ಕೊರೊನಾ ವೈರಸ್ ದಿನದಿಂದ ದಿನಕ್ಕೆ ಎಆಜ್ಯದಲ್ಲಿ ಹೆಚ್ಚಾಗುತ್ತಿದ್ದು ಇದನ್ನು ತಡೆಯಲು ಸರ್ಕಾರದ ಕೈ ಸೋಲುತ್ತಿರುವುದರಿಂದ ಪುನಃ ರಾಜಯ್ವನ್ನು ಲಾಕ್ ಡೌನ್ ಮಾಡುವುದರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಈ ಕುರಿತು ಹಲವು ತಜ್ಞರು ಇದಕ್ಕೆ ಒಪ್ಪಗೆಯನ್ನು ನೀಡಿದರೂ ಕೂಡ ಕೆಲವು ಸಚಿವರು ಇದಕ್ಕೆ ಬೇಡ ಎಂದು ತಲೆಯಾಡಿಸಿದ್ದಾರೆ. ಆದರೆ ಇದು ರಾಜ್ಯದ ಜನರ ಸುರಕ್ಷತೆಯ ಪ್ರೆಶ್ನೆಯಾಗಿರುವುದರಿಂದ ಈ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು.
ಹೌದು ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಪುನಃ ಲಾಕ್‍ಡೌನ್ ವಿಸುವ ಬಗ್ಗೆ ನಾಳೆ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನವಾಗಲಿದೆ. ನಾಳೆ 11 ಗಂಟೆಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದ್ದು, ಲಾಕ್‍ಡೌನ್ ವಿಸ್ತರಣೆ ಮಾಡುವ ಕುರಿತಂತೆ ಸರ್ಕಾರ ತೀರ್ಮಾನ ಪ್ರಕಟಿಸಲಿದೆ.
ಕೇಂದ್ರ ಸರ್ಕಾರದ ನಿರ್ದೇಶನವಿಲ್ಲದೆ ರಾಜ್ಯಸರ್ಕಾರ ಮತ್ತೆ ಲಾಕ್‍ಡೌನ್ ವಿಸ್ತರಣೆ ಮಾಡುವ ಅಕಾರ ಇಲ್ಲ. ಆದರೆ, ಪರಿಸ್ಥಿತಿಗನುಗುಣವಾಗಿ ನೀವು ಯಾವುದೇ ತೀರ್ಮಾನ ಕೈಗೊಳ್ಳಬಹುದು ಎಂದು ಖುದ್ದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ಕೊಟ್ಟಿದ್ದಾರೆ.
ಈಗಾಗಲೇ ರಾಜ್ಯದ ಕೆಲವು ಭಾಗಗಳಲ್ಲಿ ಸಾರ್ವಜನಿಕರೇ ಸ್ವಯಂಪ್ರೇರಿತರಾಗಿ ಲಾಕ್‍ಡೌನ್ ವಿಸ್ತರಣೆ ಮಾಡಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ, ದಾವಣಗೆರೆ ಜಿಲ್ಲೆಯ ಚನ್ನಗಿರಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ, ತುಮಕೂರಿನ ಕುಣಿಗಲ್ ಸೇರಿದಂತೆ ಮತ್ತಿತರ ಕಡೆ ಸ್ವಯಂಪ್ರೇರಿತರಾಗಿಯೇ ಲಾಕ್‍ಡೌನ್ ವಿಸಿಕೊಂಡಿದ್ದಾರೆ.
ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಾದ್ಯಂತ ಲಾಕ್‍ಡೌನ್ ವಿಸ್ತರಿಸದೆ ಯಾವ ಯಾವ ಭಾಗಗಳಲ್ಲಿ ಹೆಚ್ಚಿನ ಕೊರೊನಾ ಪ್ರಕರಣಗಳು ಕಂಡುಬಂದಿವೆಯೋ ಅಂತಹ ಕಡೆ ವಿಸ್ತರಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಕಳೆದ ಎರಡು ವಾರಗಳಿಂದ ಸೋಂಕು ಹಾಗೂ ಸಾವಿನ ಪ್ರಕರಣಗಳು ಜತೆಗೆ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವ ಪ್ರಮಾಣಗಳನ್ನು ಜಿಲ್ಲಾವಾರು ಪರಿಗಣಿಸಿ ಲಾಕ್‍ಡೌನ್ ವಿಸ್ತರಣೆ ಮಾಡುವ ಸಂಭವವಿದೆ.
ರಾಜಧಾನಿ ಬೆಂಗಳೂರಿನ ದಕ್ಷಿಣ, ಪೂರ್ವ, ಪಶ್ಚಿಮ ವಲಯದ ಕೆಲವು ವಾರ್ಡ್‍ಗಳಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಜತೆಗೆ ಕಲಬುರಗಿ, ಯಾದಗಿರಿ, ಬೀದರ್, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ ಸೇರಿದಂತೆ ಮತ್ತಿತರ ಕಡೆ ಸೋಂಕು ಪ್ರಕರಣಗಳು ಹೆಚ್ಚುತ್ತಲೇ ಇವೆ. ರಾಜ್ಯಾದ್ಯಂತ ಲಾಕ್‍ಡೌನ್ ವಿಸ್ತರಣೆ ಮಾಡಿದರೆ ಪುನಃ ಆರ್ಥಿಕ ಚಟುವಟಿಕೆಗಳ ಮೇಲೆ ಗಂಭೀರ ಪರಿಣಾಮ ಬೀರಬಹುದೆಂಬ ಆತಂಕ ಸರ್ಕಾರವನ್ನು ಕಾಡುತ್ತಿದೆ. ಹೀಗಾಗಿ ಯಾವ ಯಾವ ಭಾಗಗಳಲ್ಲಿ ಹೆಚ್ಚಿನ ಪ್ರಕರಣಗಳಿವೆಯೋ ಅಂತಹ ಕಡೆ ಸೀಲ್‍ಡೌನ್ ಮಾಡುವ ಬಗ್ಗೆಯೂ ಸರ್ಕಾರ ಚಿಂತನೆ ನಡೆಸಿದೆ.