ಕೊರೋನಾ ವೈರಸ್ ರಾಜ್ಯ ರಾಜಧಾನಿಯಲ್ಲಿ ತನ್ನ ಆರ್ಭಟವನ್ನು ದಿನದಿಂದ ದಿನಕ್ಕೆ ಹೆಚ್ಚಿಸುತ್ತಲೇ ಇದೆ ಇದರಿಂದಾಗಿ ಬೆಂಗಳೂರಿನಲ್ಲಿ  ಕೋವಿಡ್ ಎಂದು ಗುರುತಿಸಲಾಗಿದ್ದ ಆಸ್ಪತ್ರೆಗಳೂ ಭರ್ತಿಯಾಗಿ ಆಸ್ಪತ್ರೆಗಳಲ್ಲಿ ಕೋವಿಡ್ ರೋಗಿಗಳಿಗೆ ಹಾಸಿಗಳ ಕೊರತೆ ಉಂಟಾಗಿ ನರಳಾಡುತ್ತಾ ಬೀದಿ ಬೀದಿಗಳಲ್ಲಿ ಹೆಣವಾಗುತ್ತಿದ್ದಾರೆ. ಇದರ ಜೊತೆಗೆ ವೆಂಟಿಲೇಟರಸ್ ಗಳ ಕೊರತೆಯೂ ಸಾಕಷ್ಟಿದೆ. ಇದಕ್ಕೆ ಸರ್ಕಾರ ವಿವಿಧ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದರ ಜೊತೆಗೆ ಕೊರೋನಾ ರೋಗಿಯ ಚಿಕಿತ್ಸೆಗೆ ಬೇಕಾದ  ಮಾಹಿತಿಯನ್ನು  ನೀಡಲಾಗುವುದು ಎಂದು ಹೇಳಲಾಗುತ್ತಿತ್ತು ಆದರೆ ಈ ಕುರಿತು ಯಾವುದೇ ಕ್ರಮಗಳನ್ನು ಕೂಡ ಸರ್ಕಾರ ತೆಗೆದುಕೊಂಡಿಲ್ಲ. ಇದಕ್ಕೆ ಸರ್ಕಾರ ಹಲವು ಕಾರಣಗಳನ್ನು ನೀಡುತ್ತಿದೆ.

ಹೌದು ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಆತಂಕಕಾರಿಯಾಗಿ ಹಬ್ಬುತ್ತಿದೆ. ಸೋಂಕಿತರಿಗೆ ಚಿಕಿತ್ಸೆ ಕೊಡುವುದು ಕೂಡ ಆಡಳಿತ ಯಂತ್ರಕ್ಕೆ ಸಾಧ್ಯವಾಗುತ್ತಿಲ್ಲ. ಸೋಂಕಿನಿಂದ ಬಳಲುತ್ತಿರುವವರು ಚಿಕಿತ್ಸೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆಯುವುದು ತಪ್ಪಿಲ್ಲ. ಬಿಬಿಎಂಪಿ ವಾರ್‌ ರೂಂನಲ್ಲಿ ಎಲ್ಲ ಆಸ್ಪತ್ರೆಗಳ ಸಮಗ್ರ ದತ್ತಾಂಶ ಸಿಗುವಂಹತ ವ್ಯವಸ್ಥೆಯನ್ನು ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಟ್ಟು ದಿನಗಳೇ ಕಳೆದರೂ ಇನ್ನೂ ಕೂಡ ಆ ವ್ಯವಸ್ಥೆ ಆಗಿಲ್ಲ.. ಬಿಬಿಎಂಪಿ ಕೋವಿಡ್-19 ವಾರ್‌ರೂಂನಲ್ಲಿ ಎಲ್ಲ ಆಸ್ಪತ್ರೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್ಸ್‌, ಬೆಡ್‌ಗಳು ಹಾಗೂ ಐಸಿಯುಗಳ ಮಾಹಿತಿ ಒಂದೆಡೆ ಸಿಗುವಂತೆ ಮಾಡುವುದಾಗಿ ಸರ್ಕಾರ ಭರವಸೆ ಕೊಟ್ಟಿತ್ತು. ಇದರಿಂದ ಸೋಂಕಿತರಿಗೆ ವಿಳಂಬವಿಲ್ಲದೆ ಚಿಕಿತ್ಸೆ ಸಿಗುತ್ತದೆ ಎನ್ನಲಾಗಿತ್ತು.

 

ಬೆಂಗಳೂರು ಕೋವಿಡ್ ಉಸ್ತುವಾರಿಯೂ ಆಗಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರ ಸುಪರ್ದಿಯಲ್ಲಿ ಕೆಲಸ ನಡೆಯುತ್ತಿದೆ. ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣದ ಜವಾಬ್ದಾರಿಯನ್ನು ಡಾ. ಸುಧಾಕರ್ ಹೊತ್ತುಕೊಂಡಿದ್ದಾರೆ. ಆದರೆ ಸೋಂಕಿತರಿಗೆ ತುರ್ತು ಚಿಕಿತ್ಸೆ ಕೊಡಲು ಮಾಡಿಕೊಳ್ಳಬೇಕಾಗಿರುವ ಸಿದ್ಧತೆಗಳು ಮಾತ್ರ ವಿಳಂಬವಾಗುತ್ತಿವೆ. ಬೆಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ಮಾಡಿಕೊಂಡಿರುವ ಸಿದ್ಧತೆಯನ್ನು, ಲಭ್ಯವಿರುವ ವೆಂಟಿಲೇಟರ್ಸ್‌, ಬೆಡ್‌ಗಳ ಮಾಹಿತಿಯನ್ನು ಸಾರ್ವಜನಿಕವಾಗಿ ಬಿಡುಗಡೆ ಮಾಡುವಂತೆ ಹೈಕೋರ್ಟ್‌ ಕೂಡ ಸರ್ಕಾರಕ್ಕೆ ಸೂಚಿಸಿತ್ತು. ಆದರೂ ಕೂಡ ಇನ್ನೂ ಆ ವ್ಯವಸ್ಥೆ ಆಗಿಲ್ಲ.

 

ಬಿಬಿಎಂಪಿ ಕೋವಿಡ್-19 ವಾರ್‌ ರೂಂ ಉಸ್ತುವಾರಿ ಹೆಫ್ಸಿಬಾ ರಾಣಿ ಕೊರ್ಲಪತಿ ಅವರು, ವೆಬ್‌ಸೈಟ್ ಸಾರ್ವಜನಿಕರಿಗೆ ನೇರವಾಗಿ ಸಿಗುವಂತಾಗಲು ಇನ್ನೂ ಸ್ವಲ್ಪ ಸಮಯ ಬೇಕು ಎಂದು ಮಾಹಿತಿ ಕೊಟ್ಟಿದ್ದಾರೆ. ವೆಬ್‌ಸೈಟ್ ಅನ್ನು ಭಾಗಶಃ ಸಿದ್ಧಪಡಿಸಿದ್ದೇವೆ. ಬಿಬಿಎಂಪಿ ವಲಯ ಮಟ್ಟದಲ್ಲಿ ಸದ್ಯ ನಾವು ಇದನ್ನು ಬಳಸುತ್ತಿದ್ದೇವೆ. ವೆಬ್‌ಸೈಟ್ ಪೂರ್ಣಪ್ರಮಾಣದಲ್ಲಿ 3-4 ದಿನಗಳ ಹಿಂದೆ ನೇರ ಪ್ರಸಾರಕ್ಕೆ ಸಿದ್ಧವಾಗಿದೆ. ಆದರೆ ಸಾರ್ವಜನಿಕವಾಗಿ ಲಭ್ಯವಾಗಲು ಸ್ವಲ್ಪ ಕಾಲಾವಕಾಶ ಬೇಕು ಎಂದಿದ್ದಾರೆ.

 

 

Find out more: