ಕಿವೀಸ್ ವಿರುದ್ಧದ 4ನೇ ಪಂದ್ಯದ ನಿರ್ಣಾಯಕ ಕೊನೆ ಓವರ್ ನಲ್ಲಿ ಅದ್ಭುತ ಸ್ಪೆಲ್ ಮಾಡಿದ ಶಾರ್ದೂಲ್ ಪಂದ್ಯ ಟೈಯಾಗಿಸಿದ್ದರು. ಪ್ರಸ್ತುತ ಶದೂರ್ಲ್ ಟಾಪ್ ಬೌಲರ್. ಆದರೆ ಈ ಸ್ಥಾನಕ್ಕೆ ಬರೋಕೂ  ಮುಂಚೆ ಅವರು ಪಟ್ಟ ಕಷ್ಟ, ಶ್ರಮ, ನೋವು ಅವರ ಜೀವನ ಏನೂ ಗೊತ್ತಾ!? ಮುಂದೆ ಓದಿ.
 
ಮುಂಬೈನಲ್ಲಿ ಕ್ರಿಕೆಟ್ ಕಲಿಯುವುದಕ್ಕೆ ಪ್ರತೀ ದಿನ 115 ಕಿ.ಮೀ ಬರುತ್ತಿದ್ದ. ಎಂತೆಂಥ ಪ್ರಯಾಣಿಕರು. ಎಂತೆಂಥ ಮೂದಲಿಕೆ ಗೊತ್ತಾ? ಏನೋ ಡುಮ್ಮ, ಕ್ರಿಕೆಟ್ ಆಡ್ತೀಯೇನೋ? ಅಂತ ಒಬ್ಬ. ಟೈಂ ಪಾಸ್ ಮಾಡ್ತೀಯೇನೋ ಅಂತ ಇನ್ನೊಬ್ಬ. ಹುಡುಗ ಮನಸ್ಸಲ್ಲೇ ಇಂಡಿಯಾಗೆ ಆಡುತ್ತಿದ್ದ. ಆಡಿಕೊಳ್ಳುವವರು ಮಾತು ನಿಲ್ಲಿಸುತ್ತಿರಲಿಲ್ಲ. ಕ್ರಿಕೆಟ್ ಭಕ್ತನೇ‌ ಆಗಿದ್ದ ಶಾರ್ದೂಲ್, ವಿಚಲಿತನಾಗಿರಲಿಲ್ಲ. ಗುರಿ ಮುಟ್ಟಿದ್ದ.
 
ಚೆನ್ನಾಗಿ ಆಡಿದ್ದ ಹೊರತಾಗಿಯೂ ಶಾರ್ದೂಲ್ ಅಂಡರ್ 19 ಮುಂಬೈಗೆ ಸೆಲೆಕ್ಟ್ ಆಗಲ್ಲ. ಆದರೆ ಅವನ ಪ್ರಬುದ್ಧತೆ ಮತ್ತು ಯೋಚನಾ‌ ಲಹರಿ ಅಂಡರ್ -19 ಮೀರಿತ್ತು. ಅವನಿಗೆ ನಿತ್ಯ ಒಂದು ಸೋಲು ಬೇಕಿತ್ತು. ನಾಳೆ ಅದೇ ಸೋಲಿಗೆ ಮುಟ್ಟಿ ನೋಡಿಕೊಳ್ಳುವಂತ ಉತ್ತರ ಕೊಡುತ್ತಿದ್ದ. ಹೆಸರೇ ಶಾರ್ದೂಲ. ಡುಮ್ಮ ಎಂದವರಿಗೆ ದೇಹವನ್ನ ಹುರಿಗೊಳಿಸಿ ತೋರಿಸಿದ್ದ. ರೆಡ್ ಬಾಲ್‌ನಲ್ಲಿ ಚೆನ್ನಾಗಿ ಆಡ್ತಾನೆ. ವೈಟ್ ಬಾಲ್‌ನಲ್ಲಿ ಅಷ್ಟು ಬೌಲಿಂಗ್ ಬರಲ್ಲ ಅಂದಿದ್ದರು. ದಿನದ‌ ಎರಡುಭಾಗವನ್ನ ಕೆಂಪು ಮತ್ತು ಬಿಳಿ ಎಂದು ಎತ್ತಿಟ್ಟು, ಪಳಗಿದ್ದ.
 
ಮುಂಬೈನಲ್ಲಿ ಆಗಹೆಚ್ಚು ಟಿ-20 ಮ್ಯಾಚ್ ಗಳೇನೂ ನಡೆಯುತ್ತಿರಲಿಲ್ಲ. ಮ್ಯಾಚ್ ಇದ್ದರೂ ನಾಲ್ಕು ಓವರ್ ಮಾತ್ರ. ಅದೂ ರೆಡ್ ಬಾಲ್ನಲ್ಲಿ. ವಿಜಯ್ ಹಜಾರೆ ಮತ್ತು ಸಯ್ಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಾತ್ರ ಶಾರ್ದೂಲ್‌ಗೆ ವೈಟ್ ಬಾಲ್ ಸಿಗುತ್ತಿತ್ತು. ಬದುಕು ಹಾಗೆ ಕೆಲವು ತಿರುವುಗಳಲ್ಲಿ ಬೇಕೆಂದೇ‌ ದೇವರ ಪ್ರತಿಮೆ ನಿಲ್ಲಿಸಿರುತ್ತೆ. ಕೈ ಮುಗಿದು ಕೇಳಿರಬೇಕಷ್ಟೇ. ಇವತ್ತು ಡೆತ್ ಓವರ್ ಸ್ಪೆಷಲಿಸ್ಟ್ ಆಗಿ, ಆಲ್ ರೌಂಡರ್ ಆಗಿ ಶಾರ್ದೂಲ್ ಆಡುತ್ತಾನೆ. ಅವನಿಗೆ ಎಸೆಯಲು ಸಾಧ್ಯವಾಗುವುದೇ 137-138 ಕಿ.ಮೀ ವೇಗ. ಯುವಪ್ರತಿಭೆ ಮುಂದೆ ಮಿಂಚಿನ ವೇಗದಿಂದ ವಿಕೆಟ್ ಪಡೆಯಲಿ ಎಂಬುದೇ ಅಭಿಮಾನಿಗಳ ಆಶಯ.

Find out more: