ಕೊರೋನಾ ವೈರಸ್ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಪ್ರತಿನಿತ್ಯ ಕೊರೋನಾ ವೈರಸ್ ಬೆಂಗಳೂರಿನಲ್ಲಿ ಪ್ರತಿನಿತ್ಯ ಸಾವಿರದ ಗಡಿಯನ್ನು ದಾಟುತ್ತಿದೆ ಇದರಿಂದಾಗಿ ಬೆಂಗಳೂರಿನ ಜನ ಭಯ ಭೀತರಾಗಿದ್ದಾರೆ. ಇದನ್ನು ತಡೆಯುವ ಉದ್ದೇಶದಿಂದ ಹೀಗಾಗಲೇ ಸಾಕಷ್ಟು ಬಾರಿ ಲಾಕ್ ಡೌನ್ ಮಾಡುವುದರ ಬಗ್ಗೆ ಚರ್ಚೆಗಳಾಗಿದ್ದರೂ ಕೂಡ ಇವುಗಳನ್ನು ಮೂಲೆಗುಂಪು ಮಾಡಲಾಗಿತ್ತು ಆದರೆ ಇಂದು ಕೊರೋನಾ ವೈರಸ್ ಬೆಂಗಳೂರಿನಲ್ಲಿ ಸಾವಿರದ ಗಡಿಯನ್ನು ದಾಟಿರುವುದರಿಂದ ಅನಿವಾರ್ಯವಾಗಿ ಬೆಂಗಳೂರನ್ನು ಲಾಕ್ ಡೌನ್ ಮಾಡುವುದರ ಬಗ್ಗೆ ತೀರ್ಮಾನಿಸಲಾಗಿದೆ.
ಹೌದು ರಾಜ್ಯರಾಜಧಾನಿಯಲ್ಲಿ ಲಾಕ್ಡೌನ್ ಘೋಷಣೆಗೆ ಹಿಂದೇಟು ಹಾಕುತ್ತಿದ್ದ ಸರ್ಕಾರ ಕೊನೆಗೂ ತಜ್ಞರ ಸಲಹೆಗೆ ತಲೆ ಬಾಗಿದ್ದು, ಜು.14ರ ರಾತ್ರಿಯಿಂದಲೇ ಒಂದು ವಾರ ಬೆಂಗಳೂರು ನಗರ ಮತ್ತು ಬೆಂ. ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ಡೌನ್ ಜಾರಿ ಮಾಡುವುದಾಗಿ ಘೋಷಿಸಿದೆ.
ಬೆಂಗಳೂರಿನಲ್ಲಿ ಕೊರೊನಾ ವೈರಸ್ ನಿಯಂತ್ರಣ ತಪ್ಪಿರುವ ಹಿನ್ನೆಲೆ ಒಂದು ವಾರ ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದೆ.
14.07.2020ರ ಮಂಗಳವಾರ ರಾತ್ರಿ 8.00 ಗಂಟೆಯಿಂದ ಏಳು ದಿನಗಳ ಕಾಲ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿಯಲ್ಲಿರುತ್ತೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವಿಟ್ಟರ್‌ನಲ್ಲಿ ಖಚಿತಪಡಿಸಿದ್ದಾರೆ..
ಈ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷದಿ ಮೊದಲಾದ ದಿನಬಳಕೆಯ ಅಗತ್ಯ ವಸ್ತುಗಳು ಲಭ್ಯವಿರುತ್ತವೆ. ಇದರ ಜೊತೆ ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳು ನಡೆಯಲಿವೆ.
ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಪಾಲಿಸಿ, ಮಾಸ್ಕ್ ಧರಿಸಿ, ಸರ್ಕಾರ ಹೊರಡಿಸುವ ಲಾಕ್ ಡೌನ್ ಸಂಬಂಧಿತ ಎಲ್ಲಾ ಮಾರ್ಗಸೂಚಿಗಳನ್ನು ಪಾಲಿಸಿ ಸಹಕರಿಸಿ. ತಾವು ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕೋವಿಡ್-19ರ ನಿಯಂತ್ರಣಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದ್ದಾರೆ.
ಲಾಕ್ಡೌನ್ ಅವಧಿಯಲ್ಲಿ ಎಂದಿನಂತೆ ಆಸ್ಪತ್ರೆಗಳು, ದಿನಸಿ, ಹಾಲು, ಹಣ್ಣು, ತರಕಾರಿ, ಔಷಧ, ದಿನಬಳಕೆಯ ಅಗತ್ಯ ವಸ್ತು ಲಭ್ಯವಿರುತ್ತವೆ. ಈಗಾಗಲೇ ನಿಗದಿಯಾಗಿರುವ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪರೀಕ್ಷೆಗಳೂ ನಡೆಯಲಿವೆ. ವಿವರವಾದ ಮಾರ್ಗಸೂಚಿಗಳನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.
ದಿನಬಳಕೆ ವಸ್ತುಗಳ ಖರೀದಿಗೆ ತೆರಳುವಾಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವಿಕೆ, ಸರ್ಕಾರ ಹೊರಡಿಸುವ ಲಾಕ್ಡೌನ್ ಸಂಬಂಧಿತ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಸಿಎಂ ಮನವಿ ಮಾಡಿದ್ದಾರೆ. ಲಾಕ್‍ಡೌನ್ ಸಂದರ್ಭದಲ್ಲಿ ಮನೆಯಲ್ಲೇ ಇರುವ ಮೂಲಕ ಕರೊನಾ ನಿಯಂತ್ರಿಸುವ ಕಾರ್ಯದಲ್ಲಿ ಕೈ ಜೋಡಿಸಿ ಎಂದು ಸಾರ್ವಜನಿಕರಲ್ಲಿ ಕೋರಿದ್ದಾರೆ.
ಕೋವಿಡ್ ಸೋಂಕು ಮಣಿಸುವ ಹೋರಾಟದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರು, ವೈದ್ಯಕೀಯ, ಪೊಲೀಸ್ ಸಿಬ್ಬಂದಿ ಹಾಗೂ ಎಲ್ಲ ಅಧಿಕಾರಿಗಳು, ಸ್ವಯಂ ಸೇವಕರು, ಪತ್ರಕರ್ತರಿಗೆ ಇದೇ ವೇಳೆ ಅಭಿನಂದನೆ ಸಲ್ಲಿಸಿದ್ದಾರೆ.