ವಿದೇಶಿ ಪ್ರಯಾಣಿಕರನ್ನು ಕ್ವಾರಂಟೈನ್ ನಲ್ಲಿ ಇಡುವ ಅಗತ್ಯ ವಿಲ್ಲ: ನಾಗರಿಕ ವಿಮಾನಯಾನ ಸಚಿವ ಹರ್ದೀಪ್ಸಿಂಗ್ ಅಭಿಪ್ರಾಯ
ಕೊರೋನಾ ಸೋಮಕು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದರೂ ಕೂಡ ದೇಶದಲ್ಲಿ ಲಾಕ್ ಡೌನ್ ಸಡಿಲಿಕೆಯನ್ನು ಮಾಡಲಾಗಿರುವುದರಿಂದ ದಿನದಿಂದ ದಿನಕ್ಕೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಆದರೆ ವಿದೇಶದಿಂದ ಬಂದಂತಹ ಪ್ರಯಾಣಿಕರನ್ನು ಕ್ವಾರಂತೈನಲ್ಲಿಡಬೇಕು ಎಂದು ಸರ್ಕಾರ ತಿಳಿಸಲಾಗಿದೆ ಆದರೆ ಈಗ ವಿದೇಶದಿಂದ ಬಂದವರನ್ನು ಕ್ವಾರಂಟೈನ್ ನಲ್ಲಿ ಇಡುವುದು ಅಗತ್ಯವಿಲ್ಲ ಎಂದು ಹೇಳಲಾಗುತ್ತಿದೆ ಏಕೆ ಗೊತ್ತ..? ಇಲ್ಲಿದೆ ನೋಡಿ.
ವಿಮಾನದ ಪ್ರಯಾಣಿಕರ ಮೊಬೈಲ್ನಲ್ಲಿರುವ ಆರೋಗ್ಯ ಸೇತು ಆಯಪ್ ಹಸಿರು ಬಣ್ಣ ತೋರುತ್ತಿದ್ದರೆ ಅಂಥವರನ್ನು ಕ್ವಾರಂಟೈನ್ಗೆ ಕಳುಹಿಸುವ ಅಗತ್ಯವಾದರೂ ಏನು ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ಸಿಂಗ್ ಪುರಿ ಪ್ರಶ್ನಿಸಿದ್ದಾರೆ.
ಸೋಮವಾರದಿಂದ ದೇಶಾದ್ಯಂತ ದೇಶಿಯ ವಿಮಾನ ಸಂಚಾರ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಅನುಮಾನಗಳನ್ನು ಆನ್ಲೈನ್ ಮೂಲಕ ಪರಿಹರಿಸಿದರು.
ಆಗಸ್ಟ್ ಅಥವಾ ಸೆಪ್ಟೆಂಬರ್ ಆರಂಭಕ್ಕೂ ಮುನ್ನವೇ ಸಂಪೂರ್ಣವಾಗಿ ಅಲ್ಲದಿದ್ದರೂ ಸಾಕಷ್ಟು ಸಂಖ್ಯೆಯ ಅಂತಾರಾಷ್ಟ್ರೀಯ ವಿಮಾನ ಸಂಚಾರವನ್ನು ಆರಂಭಿಸಲು ಸರ್ಕಾರ ಉದ್ದೇಶಿಸಿದೆ. ಆದರೆ ಆಗಿನ ಪರಿಸ್ಥಿತಿಯನ್ನು ಆಧರಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಆದರೆ ಹರ್ದೀಪ್ ಸಿಂಗ್ ಪುರಿ ಅವರ ಹೇಳಿಕೆಯನ್ನು ಖಂಡಿಸಿರುವ ಕೇರಳ, ಕರ್ನಾಟಕ ಮತ್ತು ಅಸ್ಸಾಂ ಸೇರಿ ಆರು ರಾಜ್ಯಗಳು ಏನೇ ಆದರೂ ಅನ್ಯ ರಾಜ್ಯಗಳಿಂದ ಬರುವ ಪ್ರಯಾಣಿಕರನ್ನು ಕಡ್ಡಾಯ ಸಾಂಸ್ಥಿಕ ಕ್ವಾರಂಟೈನ್ಗೆ ಒಳಪಡಿಸುವುದಾಗಿ ಹೇಳಿವೆ.
ಶುಕ್ರವಾರ ಈ ಬಗ್ಗೆ ಸ್ಪಷ್ಟನೆ ನೀಡಿದ್ದ ಕರ್ನಾಟಕ ಅತಿಹೆಚ್ಚು ಕರೊನಾ ಸೋಂಕಿತರು ಇರುವ ರಾಜ್ಯಗಳಿಂದ ವಿಮಾನದಲ್ಲಿ ಬರುವ ಪ್ರಯಾಣಿಕರು ಕಡ್ಡಾಯವಾಗಿ 7 ದಿನ ಸಾಂಸ್ಥಿಕ ಕ್ವಾರಂಟೈನ್ಗೆ ಹಾಗೂ 7 ದಿನ ಹೋಂ ಕ್ವಾರಂಟೈನ್ಗೆ ಒಳಗಾಗಬೇಕು ಎಂದು ಹೇಳಿತ್ತು.
ತಮಿಳುನಾಡಿನಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನೇದಿನೆ ಹೆಚ್ಚಾಗುತ್ತಿದೆ. ಜತೆಗೆ ನಗರ ಸಾರಿಗೆ ಸಂಪೂರ್ಣವಾಗಿ ಸ್ತಬ್ಧವಾಗಿದೆ. ಹೀಗಾಗಿ, ವಿಮಾನದಲ್ಲಿ ಬರುವ ಪ್ರಯಾಣಿಕರಿಗೆ ತಮ್ಮ ಮನೆಗಳಿಗೆ ತೆರಳಲು ಕಷ್ಟವಾಗಬಹುದು. ಆದ್ದರಿಂದ, ಚೆನ್ನೈಗೆ ವಿಮಾನಯಾನ ಆರಂಭಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮನವಿ ಮಾಡಿಕೊಂಡಿತ್ತು.
ಪರಿಷ್ಕೃತ ಮಾರ್ಗಸೂಚಿಗಳ ಪ್ರಕಾರ ವಿಮಾನ ಹತ್ತುವ ಮುನ್ನ ಪ್ರತಿಯೊಬ್ಬ ಪ್ರಯಾಣಿಕರ ದೇಹದ ಉಷ್ಣಾಂಶ ಪರಿಶೀಲಿಸಲಾಗುವುದು. ಆರೋಗ್ಯ ಸೇತು ಆಯಪ್ ಕೆಂಪು ಬಣ್ಣವನ್ನು ಸೂಚಿಸುತ್ತಿದ್ದರೆ ಅಂಥವರಿಗೆ ವಿಮಾನ ಹತ್ತಲು ಅವಕಾಶ ನೀಡುವುದಿಲ್ಲ. ಆದ್ದರಿಂದ, ಅವರನ್ನು ರೈಲು ಮತ್ತು ಬಸ್ಗಳ ಪ್ರಯಾಣಿರಂತೆ ಪರಿಗಣಿಸಬೇಕು. ಕ್ವಾರಂಟೈನ್ ವಿಷಯವಾಗಿ ಅದೇಕೆ ಇಷ್ಟು ಗೊಂದಲ ಮಾಡಿಕೊಳ್ಳಲಾಗುತ್ತಿದೆ ಎಂಬುದೇ ಅರ್ಥವಾಗುತ್ತಿಲ್ಲ ಎಂದು ನಾಗರಿಕ ವಿಮಾನಯಾನ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದರು.