ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ಹೋರಾಟ ಇಂದು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಇಂದು ಬೆಳಗ್ಗೆಯಿಂದಲೇ ರಸ್ತೆಗಿಳಿದಿದ್ದ ರೈತ ಮತ್ತು ಕನ್ನಡ ಪರ ಸಂಘಟನೆಗಳು ರಾಜ್ಯ ಮತ್ತು ಕೇಂದ್ರ ಸರ್ಕಾರದ ರೈತ ವಿರೋಧಿ ನೀತಿಗಳನ್ನು ಹಿಪಡೆಯುವಂತೆ ಮುಗಿಬಿದ್ದಿದ್ದರು.





 ಹೌದು ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ವಿರೋಧಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಸಾ ರಾ ಗೋವಿಂದ್ ಸೇರಿದಂತೆ ಆನೇಕ ಮಂದಿ ಹೋರಾಟಗಾರರು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಅತ್ತಿಬೆಲೆ ಗಡಿಯಲ್ಲಿ ಚನಕೆ ಚಳುವಳಿ ಮತ್ತು ಹೆದ್ದಾರಿ ಬಂದ್ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಅತ್ತಿಬೆಲೆ ವೃತ್ತದಿಂದ ಗಡಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಾಟಾಳ್ ನಾಗರಾಜ್ ಮತ್ತು ನೂರಾರು ಕನ್ನಡಪರ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.





 
"ಸಿಎಂ ಯಡಿಯೂರಪ್ಪನವರು ಹಸಿರು ಶಾಲು ಹಾಕಿ ಪ್ರಮಾಣವಚನ ಸ್ವೀಕರಿಸಿದ್ದರು. ರೈತರ ಹೆಸರಿನಲ್ಲಿ ಅಧಿಕಾರಕ್ಕೆ ಬಂದವರು. ಆದರೆ, ಇದೀಗ ರೈತರನ್ನು ಕೊಚ್ಚೆ ಗುಂಡಿಯಲ್ಲಿ ಹಾಕಿ ತುಳಿಯುತ್ತಿದ್ದಾರೆ. ಒಂದು ಕಡೆ ಕೊರೊನಾ ಜನಸಾಮಾನ್ಯರನ್ನು ಕಾಡುತ್ತಿದೆ. ಜನರಿಗೆ ಸೂಕ್ತ ಚಿಕಿತ್ಸೆ ದೊರೆಯುತ್ತಿಲ್ಲ. ಆದ್ರೆ ಸರ್ಕಾರ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಹಾಗಾಗಿ ಕೂಡಲೇ ರೈತ ಮತ್ತು ಜನ ವಿರೋಧಿ ಎಪಿಎಂಸಿ ಮತ್ತು ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಹಿಂಪಡೆಯಬೇಕು. ಇಲ್ಲವಾದರೆ ಸಿಎಂ ಮತ್ತು ಸಚಿವ ಸಂಪುಟ ರಾಜೀನಾಮೆ ನೀಡಬೇಕು. ಒಂದು ವೇಳೆ ಹಿಂಪಡೆಯದಿದ್ದರೆ 28 ರಂದು ಕರ್ನಾಟಕ ಬಂದ್ ನಡೆಸುವುದಾಗಿ" ವಾಟಾಳ್ ನಾಗರಾಜ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.






 "ರೈತ ವಿರೋಧಿ ನೀತಿಗಳನ್ನು ಸುಗ್ರೀವಾಜ್ಞೆ ಮೂಲಕ ತರಲು ಹೊರಟಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಮ್ಮ ಹೋರಾಟ. ದೇಶದ ಬೆನ್ನೆಲುಬಾದ ರೈತನನ್ನು ಕೊಲ್ಲುವಂತಹ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡುತ್ತಿವೆ. ಇದನ್ನು ತಡೆಯಲು ಎಲ್ಲಾ ರೈತ ಮತ್ತು ಕನ್ನಡ ಪರ ಸಂಘಟನೆಗಳು ಒಂದಾಗಿದ್ದು, ಕಾರ್ಮಿಕ ಮುಖಂಡರು ಸಹ ರೈತ ಪರ ಹೋರಾಟಕ್ಕೆ ಕೈ ಜೋಡಿಸಬೇಕು.
 


 
 
 ಬಹುರಾಷ್ಟ್ರೀಯ ಕಂಪನಿಗಳ ಒಲೈಕೆಗಾಗಿ ರೈತರನ್ನು ಹರಾಜು ಹಾಕಲಾಗುತ್ತಿದೆ. ರೈತ ಇದ್ದರೆ ನಾವು ರೈತರಿಲ್ಲದೆ ನಾವು ಬದಕಲು ಸಾದ್ಯವಿಲ್ಲ. ಹಾಗಾಗಿ ಕೂಡಲೇ ಸರ್ಕಾರ ವಿವಾ

Find out more: