ಬೆಂಗಳೂರು: ಕೋರೋನಾ ವೈರಸ್‌ನಿಂದ ಇಡೀ ದೇಶವೇ ಸೊರಗಿ ಹೋಗುತ್ತಿರುವ ಈ ಸಂದರ್ಭದಲ್ಲಿ ಕೊರೋನಾ ಸೋಂಕಿತರನ್ನು ಹುಡುಕುವುದೇ ಬಲು ದೊಡ್ಡ ಸಾಹಸವೆನಿಸಿದೆ ಆದರೆ ಈ ಸಾಹಸವನ್ನು ಕಡಿಮೆ ಮಾಡುವಂತಹ ಉದ್ದೇಶದಿಂದ ಕೇಂದ್ರ ಸರ್ಕಾರ ಒಂದು ಮೊಬೈಲ್ ಆಫ್ ಬಿಡುಗಡೆಯನ್ನು ಮಾಡಲಾಗಿದೆ. ಈ ಆಫ್ ಮೂಲಕ ಕೋವಿಡ್ ಸೋಂಕಿತರಿಗೆ ಯಾವೆಲ್ಲಾ ಅನುಕೂಲವಾಗಲಿದೆ ಎಂಬುದರ ಮಾಹಿತಿ ಇಲ್ಲಿದೆ

 

ಕೊರೊನಾವೈರಸ್ ವಿರುದ್ಧ ನಿರ್ಣಾಯಕ ಹೋರಾಟದಲ್ಲಿ ಸಾರ್ವಜನಿಕರ ಸಹಕಾರವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮತ್ತೊಮ್ಮೆ ಬಯಸಿವೆ. ಸೋಂಕಿತರ ಮೇಲೆ ನಿಗಾ ಇಡಲು ರಾಜ್ಯ ಸರ್ಕಾರ ಕೊರೊನಾ ವಾಚ್ ಆಪ್ ಬಿಡುಗಡೆ ಮಾಡಿತ್ತು. ಈಗ ಕೇಂದ್ರ ಸರ್ಕಾರವು ಆರೋಗ್ಯ ಆಪ್ ಹೊರ ತಂದಿದೆ.

 

ಕೊರೊನಾವೈರಸ್ ಸೋಂಕು, ಹೋಂ ಕ್ವಾರಂಟೈನ್ ಇರುವವರು ನಡೆದುಕೊಳ್ಳಬೇಕಾದ ರೀತಿ ನೀತಿ, ಲಾಕ್ಡೌನ್ ನಿಯಮದ ಬಗ್ಗೆ ಫೇಸ್ಬುಕ್, ವಾಟ್ಸಾಪ್, ಟೆಲಿಗ್ರಾಂ, ಇನ್ಸ್ಟಾಗ್ರಾಂ, ಟಿಕ್ ಟಾಕ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ. ಈಗ ಮತ್ತೊಂದು ಆಂಡ್ರಾಯ್ಡ್ ಆಪ್ ನಿಮ್ಮ ಮುಂದಿಡಲಾಗಿದೆ. ಈ ಮೂಲಕ ಸೋಂಕಿತ ವ್ಯಕ್ತಿಗಳನ್ನು ಟ್ರ್ಯಾಕ್ ಮಾಡಿ, ಆರೊಗ್ಯವಂತರಿಗೆ ರೋಗ ಹರಡದಂತೆ ತಡೆಗಟ್ಟಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ.

 

ಕೊರೊನಾ ಸೋಂಕಿತರ ಟ್ರ್ಯಾಕ್ ಮಾಡಲು Corona Watch App

 

 

ವಾಟ್ಸಾಪ್ ಹಾಗೂ ಫೇಸ್ಬುಕ್ ಮೆಸೇಂಜರ್ ಆಪ್ ಮೂಲಕ ರಿಯಲ್ ಟೈಂನಲ್ಲಿ ಚಾಟ್ ಬಾಟ್ ಬಳಸಿ ಮಾಹಿತಿ ಪಡೆಯುವ ಸೌಲಭ್ಯ ಸದ್ಯ ಬಳಕೆಯಲ್ಲಿದೆ. ಆಂಡ್ರಾಯ್ಡ್ ಅಪ್ಲಿಕೇಷನ್ ನಲ್ಲಿ ಅಪೋಲೋ ಆಸ್ಪತ್ರೆಯ ಎಐ ಆಧಾರಿತ ಚಾಟ್ ಬಾಟ್ ಮಾದರಿಯಲ್ಲಿ ಕನ್ನಡ ಭಾಷೆಯಲ್ಲೇಮಾಹಿತಿ ಹಾಗೂ ನೆರವು ಪಡೆದುಕೊಳ್ಳಬಹುದು.

 

ಈ ಆಪ್ ಮೂಲಕ ಕೊವಿಡ್೧೯ ಪಾಸಿಟಿವ್ ರೋಗಿಗಳ ಚಲನವಲನಗಳನ್ನು ರಿಯಲ್ ಟೈಮಲ್ಲಿ ಟ್ರ್ಯಾಕ್ ಮಾಡಬಹುದು. ಕೊರೊನಾ ಸೋಂಕಿತರು, ಹೋಂ ಕ್ವಾರಂಟೈನ್ ಆಗಿರುವವರು ಎಲ್ಲೆಲ್ಲಿದ್ದಾರೆ ಎಂದು ಗುರುತಿಸಬಹುದು. ಒಂದು ವೇಳೆ ಸೋಂಕಿತ ವ್ಯಕ್ತಿಯೇನಾದರೂ ಆರೋಗ್ಯವಂತರ ಬಳಿಗೆ(1 ಮೀಟರ್ ಅಂತರ) ಸುಳಿದರೆ ಅಲರ್ಟ್ ಒಡೆದುಕೊಳ್ಳುತ್ತದೆ.

 

ವಾಟ್ಸಾಪ್ನಲ್ಲಿ 'MyGov  ಕೊರೊನಾ ಸಹಾಯಕೇಂದ್ರ’ ಆರಂಭಿಸಿದ ಕೇಂದ್ರ ಸರ್ಕಾರ

 

ವೈದ್ಯಕೀಯ ನೆರವು ಪಡೆಯುವುದು ಎಲ್ಲಿ? ಕೈಗೆ ಕ್ವಾರಂಟೈನ್ ಸ್ಟ್ಯಾಂಪ್ ಇರುವವರು ಎಲ್ಲೆಂದರಲ್ಲಿ ಓಡಾಡುತ್ತಿದ್ದರೆ ಯಾರಿಗೆ ಕರೆ ಮಾಡಿ ತಿಳಿಸಬೇಕು ಎಂಬೆಲ್ಲ ಮಾಹಿತಿ ಈ ಆಪ್ ನಲ್ಲಿದೆ. ಗೂಗಲ್ ಪ್ಲೇಸ್ಟೋರಿನಲ್ಲಿ NIC eGov Mobile AppsTools ಅಭಿವೃದ್ಧಿಪಡಿಸಿರುವ Aarogya Setu ಆಪ್ ಮಾತ್ರ ಡೌನ್ಲೋಡ್ ಮಾಡಿಕೊಳ್ಳಿ.

 

ಕೊರೊನಾ ಕುರಿತ ಸಹಾಯವಾಣಿ

 

ಮೈಗೋವ್ ಕೊರೊನಾ ಸಹಾಯಕೇಂದ್ರ ವಾಟ್ಸಾಪ್ ಚಾಟ್ಬಾಟ್ ಬಿಟ್ಟು ಕೇಂದ್ರ ಸಹಾಯವಾಣಿ ಮತ್ತು ಆಯಾ ರಾಜ್ಯಗಳ ಸಹಾಯವಾಣಿ ಕೇಂದ್ರಗಳು ಕಾರ್ಯರೂಪದಲ್ಲಿದೆ ಸಹಾಯವಾಣಿ ಸಂಖ್ಯೆ + 91-11-23978046ಗೆ ಕರೆ ಮಾಡಿ ನೊವೆಲ್ ಕೊರೊನಾ ವೈರಾಣು ಕುರಿತ ಮಾಹಿತಿ, ಸಹಾಯವನ್ನು ಪಡೆದುಕೊಳ್ಳಬಹುದಾಗಿದೆ. Karnataka Health Dept - 080-46848600.  ರಾಜ್ಯ ಸಹಾಯವಾಣಿ - 104 Helpline - 080-6669200 ರಾಷ್ಟ್ರೀಯ ಸಹಾಯವಾಣಿ - 1075

source: oneindia.com

 

 

 

Find out more: