ನವದೆಹಲಿ: ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ದಿನದಿಂದ ದಿನಕ್ಕೆ ಹೆಚ್ಚಿಸಿದ್ದು ಸಾಕಷ್ಟು ಜನರನ್ನು ಬಲಿತೆಗೆದುಕೊಳ್ಳುತ್ತಿದೆ. ಈ ಕೊರೋನಾ ವೈರಸ್‌ನಿಂದ ಇದುವರೆಗೆ ಎಷ್ಟು ಜನರಿಗೆ ಹರಡಿದೆ ಹಾಗೂ ಎಷ್ಟು ಜನರನ್ನು ಬಲಿ ತೆಗೆದು ಕೊಂಡಿದೆ ಎಂಬುದರ ಕಂಪ್ಲೀಟ್ ಡೀಟೇಲ್ಸ್ ಇಲ್ಲದೆ

 

ಕಳೆದ 24 ಗಂಟೆಯಲ್ಲಿ 479 ಕೋವಿಡ್ 19 ಸೋಂಕು ಪೀಡಿತರ ಪ್ರಕರಣ ಪತ್ತೆಯಾಗಿದ್ದು, 11 ಮಂದಿ ಸಾವನ್ನಪ್ಪಿದ್ದಾರೆ.ಇದರೊಂದಿಗೆ ದೇಶದಲ್ಲಿ ಕೋವಿಡ್ ವೈರಸ್ ಪೀಡಿತರ ಸಂಖ್ಯೆ 3374 ಕ್ಕೆ ಏರಿದ್ದು, ಸಾವಿನ ಸಂಖ್ಯೆ ೮೦ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

 

ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಕೇಂದ್ರ ಆರೋಗ್ಯ ಇಲಾಖೆಯ ಜಂಟಿ ಕಾರ್ಯದರ್ಶಿ ಲಾವ್ ಅಗರ್ವಾಲ್,

ಶನಿವಾರದವರೆಗೆ472 ನೂತನ ಕೋವಿಡ್ 19 ಪ್ರಕರಣಗಳು ಪತ್ತೆಯಾಗಿದೆ. ಇವರಲ್ಲಿ 267 ಜನರು ಗುಣಮುಖರಾಗಿದ್ದಾರೆ ಎಂದು  ತಿಳಿಸಿದ್ದಾರೆ. ಉತ್ತರಪ್ರದೇಶದಲ್ಲಿ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 276 ಕ್ಕೆ ಏರಿದ್ದು, ಏಪ್ರಿಲ್ 5 ರಂದು 48  ಹೊಸ ಪ್ರಕರಣಗಳು ಪತ್ತೆಯಾಗಿವೆ. ಆಗ್ರಾದಲ್ಲಿ ಮೂವರ ವರದಿ ಪಾಸಿಟಿವ್ ಎಂದು ಬಂದಿದೆ ಎಂದು ವರದಿ ತಿಳಿಸಿದೆ.

 

ಮುಂಬೈನಲ್ಲಿ ಭಾನುವಾರ ಪರೀಕ್ಷೆ ನಡೆಸಿದ 29  ಮಂದಿಯಲ್ಲಿ ಕೋವಿಡ್ 19 ಸೋಂಕು ಇರುವ ಬಗ್ಗೆ ಪಾಸಿಟಿವ್ ವರದಿ ಬಂದಿದೆ. ಮಹಾರಾಷ್ಟ್ರದಲ್ಲಿ ಒಟ್ಟು ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 290 ಕ್ಕೆ ಏರಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ತಿಳಿಸಿದ್ದಾರೆ.

 

ಏಪ್ರಿಲ್ 4 ರವರೆಗೆ ಮಹಾರಾಷ್ಟ್ರದಲ್ಲಿ 32 ಮಂದಿ ಸಾವನ್ನಪ್ಪಿದ್ದರು. ಇದರಲ್ಲಿ 22  ಮಂದಿ ಮುಂಬೈ, ಇಬ್ಬರು ಪುಣೆ, ಐವರು ಮುಂಬೈ ಮಹಾನಗರಪಾಲಿಕೆ, ಬುಲ್ದಾನಾ, ಜಲ್ಗಾಂವ್ ಮತ್ತು ಅಮರಾವತಿ ಪ್ರದೇಶದಲ್ಲಿ ತಲಾ ಒಬ್ಬರು ಸೋಂಕು ಪೀಡಿತರು ಇದ್ದಿರುವುದಾಗಿ ವರದಿ ತಿಳಿಸಿದೆ. ಔರಾಂಗಬಾದ್ ನ ಎಂಟು ಜಿಲ್ಲೆಗಳಲ್ಲಿ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ಭಾಗಿಯಾಗಿದ್ದ265  ಮಂದಿ ಮಹಾರಾಷ್ಟ್ರಕ್ಕೆ ವಾಪಸ್ ಆಗಿದ್ದರು ಎಂದು ವರದಿ ತಿಳಿಸಿದೆ.

ಜಮ್ಮು ಕಾಶ್ಮೀರದಲ್ಲಿ ಭಾನುವಾರ 14 ಮಂದಿಗೆ ಮಾರಣಾಂತಿಕ ಕೋವಿಡ್ 19 ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಜಮ್ಮುಕಾಶ್ಮೀರದಲ್ಲಿ ಕೋವಿಡ್ ಸೋಂಕು ಪೀಡಿತರ ಸಂಖ್ಯೆ 106 ಕ್ಕೆ ಏರಿದೆ. ನಾಲ್ಕು ಮಂದಿ ಸಂಪೂರ್ಣವಾಗಿ ಚೇತರಿಸಿಕೊಂಡಿದ್ದಾರೆ ಎಂದು ವರದಿ ವಿವರಿಸಿದೆ.

 

ಕೇರಳದಲ್ಲಿ ಭಾನುವಾರ ಮತ್ತೆ ಎಂಟು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ 256 ಮಂದಿಗೆ ಪಾಸಿಟಿವ್ ಎಂದು ವರದಿ ಬಂದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ ಕೇರಳದಲ್ಲಿ 314  ಮಂದಿ ಗುಣಮುಖರಾಗಿದ್ದಾರೆ ಎಂದು ಆರೋಗ್ಯ ಸಚಿವೆ ಶೈಲಜಾ ತಿಳಿಸಿದ್ದಾರೆ.

 

ತಮಿಳುನಾಡಿನಲ್ಲಿ ಭಾನುವಾರದಂದು 86 ಕೋವಿಡ್ 19 ನೂತನ ಪ್ರಕರಣಗಳು ಪತ್ತೆಯಾಗಿದ್ದವು. ಇದರಲ್ಲಿ 85 ಮಂದಿ ನಿಜಾಮುದ್ದೀನ್ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡವರು ಎಂದು ವರದಿ ತಿಳಿಸಿದೆ. ಇದರೊಂದಿಗೆ ರಾಜ್ಯದಲ್ಲಿ ಕೋವಿಡ್ ಪೀಡಿತರ ಸಂಖ್ಯೆ 571 ಕ್ಕೆ ಏರಿದೆ. ಸಾವಿನ ಸಂಖ್ಯೆ ೫ಕ್ಕೆ ಏರಿದೆ ಎಂದು ವರದಿ ತಿಳಿಸಿದೆ.

 

 

 

 

 

Find out more: