ್ಯ ವಸ್ತುಗಳ ಬೆಲೆಯನ್ನು ಹೆಚ್ಚಳ ಮಾಡಿ ಮಾರಾಟ ಮಾಡಿದರೆ ಅಂಹತವರ ವಿರುದ್ಧವೂ ಕಠಿಣ ಕ್ರಮ ಜರುಗಿಸಿ ಎಂದು ಸಿಎಂ ಎಲ್ಲ ಡಿಸಿಗಳಿಗೆ ಸೂಚಿಸಿದ್ದಾರೆ

Find out more: