ರಾಜ್ಯ ಸರ್ಕಾರದಿಂದ ಕೆಲವು ಇಲಾಖೆಗಳು ಕಾರ್ಯನಿರ್ವಹಿಸುವಂತೆ ಆದೇಶ: ಅಷ್ಟಕ್ಕೂ ಆ ಇಲಾಖೆಗಳು ಯಾವುವು ಗೊತಾ..?

Soma shekhar

ಕೊರೋನಾ ವೈರಸ್‌ನ ಪರಿಣಾಮದಿಂದ ಇಡೀ ದೇಶವೇ ಲಾಕ್ ಡೌನ್‌ನಲ್ಲಿ ಬಂದಿಯಾಗಿರುವುದರಿಂದ ದೇಶದ ಆರ್ಥಿಕ ಪರಿಸ್ಥಿತಿ ಕುಸಿತವಾಗಿದೆ. ಇದನ್ನು ಸರಿದೂಗಿಸುವ ನಿಟ್ಟಿನಲ್ಲಿ ಹಂತಂತವಾಗಿ ಲಾಕ್ ಡೌನ್ ಸಡಿಲಿಕೆಯನ್ನು ಮಾಡಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ಕೆಲವು ಐಟಿ ಕಂಪನಿಗಳು ಕಾರ್ಯನಿರ್ವಹಿಸಲು ಸಡಿಲಿಕೆಗಳನ್ನು ಮಾಡಿಕೊಡಲಾಗಿದೆ.  ಇದರ ಜೊತೆಗೆ ಸರ್ಕಾರದ ಕೆಲವು ಇಲಾಖೆಗಳನ್ನೂ ಕೂಡ ಸಡಿಲಿಕೆಯನ್ನು ಮಾಡುವುದರ ಮೂಲಕ ಉದ್ಯೋಗಿಗಳಿಗೆ ಕರ್ತವ್ಯ ನಿರ್ವಹಿಸಲು ಅವಕಾಶ ಮಾಡಿಕೊಡಲಾಗಿದೆ. ಅಷ್ಟಕ್ಕೂ ಯಾವ ಯಾವ ಇಲಾಖೆಗಳು ಕಾರ್ಯನಿರ್ವಹಿಸಲಿವೆ ಗೊತ್ತಾ..?

 

ಈಗಾಗಲೇ ರಾಜ್ಯ ಸರ್ಕಾರ ಅಗತ್ಯ ಸೇವೆ ಒದಗಿಸುತ್ತಿರುವ ೧೪ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸುತ್ತೋಲೆಯಲ್ಲಿ ಸೂಚಿತ್ತು. ಈ ಬಳಿಕ ಇದೀಗ ಮತ್ತೆ ನಾಲ್ಕು ಇಲಾಖೆಯ ಅಧಿಕಾರಿಗಳು ಸೇರಿದಂತೆ, ಸರ್ಕಾರಿ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಎ, ಗ್ರೂಪ್ ಬಿ ವೃಂದದ ಎಲ್ಲಾ ಅಧಿಕಾರಿಗಳು, ಗ್ರೂಪ್ ಸಿ, ಗ್ರೂಪ್ ಡಿ ವೃಂದಗಳ ಶೇ.೩೩ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ಹೊರಡಿಸಿದೆ.

 

ಈ ಕುರಿತಂತೆ ಸುತ್ತೋಲೆ ಹೊರಡಿಸಿರುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ ಭಾಸ್ಕರ್, ರಾಜ್ಯದಲ್ಲಿನ ಸಚಿವಾಲಯ ಸೇರಿದಂತೆ ರಾಜ್ಯ ಮಟ್ಟದ ಕಚೇರಿಗಳಲ್ಲಿ ಹಾಗೂ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಸೇವೆಗಳನ್ನು ಒದಗಿಸುತ್ತಿರುವ 18 ಇಲಾಖೆಗೆಳ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಿದ್ದಾರೆ.

 

ಈ ಮೊದಲು 14 ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸುತ್ತೋಲೆಯಲ್ಲಿ ಸೂಚಿಸಿದ್ದರು. ಇದರೊಂದಿಗೆ ಕೃಷಿ ಉತ್ಪನ್ನ ಮಾರುಕಟ್ಟೆ, ಕೃಷಿ ಇಲಾಖೆ, ಕಾರ್ಮಿಕ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳನ್ನು ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ವರ್ಗದ ಸಿಬ್ಬಂದಿಗಳು, ಅಧಿಕಾರಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಸುತ್ತೋಲೆಯಲ್ಲಿ ಸೂಚಿಸಿದ್ದಾರೆ.

ಇನ್ನೂ ಮುಂದುವರೆದು ಈ ಇಲಾಖೆಗಳಲ್ಲದೇ ಸರ್ಕಾರಿ ನಿಗಮ, ಮಂಡಳಿ, ಪ್ರಾಧಿಕಾರಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೂಪ್ ಎ, ಗ್ರೂಪ್ ಬಿ ವೃಂದದ ಎಲ್ಲಾ ಅಧಿಕಾರಿಗಳು, ಗ್ರೂಪ್ ಸಿ, ಗ್ರೂಪ್ ಡಿ ವೃಂದಗಳ ಶೇ.೩೩ರಷ್ಟು ಸಿಬ್ಬಂದಿಗಳು ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶಿಸಿದ್ದಾರೆ. ಜೊತೆಗೆ ಈ ಸುತ್ತೋಲೆ ದಿನಾಂಕ 20-೦4-2೦2೦ ರಿಂದ ದಿನಾಂಕ ೦3-೦5-2೦2೦ರ ವರೆಗೆ ಜಾರಿಯಲ್ಲಿರುತ್ತದೆ ಎಂಬುದಾಗಿ ತಿಳಿಸಿದ್ದಾರೆ.

 

 

 

Find Out More:

Related Articles: