ರಾಜ್ಯದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 484990ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ 9725 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ. ಕರ್ನಾಟಕದಲ್ಲಿ ಒಂದೇ ದಿನ ಕೊರೊನಾವೈರಸ್ ಸೋಂಕಿಗೆ 70 ಜನರು ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 7536ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತ ಪ್ರಕರಣ ಸಂಬಂಧ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಕೊರೊನಾವೈರಸ್ ಒಟ್ಟು 484990 ಸೋಂಕಿತ ಪ್ರಕರಣಗಳ ಪೈಕಿ 375809 ಸೋಂಕಿತರು ಗುಣಮುಖರಾಗಿದ್ದಾರೆ. 101626 ಸಕ್ರಿಯ ಪ್ರಕರಣಗಳಿವೆ ಎಂದು ತಿಳಿದು ಬಂದಿದೆ. ಕಳೆದ 24 ಗಂಟೆಗಳಲ್ಲಿ 6583 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕರ್ನಾಟಕದ ಯಾವ ಜಿಲ್ಲೆಗಳಲ್ಲಿ ಎಷ್ಟು ಕೊರೊನಾವೈರಸ್ ಕೇಸ್?:
ರಾಜ್ಯದಲ್ಲಿ ಒಟ್ಟು 9725 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 158, ಬಳ್ಳಾರಿ 381, ಬೆಳಗಾವಿ 258, ಬೆಂಗಳೂರು ಗ್ರಾಮಾಂತರ 168, ಬೆಂಗಳೂರು 3571, ಬೀದರ್ 52, ಚಾಮರಾಜನಗರ 65, ಚಿಕ್ಕಬಳ್ಳಾಪುರ 149, ಚಿಕ್ಕಮಗಳೂರು 171, ಚಿತ್ರದುರ್ಗ 227, ದಕ್ಷಿಣ ಕನ್ನಡ 466, ದಾವಣಗೆರೆ 213, ಧಾರವಾಡ 246, ಗದಗ 108, ಹಾಸನ 308, ಹಾವೇರಿ 81, ಕಲಬುರಗಿ 221, ಕೊಡಗು 41, ಕೋಲಾರ 101, ಕೊಪ್ಪಳ 152, ಮಂಡ್ಯ 182, ಮೈಸೂರು 748, ರಾಯಚೂರು 193, ರಾಮನಗರ 62, ಶಿವಮೊಗ್ಗ 293, ತುಮಕೂರು 401, ಉಡುಪಿ 191, ಉತ್ತರ ಕನ್ನಡ 294, ವಿಜಯಪುರ 115, ಯಾದಗಿರಿ 109 ಸೋಂಕಿತರ ಪ್ರಕರಣಗಳು ಪತ್ತೆಯಾಗಿವೆ