ಭಾರತದಲ್ಲಿಕೊರೊನಾ ಸೋಂಕು ಮತ್ತುಸಾವು ಪ್ರಕರಣಗಳಲ್ಲಿ ನಿರಂತರ ಹೆಚ್ಚಳ ಕಂಡುಬರುತ್ತಿರುವಗಂಡಾಂತರಕಾರಿಸಂಗತಿಯ ನಡುವೆಯೇ ರೋಗಿಗಳ ಚೇತರಿಕೆ ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು ರಿಕವರಿ ರೇಟ್‍ನಲ್ಲಿ ದೇಶವು ಅಗ್ರ ಸ್ಥಾನದಲ್ಲಿದೆ.
ದೇಶದಲ್ಲಿ ಈವರೆಗೆ 38.59 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದು, ಗುಣಮುಖ ಪ್ರಮಾಣ 78.28ರಷ್ಟು ಏರಿಕೆಯಾಗಿದೆ. ಇದು ವಿಶ್ವದಅತ್ಯಂತ ಗರಿಷ್ಠ ಪ್ರಮಾಣದ ಚೇತರಿಕೆ ಪ್ರಮಾಣವಾಗಿದೆ ಎಂದು ಅಂಕಿ ಅಂಶಗಳು ಹೇಳಿವೆ. ಚೇತರಿಕೆ ಪ್ರಮಾಣದಲ್ಲಿ ಭಾರತವು ಅಮೆರಿಕವನ್ನು ಹಿಂದಿಕ್ಕಿದೆ.
ಜಗತ್ತಿನ ಕೋವಿಡ್ ಹಾವಳಿ ಪೀಡಿತ ರಾಷ್ಟ್ರಗಳಲ್ಲಿ ಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಹೆಮ್ಮಾರಿಯ ಆರ್ಭಟ ಏರುಗತಿಯಲ್ಲಿಯೇ ಇದೆ. ಆದಾಗ್ಯೂ, ನಿನ್ನೆ ಪಾಸಿಟಿವ್ ಪ್ರಕರಣಗಳಲ್ಲಿ ಕೊಂಚ ಇಳಿಕೆ ಕಂಡುಬಂದಿರುವುದು ತುಸು ಸಮಾಧಾನಕರ ಸಂಗತಿಯಾಗಿದೆ.
ಇಂದು ಬೆಳಗ್ಗೆ 8 ಗಂಟೆಗೆಕೊನೆಗೊಂಡ 24 ತಾಸುಗಳ ಅವಯಲ್ಲಿ 83,809 ಸೋಂಕು ಪ್ರಕರಣಗಳು ದಾಖಲಾಗಿದೆ. ಮೊನ್ನೆಯುಕೂಡ ಪಾಸಿಟಿವ್ ಕೇಸ್‍ನಲ್ಲಿ ಅಲ್ಪ ಇಳಿಕೆ ಕಂಡುಬಂದಿತ್ತು. ದೇಶಲ್ಲೀಗ ಸೋಂಕಿತರ ಸಂಖ್ಯೆ50 ಲಕ್ಷ ಸನಿಹದಲ್ಲಿದೆ.24 ತಾಸುಗಳ ಅವಯಲ್ಲಿ 1,054ರೋಗಿಗಳನ್ನು ಕೊರೊನಾ ಮಹಾಮಾರಿ ಬಲಿ ತೆಗೆದುಕೊಂಡಿದೆ. ಸತತಹತ್ತನೇ ದಿನ 1,000ಕ್ಕೂ ಹೆಚ್ಚು ಸಾವು ಸಂಭವಿಸಿದೆ. ಇದರೊಂದಿಗೆ ದೇಶದಲ್ಲಿ ಮೃತರ ಸಂಖ್ಯೆ 80,776 ದಾಟಿದೆ.
ಭಾರತದಲ್ಲಿ 14 ದಿನಗಳಿಂದಲೂ ಸರಾಸರಿ 90,000 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ನಿನ್ನೆ83,809 ಸೋಂಕು ಪ್ರಕರಣಗಳೊಂದಿಗೆ. ಒಟ್ಟು ರೋಗಿಗಳ ಸಂಖ್ಯೆ 49, 30, 236 ಕ್ಕೇರಿದ್ದು, 50 ಲಕ್ಷ ಮೀರುವ ಸಾಧ್ಯತೆ ಇದೆ. ಆಗಸ್ಟ್ 7ರಂದು 20 ಲಕ್ಷ ಇದ್ದ ಪಾಸಿಟಿವ್ ಪ್ರಕರಣಗಳು ಆ.23ಕ್ಕೆ 30 ಲಕ್ಷಕ್ಕೇರಿತ್ತು.ನಂತರ ಸೆಪ್ಟೆಂಬರ್ 5ರಂದು 40 ಲಕ್ಷದಾಟಿತ್ತು.
ಇದರ ನಡುವೆಯೂ ಚೇತರಿಕೆ ಪ್ರಮಾಣದಲ್ಲಿ ಶೇ.78.28ರಷ್ಟು ವೃದ್ದಿ ಕಂಡುಬಂದಿದ್ದು, ಈ ವರೆಗೆ ದೇಶದಲ್ಲಿ ಸುಮಾರು 5.83ಕೋಟಿಜನರ ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಒಂದೆಡೆ ಚೇತರಿಕೆ ಣಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ 9.90ಲಕ್ಷಸಕ್ರಿಯ ಪ್ರಕರಣಗಳ ಹೆಚ್ಚಳವೂ ಸಹ ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆಯೂ ಸುಮಾರು38.59ಲಕ್ಷ ಮಂದಿ ಹೆಮ್ಮಾರಿಯ ಬಿಗಿಹಿಡಿತದಿಂದ ಪಾರಾಗಿದ್ದಾರೆ.
ದೇಶದಲ್ಲಿ ಈಗ 9,90,061ಆಕ್ಟಿವ್ ಕೇಸ್‍ಗಳಿವೆ. ಸಕ್ರಿಯ ಪ್ರಕರಣಗಳಿಗೆ ಗಳಿಗೆ ಹೋಲಿಸಿದಲ್ಲಿ, ರಿಕವರಿರೇಟ್‍ನಲ್ಲಿ ನಾಲ್ಕು ಪಟ್ಟುಗಳಷ್ಟು ಹೆಚ್ಚಳ ಕಂಡುಬಂದಿರುವುದು ಸಮಾಧಾನಕರ ಸಂಗತಿ. ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆ.
ದೇಶದಾದ್ಯಂತ ನಿನ್ನೆಒಂದೇ ದಿನ 10.73 ಲಕ್ಷಕ್ಕೂ ಹೆಚ್ಚುಜನರ ಸ್ಯಾಂಪಲ್‍ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ5.83 ಕೋಟಿಗೂ ಅಕಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.