ಕೊರೋನಾ ವೈರಸ್ ಇಂದಾಗಿ ಇಡೀ ದೇಶವೇ ತತ್ತರಿಸಿದೆ. ಕೊರೋನಾ ವೈರಸ್ ಅನ್ನು ತಡೆಯುವ ಉದ್ದೇಶದಿಂದ ಈಗಾಗಲೇ 3ಬಾರಿ ಲಾಕ್ ಡೌನ್ ಮಾಡಲಾಗಿದ್ದರೂ ಕೂಡ ಕೊರೋನಾ ವೈರಸ್ ಕಡಿಮೆಯಾಗದ ಕಾರಣ ನಾಲ್ಕನೇ ಆಕ್ ಡೌನ್ ಮಾಡುವ ಉದ್ದೇಶವನ್ನು ಇಟ್ಟುಕೊಂಡು ಲಾಕ್ ಡೌನ್ ಇಂದಾಗಿ ಯಾವುದೇ ರೀತಿ ಆರ್ಥಿಕ ಸಂಕಷ್ಟ ಎದುರಾಗುವುದನ್ನು ತಡೆಯುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ 20ಲಕ್ಷ ಕೋಟಿ ಅನ್ನು ಘೋಷಣೆಯನ್ನು ಮಾಡಲಾಗಿದೆ. ಇದನ್ನು ವಿತ್ತ ಸಚಿವೆ ಎಲ್ಲಾ ರಂಗಗಳಿಗೂ ಹಣವನ್ನು ವಿಭಾಗಿಸಲಾಗಿದೆ. ಅಷ್ಟಕ್ಕೂ ಯಾವ ಯಾವ ಕ್ಷೇತ್ರಗಳಿಗೆ ಎಷ್ಟೆಷ್ಟು ಹಣವನ್ನು ನೀಡಲಾಗಿದೆ ಗೊತ್ತಾ..? 

ಕೊರೊನಾ ಸೋಂಕು ನಿವಾರಣೆಗೆ ಈಗಾಗಲೇ ಪ್ರಧಾನಿ ಮೋದಿಯವರು ದೇಶಾದ್ಯಂತ ಲಾಕ್ ಡೌನ್ ಗೆ ಕರೆ ನೀಡಿದ್ದು, ಇದರಿಂದಾಗಿ ಜನಜೀವನ ಮತ್ತು ಆರ್ಥಿಕ ಪರಿಸ್ಥಿತಿ ಸ್ಥಗಿತಗೊಂಡಿದೆ. ಈ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ ಕೊರೊನಾ ಬಿಕ್ಕಟ್ಟಿನಿಂದ ಹೊರಬರಲು  1.70 ಕೋಟಿ ಲಕ್ಷ ಹಣವನ್ನು ಬಿಡುಗಡೆ ಮಾಡಲಾಗುವುದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.


ಪ್ರಧಾನಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಈಗಾಗಲೇ 5 ಕೆ.ಜಿ ಅಕ್ಕಿ ಮತ್ತು ಗೋಧಿಯನ್ನು ನೀಡಲಾಗುತ್ತಿದ್ದು, ಇದರ ಜೊತೆಗೆ ಹೆಚ್ಚುವರಿ ಮೂರು ತಿಂಗಳು ಪ್ರತಿ ವ್ಯಕ್ತಿಗೆ 5  ಕೆ.ಜಿ.ಅಕ್ಕಿಯನ್ನು ನೀಡಲಾಗುವುದು. ವಲಸೆ ಕಾರ್ಮಿಕರು, ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿನ ಬಡವರಿಗೆ ಯೋಜನೆ ಸಿದ್ಧವಾಗಿದ್ದು, ಯಾರೂ ಕೂಡ ಹಸಿವಿನಿಂದ ಬಳಲಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ. ೮.೬೯ ಕೋಟಿ ಮೊತ್ತವನ್ನು ರೈತರಿಗೆ ಮೀಸಲಿರಿಸಿದ್ದು, ಪ್ರತಿ ಕಾರ್ಮಿಕರಿಗೆ ೨ ಸಾವಿರ ರೂಪಾಯಿಯನ್ನು ಹೆಚ್ಚುವರಿಯಾಗಿ ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವವರಿಗೆ, ಸೋಂಕಿನಿಂದ ಅಪಾಯ ಇರುವವರಿಗೆ ಹಾಗೂ ಆರೋಗ್ಯ ಕಾರ್ಯಕರ್ತರಿಗೆ ೫೦ ಲಕ್ಷ ವಿಮೆ ನೀಡಲಾಗುವುದು.

ವಿಧವೆಯರು, ಹಿರಿಯ ನಾಗರಿಕರು, ದಿವ್ಯಾಂಗರು ಅಂಗವಿಕರಿಗೆ ಪರಿಹಾರ ಮೊತ್ತವಾಗಿ 1,000 ರೂಪಾಯಿ ನೀಡಲಿದ್ದು, ಎರಡು ಕಂತುಗಳಲ್ಲಿ ಹಣ ಬಿಡುಗಡೆಯಾಗಲಿದೆ. ಇದರಿಂದ ಸುಮಾರು 3 ಕೋಟಿ ಜನರಿಗೆ ಇದರಿಂದ ಅನುಕೂಲವಾಗಲಿದೆ.

3 ತಿಂಗಳ ಕಾಲ ಮಹಿಳಾ ಜನ ಧನ್ ಖಾತೆಗೆ 500 ರೂ. ಮೀಸಲಿರಿಸಿದ್ದು, ಉಜ್ವಲ ಯೋಜನೆ ಅಡಿಯಲ್ಲಿ ಅಡುಗೆ ಅನಿಲ ಸಿಲಿಂಡರ್ ಸಂಪರ್ಕ ಪಡೆದಿರುವ ಮಹಿಳೆಯರಿಗೆ 3 ತಿಂಗಳ ವರೆಗೂ ಮೂರು ಅನಿಲ ಸಿಲಿಂಡರ್ ಅನ್ನು ಉಚಿತವಾಗಿ ವಿತರಣೆ ಮಾಡಲಾಗುವುದು. ಇದರಿಂದ. ಈ ಯೋಜನೆಯಿಂದಾಗಿ 8 ಕೋಟಿ ಮಹಿಳೆಯರು ಲಾಭ ಪಡೆಯಲಿದ್ದಾರೆ.


ಸಂಸ್ಥೆಗಳು ಮತ್ತು ಉದ್ಯೋಗಿಗಳ ಮುಂದಿನ ತಿಂಗಳ ಇಪಿಎಫ್ ಮೊತ್ತವನ್ನು ಸರ್ಕಾರವೇ ಭರಿಸಲಿದ್ದು, 100 ಕ್ಕೂ ಹೆಚ್ಚು ಉದ್ಯೋಗಿಗಳು ಕೆಲಸ ನಿರ್ವಹಿಸುತ್ತಿರುವ ಸಂಸ್ಥೆಗಳು ಹಾಗೂ ತಿಂಗಳಿಗೆ 15000 ರೂ ವರೆಗೆ ಸಂಬಳ ಪಡೆಯುತ್ತಿರುವ ಉದ್ಯೋಗಿಗಳಿರುವ ಸಂಸ್ಥೆಗಳಿಗೆ ಈ ಯೋಜನೆ ಅನ್ವಯವಾಗಲಿದೆ.

ಇಪಿಎಫ್ ಯೋಜನೆಯಲ್ಲಿ ತಿದ್ದುಪಡಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಈ ಮೂಲಕ ಮರು ಪಾವತಿ ಮಾಡದಿರದ ವ್ಯವಸ್ಥೆಯಡಿ ಶೇ.75ರಷ್ಟು ಇಪಿಎಫ್ ಮುಂಗಡ ಮೊತ್ತ ಪಡೆಯಲು ಅವಕಾಶ ಸಿಗುತ್ತದೆ. ಕಾರ್ಮಿಕರು 3 ತಿಂಗಳ ಸಂಬಳ ಅಥವಾ ಶೇ.75ರಷ್ಟು ಮುಂಗಡ ಮೊತ್ತ ಈ ಎರಡರಲ್ಲಿ ಯಾವುದು ಕಡಿಮೆಯೋ ಅದನ್ನು ಪಡೆಯಬಹುದಾಗಿದೆ. ಇದರಿಂದ ಇಪಿಎಫ್ ನೋಂದಾಯಿಸಿರುವ ಸುಮಾರು 4.8 ಕೋಟಿ ಉದ್ಯೋಗಿಗಳಿಗೆ ಅನುಕೂಲವಾಗಲಿದೆ.

ಈ ಎಲ್ಲಾ ಯೋಜನೆಗಳನ್ನು ಶೀಘ್ರವಾಗಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಢಿಯಲ್ಲಿ ವಿವರಿಸಿದ್ದಾರೆ.

 

Find out more: