ಕೊರೋನಾದಿಂದಾಗಿ ಇಡೀ ದೇಶವನ್ನೇ ಲಾಕ್ ಮಾಡಿದಂತಹ ಸಂದರ್ಭದಲ್ಲಿ ಎಲ್ಲಾ ಉದ್ದಿಮೆಗಳು, ಸರ್ಕಾರಿ ಕಚೇರಿಗಳು, ಕಾರ್ಖಾನೆಗಳನ್ನು, ಶಾಲಾ ಕಾಲೇಜುಗಳನ್ನು ಬಂದ್ ಮಾಡಲಾಗುತ್ತು.ಇಂದರಿಂದಾಗಿ ಎಸ್ಎಸ್ಎಲ್ ಸಿ ವಿದ್ಯಾರ್ಥಿಯರನ್ನು ಹೊರತು ಪಡಿಸಿ ಉಳಿದೆಲ್ಲಾ ವಿದ್ಯಾರ್ಥಿಗಳನ್ನು ಪರೀಕ್ಷೆಗಳಿಲ್ಲದೆ ತೇರ್ಗಡೆಯನ್ನು ಆಡಲಾಗಿತ್ತು. ಆದರೆ ಈಗ ಶಾಲಾ ಕಾಲೇಜುಗಳು ಆರಂಭವಾಗುವ ಸಮಯ ಬಂದಿದ್ದರೂ ಕೂಡ ಕೊರೋನಾ ಕಾರಣದಿಂದ ಶಾಲಾ ಕಾಲೇಜುಗಳನ್ನು ತೆರೆಯಲು ಯೋಚಿಸುತ್ತಿದ್ದಾರೆ. ಹಾಗಾಗಿ ಎಲ್ಲರಿಗೂ ಆನ್ ಲೈನ್ ಕ್ಲಾಸ್ ಗಳನ್ನು ಮಾಡಲು ಅವಶ್ಯಕವಾಗಿ ಬೇಕಾದ ಇಂಟರ್ನೆಟ್ ಅನ್ನು ಉಚಿತವಾಗಿ ನೀಡಲಿದ್ದಾರೆ
ಹೌದು ಉನ್ನತ ಶಿಕ್ಷಣ ಇಲಾಖೆಯಿಂದ ಲ್ಯಾಪ್‌ಟಾಪ್ ಪಡೆದಿರುವ 1.10 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಇಂಟರ್‌ನೆಟ್ ಸೇವೆ ಒದಗಿಸುವ ಸಂಬಂಧ ಈ ಸೇವೆ ಒದಗಿಸುವ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿದೆ ಲ್ಯಾಪ್ ಟಾಪ್ ಕೊಟ್ಟ ನಂತರ ಅವುಗಳ ಸದುಪಯೋಗ ಸರಿಯಾಗಿ ಆಗುತ್ತಿಲ್ಲ. ಈ ಕಾರಣಕ್ಕೆ ಇಂಟರ್‌ನೆಟ್ ಸೇವೆ ಒದಗಿಸುವಂತೆ ಕೋರಲಾಗಿದೆ. ಇದಕ್ಕೆ ಕಂಪನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಅಗತ್ಯ ಮಾಹಿತಿ ಒದಗಿಸುವಂತೆ ಕೋರಿವೆ. ಇದರ ನಡುವೆ ಆನ್ ಲೈನ್ ಕಂಟೆಂಟ್ ಕೂಡ ಒದಗಿಸುವ ಕೆಲಸ ಇಲಾಖೆಯಿಂದ ಆಗುತ್ತಿದೆ ಎಂದು ಎಂದು ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಲ್ಯಾಪ್ ಟಾಪ್ ಇಲ್ಲದವರಿಗೆ ಆನ್ ಲೈನ್ ಶಿಕ್ಷಣ ಪಡೆಯಲು ತೊಂದರೆಯಾಗುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸದ್ಯ ಲ್ಯಾಪ್ ಟಾಪ್ ಹೊಂದಿರುವವರು ಅದನ್ನು ಸದ್ಬಳಕೆ ಮಾಡಿಕೊಳ್ಳಲು ಬೇಕಾದ ಸೌಲಭ್ಯ ಒದಗಿಸುವುದು ನಮ್ಮ ಗುರಿ. ಲ್ಯಾಪ್ ಟಾಪ್ ಇಲ್ಲದೇ ಇರುವವರಿಗೆ ಏನು ಎಂಬುದನ್ನು ಮುಂದೆ ತೀರ್ಮಾನ ಮಾಡಲಾಗುವುದು ಎಂದು ಹೇಳಿದ್ದಾರೆ.
ಪ್ರಥಮ ವರ್ಷದ 1.10 ಲಕ್ಷ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಿಸಿದ್ದು, ಮುಂದಿನ ಶೈಕ್ಷಣಿಕ ವರ್ಷದಲ್ಲಿ ಅವರು ದ್ವಿತೀಯ ಪದವಿಯಲ್ಲಿ ವ್ಯಾಸಂಗ ಮಾಡಲಿದ್ದಾರೆ. ಇವರಿಗೆ ಸಾಮಾನ್ಯ ತರಗತಿ ಜತೆಗೆ ಆನ್ ಲೈನ್ ಮೂಲಕ ಶಿಕ್ಷಣ ನೀಡುವ, ತರಬೇತಿ ಒದಗಿಸುವ ಬಗ್ಗೆಯು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಈಗಾಗಲೇ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿ ಆರಂಭವಾದರೂ ಇಂಟರ್ ನೆಟ್ ಸಮಸ್ಯೆ ಇದೆ. ಇದರ ಜತೆಗೆ ಸಾಕಷ್ಟು ವಿದ್ಯಾರ್ಥಿಗಳಲ್ಲಿ ಲ್ಯಾಪ್ ಟಾಪ್ ಕೂಡ ಇಲ್ಲ. ಈ ರೀತಿಯ ಸಮಸ್ಯೆ, ಸವಾಲುಗಳು ಬಂದಾಗ ಅದನ್ನು ಬಗೆಹರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಕೋವಿಡ್-19 ಲಾಕ್ ಡೌನ್ ಸಂದರ್ಭದಲ್ಲಿ ಅನಿಯಂತ್ರಿತ ಇಂಟರ್ ನೆಟ್ ಮತ್ತು ವಿದ್ಯುತ್ ಪೂರೈಕೆ ಮಾಡುವ ಮೂಲಕ ನಮ್ಮ ಸರ್ಕಾರ ಸೈ ಎನಿಸಿಕೊಂಡಿದ್ದು, ಅದೇ ಮಾದರಿಯಲ್ಲಿ ಈ ಸಮಸ್ಯೆಗೂ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಹೇಳಿದ್ದಾರೆ.