ಕೊರೋನಾ ವೈರಸ್ ರಾಜ್ಯದಲ್ಲಿ ಕಳೆದೆರಡು ದಿನಗಳಿಂದ 9 ಸಾವಿರದ ಗಡಿಯನ್ನು ದಾಟುತ್ತಿದ್ದ ಕೊರೋನಾ ವೈರಸ್ ಇಂದು ಗಣನೀಯವಾಗಿ ಇಳಿಕೆಯನ್ನು ಕಂಡಿದೆ. ಇದರ ಜೊತೆಗೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಚೇತರಿಸಿಕೊಂಡವರ ಸಂಖ್ಯೆಯೂ ಕೂಡ ಹೆಚ್ಚಾಗಿದೆ. ಅಷ್ಟಲಕ್ಕೂ ಇಂದು ದಾಖಲಾದ ಕೊರೋನಾ ಸೋಂಕಿನ ಸಂಖ್ಯೆ ಎಷ್ಟು ಗೊತ್ತಾ..?  


 

ರವಿವಾರ ಸಾಯಂಕಾಲದಿಂದ ಸೋಮವಾರ ಸಾಯಂಕಾಲದವರೆಗಿನ ಕೋವಿಡ್ 19 ಸೋಂಕು ಪ್ರಕರಣಗಳ ವರದಿಯ ಪ್ರಕಾರ, ಈ 24 ಗಂಟೆಗಳ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 6495 ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿವೆ.




ಈ ನಿರ್ಧಿಷ್ಟ ಅವಧಿಯಲ್ಲಿ ರಾಜ್ಯದಲ್ಲಿ ಒಟ್ಟು 7238 ಸೋಂಕಿತರು ಗುಣಮುಖರಾಗಿದ್ದಾರೆ. ಮತ್ತು ಈ ಅವಧಿಯಲ್ಲಿ 113 ಸೋಂಕಿತರು ಮೃತಪಟ್ಟಿದ್ದಾರೆ. ಇದೀಗ ರಾಜ್ಯದಲ್ಲಿ ಒಟ್ಟು ಕೋವಿಡ್ 19 ಸೋಂಕಿತರ ಸಂಖ್ಯೆ ಮೂರುವರೆ ಲಕ್ಷದ ಸಮೀಪದಲ್ಲಿದೆ. ನಮ್ಮಲ್ಲಿ ಸದ್ಯಕ್ಕೆ ಒಟ್ಟು 3,42,423 ಸೋಂಕು ಪ್ರಕರಣಗಳು ದಾಖಲಾಗಿವೆ. ಈ ನಡುವೆ ಸೋಂಕಿತರ ಚೇತರಿಕೆ ಸಂಖ್ಯೆಯೂ 2.5ಲಕ್ಷದ ಸನಿಹಕ್ಕೆ ತಲುಪಿರುವುದು ಆಶಾದಾಯಕ ವಿಷಯವಾಗಿದೆ. ರಾಜ್ಯದಲ್ಲಿ ಇದೀಗ ಒಟ್ಟು 2,49,467 ಕೋವಿಡ್ ಸೊಂಕಿತರು ಚೇತರಿಸಿಕೊಂಡಿದ್ದಾರೆ ಮತ್ತು ಒಟ್ಟು 87,235 ಸಕ್ರಿಯ ಸೋಂಕು ಪ್ರಕರಣಗಳಿವೆ.




ಹಾಗೂ ರಾಜ್ಯದಲ್ಲಿ ಕೋವಿಡ್ 19 ಸೊಂಕು ಸಂಬಂಧಿ ಒಟ್ಟು 5702 ಸಾವಿನ ಪ್ರಕರಣಗಳು ದಾಖಲಾಗಿವೆ ಹಾಗೂ 19 ಜನ ಕೋವಿಡ್ 19 ಸೋಂಕಿತರು ಅನ್ಯ ಕಾರಣದಿಂದ ಮೃತಪಟ್ಟಿದ್ದಾರೆ. 747 ಸೋಂಕಿತರು ತುರ್ತು ನಿಗಾ ಘಟಕದಲ್ಲಿ ದಾಖಲುಗೊಂಡು ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಈ ಅವಧಿಯಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ 1862 ಕೋವಿಡ್ 19 ಸೊಂಕು ಪ್ರಕರಣಗಳು ವರದಿಯಾಗುವ ಮೂಲಕ ಸೋಂಕು ಪ್ರಕರಣಗಳಲ್ಲಿ ರಾಜ್ಯದಲ್ಲೇ ಮೊದಲ ಸ್ಥಾನದಲ್ಲಿದೆ.




ಇನ್ನುಳಿದಂತೆ, ಮೈಸೂರು (405), ಬಳ್ಳಾರಿ (365), ದಾವಣಗೆರೆ (257), ಹಾಸನ (217), ಶಿವಮೊಗ್ಗ (168), ಬೆಳಗಾವಿ (154), ದಕ್ಷಿಣ ಕನ್ನಡ (270), ರಾಯಚೂರು (140), ಧಾರವಾಡ (279), ಕಲಬುರಗಿ (161), ಚಿಕ್ಕಮಗಳೂರು (100), ಉಡುಪಿ (83), ಮಂಡ್ಯ (159), ಚಿತ್ರದುರ್ಗ (286), ಉತ್ತರ ಕನ್ನಡ (86), ಕೊಪ್ಪಳ (200), ತುಮಕೂರು (316), ವಿಜಯಪುರ (84), ಬಾಗಲಕೋಟೆ (172), ಹಾವೇರಿ (63), ಗದಗ (178), ಚಿಕ್ಕಬಳ್ಳಾಪುರ (68), ಕೋಲಾರ (60), ರಾಮನಗರ (69), ಯಾದಗಿರಿ (122), ಬೀದರ್ (30), ಚಾಮರಾಜನಗರ (51), ಕೊಡಗು (17) ಮತ್ತು ಬೆಂಗಳೂರು ಗ್ರಾಮಾಂತರ (73) ಸೇರಿದಂತೆ ರಾಜ್ಯದ ಒಟ್ಟು 30 ಜಿಲ್ಲೆಗಳಲ್ಲಿ ಇಂದು ಮೂರಂಕಿ ಹಾಗೂ ಎರಡಂಕಿಯ ಕೋವಿಡ್ 19 ಸೋಂಕಿನ ಪ್ರಕರಣಗಳು ವರದಿಯಾಗಿವೆ.




ಇಂದು ರಾಜ್ಯದಲ್ಲಿ ಒಟ್ಟು 13,056 Rapid ಆಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ ಹಾಗೂ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 30,076 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲ್ಲಿ ನಡೆಸಲಾಗಿದೆ. ಈ ಮೂಲಕ ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 43,132 ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ.




ರಾಜ್ಯದಲ್ಲಿ ಇದುವರೆಗೆ ಒಟ್ಟು 8,40,955 Rapid ಆಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದೆ. ಇದನ್ನು ಹೊರತಾಗಿಸಿ ರಾಜ್ಯಾದ್ಯಂತ 20,54,852 ಜನರಿಗೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ. ಮತ್ತು ಈ ಎಲ್ಲಾ ವಿಧಾನಗಳ ಮೂಲಕ ರಾಜ್ಯದಲ್ಲಿ ಇಂದಿನವರೆಗೆ ಒಟ್ಟು 28,95,807 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

Find out more: